ಮಲೆನಾಡು ಅಭಿವೃದ್ಧಿ ನಿಗಮಕ್ಕೆ ಭೀಮಣ್ಣ,ರಾ.ಕೈ.ಅ.ನಿ. ಕ್ಕೆ ಶೈಲ್‌ ಅಧ್ಯಕ್ಷರು?

ಡಿಸೆಂಬರ್‌ ಮೊದಲ ವಾರದಲ್ಲಿ ರಾಜ್ಯದ ಬಹುತೇಕ ನಿಗಮ, ಮಂಡಳಿಗಳ ಅಧ್ಯಕ್ಷರ ಆಯ್ಕೆ ಪ್ರಕ್ರೀಯೆ ಮುಗಿಯಲಿದ್ದು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಶಾಸಕ ಸತೀಶ್‌ ಶೈಲ್‌ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮ & ಶಾಸಕ ಭೀಮಣ್ಣ ನಾಯ್ಕ ಮಲೆನಾಡು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಲಿದ್ದಾರೆ ಎನ್ನಲಾಗಿದೆ.

ಮುಂದಿನ ವಾರ ನಿಗಮ ಮಂಡಳಿ ನೇಮಕಾತಿ ಅಂತಿಮ, ಪಟ್ಟಿ ಹೈಕಮಾಂಡ್ ಗೆ ರವಾನೆ: ಡಿಕೆಶಿ

ಮುಂದಿನ ವಾರ ಮತ್ತೊಂದು ಸುತ್ತಿನ ಚರ್ಚೆಯ ನಂತರ ಆಡಳಿತಾರೂಢ ಕಾಂಗ್ರೆಸ್ ವಿವಿಧ ನಿಗಮ ಮಂಡಳಿಗಳಿಗೆ ನೇಮಕಾತಿಯನ್ನು ಅಂತಿಮಗೊಳಿಸಲಿದೆ ಮತ್ತು ನಂತರ ಪಟ್ಟಿಯನ್ನು ಪಕ್ಷದ ವರಿಷ್ಠರಿಗೆ ಕಳುಹಿಸಲಾಗುವುದು ಎಂದು ಉಪ…

D K Shivakumar

ಬೆಂಗಳೂರು: ಮುಂದಿನ ವಾರ ಮತ್ತೊಂದು ಸುತ್ತಿನ ಚರ್ಚೆಯ ನಂತರ ಆಡಳಿತಾರೂಢ ಕಾಂಗ್ರೆಸ್ ವಿವಿಧ ನಿಗಮ ಮಂಡಳಿಗಳಿಗೆ ನೇಮಕಾತಿಯನ್ನು ಅಂತಿಮಗೊಳಿಸಲಿದೆ ಮತ್ತು ನಂತರ ಪಟ್ಟಿಯನ್ನು ಪಕ್ಷದ ವರಿಷ್ಠರಿಗೆ ಕಳುಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ. 

ನಿಗಮ ಮಂಡಳಿ ನೇಮಕಾತಿ ಸಂಬಂಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಂಗಳವಾರದಿಂದ ನಗರದಲ್ಲಿ ರಾಜ್ಯ ನಾಯರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ.

“ಇಂದು ಕೂಡ ಅವರು(ಸುರ್ಜೇವಾಲಾ) ಚರ್ಚೆ ನಡೆಸಿದ್ದಾರೆ. ನಮ್ಮಲ್ಲಿ ಕೆಲವು ನಾಯಕರು ಸಹ ಅವರೊಂದಿಗೆ ಮಾತನಾಡುತ್ತಿದ್ದಾರೆ. ನಾವು ಕೆಲವು ಹಿರಿಯ ನಾಯಕರು ಮತ್ತು ಶಾಸಕರ ಅಭಿಪ್ರಾಯವನ್ನು ಕೇಳಿದ್ದೇವೆ. ಅವರು ನವೆಂಬರ್ 28 ರಂದು ಮತ್ತೆ ಬರುತ್ತಿದ್ದಾರೆ. ಈ ಮಧ್ಯೆ, ಮುಖ್ಯಮಂತ್ರಿ (ಸಿದ್ದರಾಮಯ್ಯ) ಮತ್ತು ನಾನು ಚುನಾವಣಾ ಪ್ರಚಾರಕ್ಕಾಗಿ ತೆಲಂಗಾಣಕ್ಕೆ ಹೋಗುತ್ತಿದ್ದೇವೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್ ಅವರು ಹೇಳಿದ್ದಾರೆ.

ಚುನಾವಣಾ ಪ್ರಚಾರ ಮುಗಿಸಿ ಸುರ್ಜೇವಾಲಾ ಅವರು ನ.28ರಂದು ನಗರಕ್ಕೆ ವಾಪಸಾಗಲಿದ್ದು, ಬಳಿಕ ಪಟ್ಟಿಯನ್ನು ಅಂತಿಮಗೊಳಿಸಿ ದೆಹಲಿಗೆ ಕಳುಹಿಸಲಾಗುವುದು ಎಂದು ಡಿಸಿಎಂ ತಿಳಿಸಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಈಗಲೇ ನಿಗಮ ಮಂಡಳಿಗಳಿಗೆ ನೇಮಕಾತಿಯನ್ನು ಪೂರ್ಣಗೊಳಿಸಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಯಾವುದೇ ಅಸಮಾಧಾನ, ಅತೃಪ್ತಿಗೆ ಆಸ್ಪದ ನೀಡದಂತೆ ಎಚ್ಚರಿಕೆಯಿಂದ ಪಟ್ಟಿಯನ್ನು ಸಿದ್ದಗೊಳಿಸಲಾಗುತ್ತಿದೆ. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *