ಶಿರಸಿ- ಸಿದ್ದಾಪುರದ ವಿದ್ಯಾರ್ಥಿನಿಯರ ಸಾಧನೆ

ಸಾಧನಾ ಪ್ರಶಸ್ತಿ ಪಡೆದ ನಿತ್ಯಾ ಹೆಗಡೆ
ಸಿದ್ದಾಪುರ: ಇಲ್ಲಿನ ಹೆಗ್ಗರಣಿ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿ ನಿತ್ಯಾ ಉಮಾಕಾಂತ ಹೆಗಡೆ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ನೀಡುವ ರಾಜ್ಯ ಮಟ್ಟದ “ಸಾಧನಾ ಪ್ರಶಸ್ತಿ”ಯನ್ನು ಪಡೆದಿದ್ದಾಳೆ.
ಮಕ್ಕಳ ದಿನಾಚರಣೆಯ ಅಂಗವಾಗಿ ನ.25 ರಂದು ಬಾಗಲಕೋಟೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗಿದೆ. ಈಕೆ ಪ್ರಾಥಮಿಕ ಶಾಲೆಯ 5ನೇ ತರಗತಿಯಲ್ಲಿದ್ದಾಗ ಝೀ ಕನ್ನಡ ವಾಹಿನಿಯ ಡ್ರಾಮಾ ಜ್ಯೂನಿಯರ್ಸ್ ಶೋನಲ್ಲಿ ಭಾಗವಹಿಸಿ ಜನಮನ ಸೆಳೆದಿದ್ದಳು. ಶಾಲೆಯಲ್ಲಿ ನಡೆಯುವ ಪ್ರತಿಭಾ ಕಾರಂಜಿಯಂತಹ ಅನೇಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹಳ ಪ್ರಶಸ್ತಿಗಳನ್ನೂ ಪಡೆದಿದ್ದಾಳೆ. ಪ್ರೌಢಶಾಲೆಯ ಪ್ರತಿಭಾ ಕಾರಂಜಿಯಲ್ಲಿ ಕೋಲಾಟ ಮತ್ತು ಡೊಳ್ಳು ಕುಣಿತದ ಸ್ಪರ್ಧೆಗಳಲ್ಲಿ ಮುಂದಾಳುವಾಗಿ ಕಾಣಿಸಿಕೊಂಡು ತಂಡವನ್ನು ಮುನ್ನಡೆಸಿ ಶಾಲೆಗೆ ಪ್ರಥಮ ಸ್ಥಾನಗಳನ್ನು ದೊರಕಿಸಿಕೊಟ್ಟಿರುತ್ತಾಳೆ. ಈಕೆಯ ಬಹುಮುಖ ಪ್ರತಿಭೆಯನ್ನು ಗುರುತಿಸಿ ರಾಜ್ಯ ಮಟ್ಟದ ಮಕ್ಕಳ ಪ್ರತಿಭಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈಕೆ ಹೆಗ್ಗರಣಿ ಸಮೀಪದ ಹಳೆಹಳ್ಳದ ನಿವಾಸಿ ಉಮಾಕಾಂತ ಮತ್ತು ಆಶಾ ದಂಪತಿಗಳ ಪುತ್ರಿ.

ಶಿವಮೊಗ್ಗ ಜಿಲ್ಲೆಯ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ 14 ಮತ್ತು 17 ವಯೋಮಿತಿಯೊಳಗಿನ ಬಾಲಕ/ ಬಾಲಕಿಯರ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಬಾಲಕಿಯರ ಪ್ರಾಥಮಿಕ ವಿಭಾಗದಲ್ಲಿ ಸತತ ಐದು ರೌಂಡ್ ಗಳ ನಿರಂತರ ಜಯ ಸಾಧಿಸಿ 01 ಪಾಯಿಂಟ್ ವ್ಯತ್ಯಾಸದಲ್ಲಿ ತೃತೀಯ ಸ್ಥಾನ ಪಡೆದ ಶಿರಸಿ ಗಾಂಧಿನಗರದ ಹುಲಿಯಪ್ಪ ದೇವಸ್ಥಾನದಲ್ಲಿ ನಡೆಯುವ ಕರಾಟೆ ತರಬೇತಿ ಕೇಂದ್ರವಾದ ಚಾಂಪಿಯನ್ಸ್ ಡೊಜೊ ವಿದ್ಯಾರ್ಥಿನಿ ಸಾಧನ ಎಸ್ ಗೌಡ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *