

ಜನವರಿ 22 ರಂದು ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ. ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ಒಂದು ವಾರದ ಮೊದಲು ವಿವಿಧ ಕಾರ್ಯಕ್ರಮಗಳನ್ನು ಯೋಜಿಸಿದೆ.


ನವದೆಹಲಿ: ಜನವರಿ 22 ರಂದು ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ. ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ಒಂದು ವಾರದ ಮೊದಲು ವಿವಿಧ ಕಾರ್ಯಕ್ರಮಗಳನ್ನು ಯೋಜಿಸಿದೆ.
ಜನವರಿ 17 ರಂದು ಬಲರಾಮನ ಮೂರ್ತಿ ಅಯೋಧ್ಯೆಗೆ ತಲುಪಲಿದೆ. ಅದೇ ದಿನ, ಸರಯೂ ನದಿಯ ನೀರನ್ನು ಕಲಶದಲ್ಲಿ ತೆಗೆದುಕೊಳ್ಳಲಾಗುತ್ತದೆ. ಜನವರಿ 18 ರಂದು ಗಣೇಶ ಪೂಜೆ ನಡೆಯಲಿದೆ. ಜನವರಿ 19 ರಂದು ಹೋಮ ನಡೆಯಲಿದೆ. ಜನವರಿ 20 ರಂದು ವಾಸ್ತು ಶಾಂತಿ ಹಾಗೂ 21 ರಂದು ರಾಮನ ಮೂರ್ತಿಗೆ ಅಭಿಷೇಕ ಜರುಗಲಿದೆ.


ಈ ಘಟನೆಯನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಟೀಕಿಸಿದ್ದಾರೆ. ಬಿಜೆಪಿ ಪಕ್ಷವು ರಾಮಮಂದಿರದ ಉದ್ಘಾಟನೆಯನ್ನು ಸ್ವಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿಕೊಂಡಿದೆ. ಶೀಘ್ರದಲ್ಲೇ ರಾಮನನ್ನು ಲೋಕಸಭಾ ಅಭ್ಯರ್ಥಿಯಾಗಿ ಘೋಷಿಸುವುದು ಮಾತ್ರ ಉಳಿದಿದೆ. ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಶುದ್ಧತೆ ಇಲ್ಲ, ಕೇವಲ ರಾಜಕೀಯ ಉದ್ದೇಶ ತುಂಬಿದೆ ಎಂದು ಸಂಜಯ್ ರಾವುತ್ ವಾಗ್ದಾಳಿ ನಡೆಸಿದರು.
ರಾಮನ ಹೆಸರಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಮನನ್ನು ಲೋಕಸಭೆ ಅಭ್ಯರ್ಥಿ ಎಂದು ಘೋಷಿಸುವುದೊಂದೇ ಬಾಕಿ ಎಂದರು. ಸಂಜಯ್ ರಾವತ್ ಅವರು ಈ ಹಿಂದೆಯೂ ಅಯೋಧ್ಯೆ ರಾಮಮಂದಿರದ ವಿಚಾರದಲ್ಲಿ ಟೀಕೆ ಮಾಡಿದ್ದರು. ಈ ಸಮಾರಂಭಕ್ಕೂ ದೇಶಕ್ಕೂ ಯಾವುದೇ ಸಂಬಂಧವಿಲ್ಲ, ಇದು ಕೇವಲ ಬಿಜೆಪಿ ಕಾರ್ಯಕ್ರಮ ಎಂದು ಹೇಳಿದ್ದರು. ಬಿಜೆಪಿ ಕಾರ್ಯಕ್ರಮಗಳು ಮುಗಿದ ನಂತರವೇ ಉದ್ಧವ್ ಠಾಕ್ರೆ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. (ಕಪ್ರಡಾ)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






