ಮುಂಗಾರುಮಳೆ ಹುಡುಗಿಗೆ ಮದುವೆಯಂತೆ!

ಮಳೆ ಹುಡುಗಿಗೆ ಕೂಡಿ ಬಂದ ಕಂಕಣ ಭಾಗ್ಯ: ಪ್ರೀತಿಸಿದ ಯುವಕನ ಜೊತೆ ಹಸೆಮಣೆ ಏರಲಿದ್ದಾರೆ ಪೂಜಾಗಾಂಧಿ!

ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ಮದುವೆ ಆಗುತ್ತಿದ್ದಾರೆ. ತಾನು ಪ್ರೀತಿಸಿದ ಯುವಕನ ಜೊತೆಗೆ ಹಸೆಮಣೆ ಏರಲು ಮುಂದಾಗಿದ್ದಾರೆ.

pooja gandhi

ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ಮದುವೆ ಆಗುತ್ತಿದ್ದಾರೆ. ತಾನು ಪ್ರೀತಿಸಿದ ಯುವಕನ ಜೊತೆಗೆ ಹಸೆಮಣೆ ಏರಲು ಮುಂದಾಗಿದ್ದಾರೆ.

ಸಿನಿಮಾಗಳಲ್ಲಿ ನಟಿಸಿ ಕನ್ನಡಿಗರ ಮನಗೆದ್ದಿರುವ ನಟಿ ಪೂಜಾ ಗಾಂಧಿ, ಕನ್ನಡವನ್ನು ಕಲಿತು ಭೇಷ್ ಎನಿಸಿಕೊಂಡಿದ್ದಾರೆ. ಒಂದ್ ಟೈಮ್​ನಲ್ಲಿ ಕನ್ನಡದಲ್ಲಿ ಸಿಕ್ಕಾಪಟ್ಟೆ ಡಿಮ್ಯಾಂಡ್ ಹೆಚ್ಚಿಸಿಕೊಂಡಿದ್ದ ನಟಿಮಣಿ ಮತ್ತು ರಾಜಕಾರಣಕ್ಕೂ ಎಂಟ್ರಿ ಕೊಟ್ಟಿದ್ದರು. ಇದೀಗ ಕನ್ನಡಿಗನ ಕೈ ಹಿಡಿದು ಕರ್ನಾಟಕದ ಸೊಸೆ‌ ಆಗಲು ಉತ್ತರ ಭಾರತದ ಬೆಡಗಿ ಪೂಜಾ ಗಾಂಧಿ ಮುಂದಾಗಿದ್ದಾರೆ.

ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ಮದುವೆ ಆಗುತ್ತಿದ್ದಾರೆ ಎಂಬ ಬ್ರೇಕಿಂಗ್ ನ್ಯೂಸ್ ವೈರಲ್ ಆಗುತ್ತಿದೆ. ಹುಡುಗ ಬೆಂಗಳೂರಿನಲ್ಲಿ ಲಾಜೆಸ್ಟಿಕ್ ಕಂಪನಿ ಓನರ್ ವಿಜಯ್ ಎನ್ನಲಾಗಿದ್ದು, 29 ನವೆಂಬರ್ 2023ರಂದು ಬೆಂಗಳೂರಿನ ಯಲಹಂಕದಲ್ಲಿ ಮಂತ್ರ ಮಾಂಗಲ್ಯ ಪದ್ಧತಿಯಲ್ಲಿ ಮದುವೆ ನಡೆಯಲಿದೆ ಎನ್ನಲಾಗಿದೆ.

ವಿಜಯ್ ಅವರೇ ಪೂಜಾ ಗಾಂಧಿಯವರಿಗೆ ಕನ್ನಡ ಕಲಿಸಿದ್ದು ಎಂಬ ಮಾಹಿತಿಯೂ ಲಭ್ಯವಾಗಿದೆ. ಕನ್ನಡದಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿ ಕನ್ನಡಿಗರ ಮನಗೆದ್ದಿರುವ ನಟಿ ಪೂಜಾ ಗಾಂಧಿ, ಕನ್ನಡವನ್ನು ಕಲಿತು ಭೇಷ್ ಎನಿಸಿಕೊಂಡಿದ್ದಾರೆ.

ಪೂಜಾ ಗಾಂಧಿ ಮೂಲತಃ ಬೆಂಗಾಲಿ ಕುಟುಂಬದವರು. ಹುಟ್ಟಿದ್ದು ಉತ್ತರಪ್ರದೇಶದ ಮೀರತ್‌, ಬೆಳೆದಿದ್ದು ಓದಿದ್ದು  ದೆಹಲಿಯಲ್ಲಿ ಎನ್ನಲಾಗಿದೆ. ಮುಂಗಾರು ಮಳೆ ಸಿನಿಮಾ ಮೂಲಕ ಕನ್ನಡ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟ ನಟಿ ಪೂಜಾ ಗಾಂಧಿ, ಇಲ್ಲಿ ಸಕ್ಸಸ್‌ ಪಡೆದುಕೊಂಡು ನೆಲೆ ನಿಂತವರು. ಕನ್ನಡ ಸೇರಿದಂತೆ ಮಲಯಾಳಂ, ಬೆಂಗಾಲಿ ಸಿನಿಮಾರಂಗಗಳಲ್ಲಿ ನಟಿ ಪೂಜಾ ಗಾಂಧಿ ಕೆಲಸ ಮಾಡಿದವರು. ಅವರ ಮೊದಲ ಹೆಸರು ಸಂಜನಾ ಗಾಂಧಿ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *