
ಸಿದ್ದಾಪುರ: ಸಿದ್ದಾಪುರ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ತೆರೆಯಲಾಗಿರುವ
ಪ್ರಧಾನಮಂತ್ರಿ ಭಾರತೀಯ ಜನೌಷಧ ಕೇಂದ್ರಕ್ಕೆ ಬುಧವಾರ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಚಾಲನೆ ನೀಡಿದರು.
ನಂತರ ನಡೆದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಪ್ರತಿಯೊಬ್ಬರು ಆರೋಗ್ಯದ ಕಡೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಇಂದಿನ ಆಹಾರ ಪದ್ದತಿಗೆ ಅನುಗುಣವಾಗಿ ಔಷಧಿ ತೆಗೆದುಕೊಳ್ಳಬೇಕು. ಜನೌಷಧಿ ಕೇಂದ್ರ ನಿರಂತರವಾಗಿರಬೇಕು. ಕೇಂದ್ರದಲ್ಲಿ ಸಿಗುವ ಔಷಧಿಗಳನ್ನು ತೆಗೆದುಕೊಂಡು ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
https://www.youtube.com/watch?v=baXyGRukM8E
ತಾಲೂಕಾ ಆಡಳಿತ ವೈದ್ಯಾಧಿಕಾರಿ ಪ್ರಕಾಶ ಪುರಾಣಿಕ ಮಾತನಾಡಿ, ಸರ್ಕಾರಿ ಆಸ್ಪತ್ರೆಯಲ್ಲಿ ಇಲ್ಲದ ಔಷಧಿಗಳನ್ನು ಜನೌಷಧಿ ಕೇಂದ್ರದಲ್ಲಿ ರಿಯಾಯಿತಿ ದರದಲ್ಲಿ ನೀಡಲಾಗುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಈ ವೇಳೆ ಸಂದರ್ಭದಲ್ಲಿ ತಾಲೂಕಾ ಆರೋಗ್ಯಾಧಿಕಾರಿ ಲಕ್ಷ್ಮೀಕಾಂತ ನಾಯ್ಕ, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಪ್ರಕಾಶ ಪುರಾಣಿಕ, ವೈದ್ಯರಾದ ಲೋಕೇಶ ವೈ.ಆರ್., ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ, ಜನೌಷಧಿ ಕೇಂದ್ರದ ಮಾಲಕ ಗುರುರಾಜ ಉಪಸ್ಥಿತರಿದ್ದರು.
