ಡಿಸೆಂಬರ್ 7 ಗುರುವಾರರಂದು ಬೆಳಗಾವಿಯಲ್ಲಿ ಧರಣಿ ಸತ್ಯಾಗ್ರಹ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ :- ಅನಂತಮೂರ್ತಿ ಹೆಗಡೆ

ಶಿರಸಿ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಡಿಸೆಂಬರ್ 7 ಗುರುವಾರರಂದು ಬೆಳಗಾವಿಯ ಸುವರ್ಣಸೌಧದ ಎದುರು ಧರಣಿ ಸತ್ಯಾಗ್ರಹ ಮಾಡಿ, ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುತ್ತೇವೆ ಎಂದು ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಹೇಳಿದರು.

    ಅವರು ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಆಗ್ರಹಿಸಿ ನಗರದ ತಹಶೀಲ್ದಾರ್ ಕಛೇರಿ ಎದುರು ಹಮ್ಮಿಕೊಂಡ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡುತ್ತಾ, ನಾವು ಈ ಮೊದಲು ಕರ್ನಾಟಕ ಸರ್ಕಾರದ ಚಳಿಗಾಲದ ಅಧಿವೇಶನ ನಡೆಯುವ ಬೆಳಗಾವಿಯ ಸುವರ್ಣಸೌಧದ ಮುಂಭಾಗ ಡಿಸೆಂಬರ್ 4 ಸೋಮವಾರದಂದು ಧರಣಿ ಸತ್ಯಾಗ್ರಹ ನಡೆಸಿ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ ಮಾಡಲು ತೀರ್ಮಾನಿಸಿದ್ದು, ಆದರೆ ತಾಂತ್ರಿಕ ಕಾರಣಗಳಿಂದ ಡಿಸೆಂಬರ್ 7 ಗುರುವಾರದಂದು ಧರಣಿ ಸತ್ಯಾಗ್ರಹ ಮಾಡಲು ಬೆಳಗಾವಿಯ ಪೋಲೀಸ್ ಆಯುಕ್ತರ ಪರವಾಗಿಗೆ ಲಭ್ಯವಾಗಿದ್ದು, ಆದ್ದರಿಂದ ನಾವು ಡಿಸೆಂಬರ್ 7 ಗುರುವಾರದಂದು ಧರಣಿ ಸತ್ಯಾಗ್ರಹ ನಡೆಸಿ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುತ್ತೇವೆ. ಅಧಿವೇಶನ ನಡೆಯಲಿರುವ ಸುವರ್ಣಸೌಧದಲ್ಲಿ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ನಮಗೆ ಬೆಳಗಾವಿಯ ಪೊಲೀಸ್ ಆಯುಕ್ತರು ಡಿಸೆಂಬರ್ 7 ರಂದು ಬೆಳಿಗ್ಗೆ 10 ಘಂಟೆ ಯಿಂದ ಸಂಜೆ 4 ಘಂಟೆಯ ವರೆಗೆ ಅನುಮತಿ  ನೀಡಿದ್ದಾರೆ ಎಂದರು.



https://www.youtube.com/watch?v=F2B2ef6ha50


ಈ ಧರಣಿ‌ ಸತ್ಯಾಗ್ರಹಕ್ಕೆ ಜಿಲ್ಲೆಯ ಹಲವಾರು ಸಂಘ ಸಂಸ್ಥೆಗಳು ಬೆಂಬಲ ನೀಡಿದ್ದು, ಜಿಲ್ಲೆಯಾದ್ಯಂತ ಸಾವಿರಕ್ಕೂ ಹೆಚ್ಚು ಜನರು‌ ಧರಣಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ನಮ್ಮ ಜಿಲ್ಲೆಯ ಶಾಸಕರುಗಳಿಗೆ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ವಿಧಾನಸಭೆ ಚಳಿಗಾಲದ ಅಧೀವೇಶನದಲ್ಲಿ‌ ವಿಷಯ ಪ್ರಸ್ತಾಪಿಸುವಂತೆ ಮನವಿ ಮಾಡಿದ್ದೇನೆ. ಜಿಲ್ಲೆಯ ಅನೇಕ ಗಣ್ಯರ ಬೆಂಬಲವನ್ನು ಕೋರಲಾಗಿದೆ. ತಹಶೀಲ್ದಾರ್ ಕಛೇರಿಯಲ್ಲಿ ಎದುರಯ ಹಮ್ಮಿಕೊಂಡ ಧರಣಿ ಸತ್ಯಾಗ್ರಹ ಆರು ದಿನ‌ ಪೂರೈಸಿದ್ದು, ನಾಳೆ ಕೊನೆಗೊಳ್ಳಲಿದೆ ಎಂದು ಹೇಳಿದರು.

ಧರಣಿ ಸತ್ಯಾಗ್ರಹದಲ್ಲಿ ಕರ್ನಾಟಕ ಅನ್ನದಾತ ರೈತ‌ ಸಂಘದ ರಾಜ್ಯಾಧ್ಯಕ್ಷ ಚಿದಾನಂದ ಹರಿಜನ, ಕರವೇ ಜನಧ್ವನಿ ಸಂಘಟನೆಯ ಜಿಲ್ಲಾಧ್ಯಕ್ಷ ಉಮೇಶ ಹರಿಕಾಂತ, ಸಾಮಾಜಿಕ ಕಾರ್ಯಕರ್ತ ಕೇಮು ವಂದಿಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

https://samajamukhi.net/2023/11/20/bheemanna-mla-agriculturist-achivment/


_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *