ಶಿರಸಿ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಡಿಸೆಂಬರ್ 7 ಗುರುವಾರರಂದು ಬೆಳಗಾವಿಯ ಸುವರ್ಣಸೌಧದ ಎದುರು ಧರಣಿ ಸತ್ಯಾಗ್ರಹ ಮಾಡಿ, ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುತ್ತೇವೆ ಎಂದು ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಹೇಳಿದರು.
ಅವರು ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಆಗ್ರಹಿಸಿ ನಗರದ ತಹಶೀಲ್ದಾರ್ ಕಛೇರಿ ಎದುರು ಹಮ್ಮಿಕೊಂಡ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡುತ್ತಾ, ನಾವು ಈ ಮೊದಲು ಕರ್ನಾಟಕ ಸರ್ಕಾರದ ಚಳಿಗಾಲದ ಅಧಿವೇಶನ ನಡೆಯುವ ಬೆಳಗಾವಿಯ ಸುವರ್ಣಸೌಧದ ಮುಂಭಾಗ ಡಿಸೆಂಬರ್ 4 ಸೋಮವಾರದಂದು ಧರಣಿ ಸತ್ಯಾಗ್ರಹ ನಡೆಸಿ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ ಮಾಡಲು ತೀರ್ಮಾನಿಸಿದ್ದು, ಆದರೆ ತಾಂತ್ರಿಕ ಕಾರಣಗಳಿಂದ ಡಿಸೆಂಬರ್ 7 ಗುರುವಾರದಂದು ಧರಣಿ ಸತ್ಯಾಗ್ರಹ ಮಾಡಲು ಬೆಳಗಾವಿಯ ಪೋಲೀಸ್ ಆಯುಕ್ತರ ಪರವಾಗಿಗೆ ಲಭ್ಯವಾಗಿದ್ದು, ಆದ್ದರಿಂದ ನಾವು ಡಿಸೆಂಬರ್ 7 ಗುರುವಾರದಂದು ಧರಣಿ ಸತ್ಯಾಗ್ರಹ ನಡೆಸಿ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುತ್ತೇವೆ. ಅಧಿವೇಶನ ನಡೆಯಲಿರುವ ಸುವರ್ಣಸೌಧದಲ್ಲಿ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ನಮಗೆ ಬೆಳಗಾವಿಯ ಪೊಲೀಸ್ ಆಯುಕ್ತರು ಡಿಸೆಂಬರ್ 7 ರಂದು ಬೆಳಿಗ್ಗೆ 10 ಘಂಟೆ ಯಿಂದ ಸಂಜೆ 4 ಘಂಟೆಯ ವರೆಗೆ ಅನುಮತಿ ನೀಡಿದ್ದಾರೆ ಎಂದರು.
https://www.youtube.com/watch?v=F2B2ef6ha50
ಈ ಧರಣಿ ಸತ್ಯಾಗ್ರಹಕ್ಕೆ ಜಿಲ್ಲೆಯ ಹಲವಾರು ಸಂಘ ಸಂಸ್ಥೆಗಳು ಬೆಂಬಲ ನೀಡಿದ್ದು, ಜಿಲ್ಲೆಯಾದ್ಯಂತ ಸಾವಿರಕ್ಕೂ ಹೆಚ್ಚು ಜನರು ಧರಣಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ನಮ್ಮ ಜಿಲ್ಲೆಯ ಶಾಸಕರುಗಳಿಗೆ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ವಿಧಾನಸಭೆ ಚಳಿಗಾಲದ ಅಧೀವೇಶನದಲ್ಲಿ ವಿಷಯ ಪ್ರಸ್ತಾಪಿಸುವಂತೆ ಮನವಿ ಮಾಡಿದ್ದೇನೆ. ಜಿಲ್ಲೆಯ ಅನೇಕ ಗಣ್ಯರ ಬೆಂಬಲವನ್ನು ಕೋರಲಾಗಿದೆ. ತಹಶೀಲ್ದಾರ್ ಕಛೇರಿಯಲ್ಲಿ ಎದುರಯ ಹಮ್ಮಿಕೊಂಡ ಧರಣಿ ಸತ್ಯಾಗ್ರಹ ಆರು ದಿನ ಪೂರೈಸಿದ್ದು, ನಾಳೆ ಕೊನೆಗೊಳ್ಳಲಿದೆ ಎಂದು ಹೇಳಿದರು.
ಧರಣಿ ಸತ್ಯಾಗ್ರಹದಲ್ಲಿ ಕರ್ನಾಟಕ ಅನ್ನದಾತ ರೈತ ಸಂಘದ ರಾಜ್ಯಾಧ್ಯಕ್ಷ ಚಿದಾನಂದ ಹರಿಜನ, ಕರವೇ ಜನಧ್ವನಿ ಸಂಘಟನೆಯ ಜಿಲ್ಲಾಧ್ಯಕ್ಷ ಉಮೇಶ ಹರಿಕಾಂತ, ಸಾಮಾಜಿಕ ಕಾರ್ಯಕರ್ತ ಕೇಮು ವಂದಿಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
https://samajamukhi.net/2023/11/20/bheemanna-mla-agriculturist-achivment/