ಬಿ.ಜೆ.ಪಿ. & ಜೆ.ಡಿ.ಎಸ್.‌ ವಿಲೀನ ವಿವಾದ

ಜೆಡಿಎಸ್, ಬಿಜೆಪಿ ಜೊತೆ ವಿಲೀನವಾದರೆ ಆಶ್ಚರ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮುಂದಿನ ದಿನಗಳಲ್ಲಿ ಕೇಸರಿ ಪಕ್ಷದೊಂದಿಗೆ ವಿಲೀನಗೊಂಡರೂ ಆಶ್ಚರ್ಯವಿಲ್ಲ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

Siddaramaiah

ಬೆಂಗಳೂರು: ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮುಂದಿನ ದಿನಗಳಲ್ಲಿ ಕೇಸರಿ ಪಕ್ಷದೊಂದಿಗೆ ವಿಲೀನಗೊಂಡರೂ ಆಶ್ಚರ್ಯವಿಲ್ಲ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ಜೆಡಿಎಸ್ ಮಾಜಿ ಶಾಸಕರಾದ ಡಿಸಿ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ ಅವರು ಕಾಂಗ್ರೆಸ್ ಸೇರಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಜೆಡಿಎಸ್, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ “ಕೋಮುವಾದಿ” ಪಕ್ಷವಾಗಿದೆ. ಹೀಗಾಗಿ ಅದರ ಹೆಸರಿನಿಂದ ‘ಸೆಕ್ಯುಲರ್’ ಪದವನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದರು.

“ಮುಂದಿನ ದಿನಗಳಲ್ಲಿ ದೇಶದಲ್ಲಿ ರಾಜಕೀಯ ಧ್ರುವೀಕರಣ ಮತ್ತು ಮತಗಳ ಧ್ರುವೀಕರಣ ನಡೆಯಲಿದೆ, ಒಂದು ಕಡೆ ಕೋಮುವಾದಿ ಶಕ್ತಿಗಳು ಮತ್ತು ಇನ್ನೊಂದು ಕಡೆ ಜಾತ್ಯತೀತ ಶಕ್ತಿಗಳು. ಬಿಜೆಪಿ ಎಂದಿಗೂ ಹಿಂದುತ್ವ ಮತ್ತು ಹಿಂದೂ ರಾಷ್ಟ್ರ ರಚಿಸುವ ಅವರ ಯೋಜನೆಯಿಂದ ಹೊರಬರುವುದಿಲ್ಲ. ದೇವೇಗೌಡ ಮತ್ತು ಅವರ ಕುಟುಂಬವೂ ಬಿಜೆಪಿಯೊಂದಿಗೆ ಸೇರಿಕೊಂಡಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಜೆಡಿಎಸ್ ಒಂದು ರಾಜಕೀಯ ಪಕ್ಷವಲ್ಲ. ಅದು ದೇವೇಗೌಡ ಮತ್ತು ಅವರ ಕುಟುಂಬದ ಪಕ್ಷ. ನಾಳೆ ಜೆಡಿಎಸ್ ಬಿಜೆಪಿಯೊಂದಿಗೆ ವಿಲೀನವಾದರೆ ಆಶ್ಚರ್ಯವಿಲ್ಲ.. ದೇವೇಗೌಡರು ಇರುವವರೆಗೂ ಪ್ರತ್ಯೇಕ ರಾಜಕೀಯ ಪಕ್ಷವಾಗಿ ಉಳಿಯುತ್ತದೆ. ನಂತರ ಬಿಜೆಪಿಯೊಂದಿಗೆ ವಿಲೀನವಾಗುತ್ತದೆ ಎಂದರು.

ಬಿಜೆಪಿ ಅವರಿಗಿಂತ ಜೆಡಿಎಸ್ ಕುಮಾರಸ್ವಾಮಿನೇ ಹೆಚ್ಚು ಮಾತನಾಡ್ತಾರೆ. ಕುಮಾರಸ್ವಾಮಿನಾ ಬಿಜೆಪಿ ಅವರು ನಮ್ಮ ಮೇಲೆ ಛೂ ಬಿಟ್ಟಿದ್ದಾರೆ. ನೀವು ಏನೇ ಕುತಂತ್ರ ಮಾಡಿದರೂ ನಾವು ಚುನಾವಣೆಯಲ್ಲಿ ನಮ್ಮ ಗುರಿ ಸಾಧಿಸಿಯೇ ಸಾಧಿಸುತ್ತೇವೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *