ಚೆಕ್ ಮೂಲಕ ಲಂಚ ಪಡೆದು, ಅಪ್ಪನ ಜೈಲಿಗೆ ಕಳುಹಿಸುವ ಕೆಲಸ ನಾನು ಮಾಡಿಲ್ಲ: ಮಧು ಬಂಗಾರಪ್ಪ ಆಕ್ರೋಶ

ಚೆಕ್ ಮೂಲಕ ಲಂಚ ಪಡೆದು, ಸಹಿ ಮಾಡಿ ಅಪ್ಪನನ್ನು ಜೈಲಿಗೆ ಕಳುಹಿಸುವ ಕೆಲಸ ನಾನು ಮಾಡಿಲ್ಲ ಎಂದು ವಿಜಯೇಂದ್ರ ವಿರುದ್ಧ ಪರೋಕ್ಷವಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ  ಸಚಿವ ಮಧು ಬಂಗಾರಪ್ಪ ಕಿಡಿ ಕಾರಿದ್ದಾರೆ.

Madhu bangarappa

ಶಿವಮೊಗ್ಗ: ಚೆಕ್ ಮೂಲಕ ಲಂಚ ಪಡೆದು, ಸಹಿ ಮಾಡಿ ಅಪ್ಪನನ್ನು ಜೈಲಿಗೆ ಕಳುಹಿಸುವ ಕೆಲಸ ನಾನು ಮಾಡಿಲ್ಲ ಎಂದು ವಿಜಯೇಂದ್ರ ವಿರುದ್ಧ ಪರೋಕ್ಷವಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ  ಸಚಿವ ಮಧು ಬಂಗಾರಪ್ಪ ಕಿಡಿ ಕಾರಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿನ ಭ್ರಷ್ಟಾಚಾರದ ಬಗ್ಗೆ ಸ್ವತಃ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪ ಮಾಡಿದ್ದಾರೆ. ಇದರಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ಹೆಸರು ಕೇಳಿ ಬಂದಿದೆ. ಹಾಗಿದ್ದರೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ‌.ವಿಜಯೇಂದ್ರ ನನ್ನ ರಾಜೀನಾಮೆ ಕೇಳುವುದು ಹಾಸ್ಯಾಸ್ಪದ,  ದಮ್ಮು, ತಾಕತ್ತು ಇದ್ದರೆ ಬಸನಗೌಡ ಪಾಟೀಲ ಯತ್ನಾಳ ಅವರ ಆರೋಪಗಳಿಗೆ ವಿಜಯೇಂದ್ರ ಉತ್ತರಿಸಲಿ ಎಂದು  ಆಗ್ರಹಿಸಿದ್ದಾರೆ.

ಕೋವಿಡ್ ವೇಳೆ ಸತ್ತವರ ಹೆಸರಲ್ಲಿ 40 ಸಾವಿರ ಕೋಟಿ ಭ್ರಷ್ಟಾಚಾರ ಮಾಡಿರುವ ಬಿಜೆಪಿಯವರಿಗೆ ಚೆಕ್ ಬೌನ್ಸ್ ನೆಪದಲ್ಲಿ ನನ್ನ ರಾಜೀನಾಮೆ ಕೇಳುವ ನೈತಿಕತೆ ಇದೆಯೇ ಎಂದು ಸಚಿವ ಮಧು ಬಂಗಾರಪ್ಪ ಪ್ರಶ್ನಿಸಿದರು.

ನಮ್ಮ ತಂದೆಯ (ಎಸ್.ಬಂಗಾರಪ್ಪ) ವಿರುದ್ಧ ಸಿಬಿಐ ಭ್ರಷ್ಟಾಚಾರದ ಹೆಸರಲ್ಲಿ ಪ್ರಕರಣ ದಾಖಲಿಸಿದಾಗ ಅದಕ್ಕೆ ನ್ಯಾಯಾಲಯದಿಂದ ತಡೆಯಾಜ್ಞೆ ತಾರದೇ ವಿಚಾರಣೆ ಎದುರಿಸಿ ಕ್ಲೀನ್ ಚಿಟ್ ಪಡೆದಿದ್ದರು ಎಂದು ಸ್ಮರಿಸಿದ ಮಧು ಬಂಗಾರಪ್ಪ, ಚೆಕ್ ಬೌನ್ಸ್ ವಿಚಾರವೂ ಖಾಸಗಿ ಸಂಗತಿ. ಅಪ್ಪ (ಬಂಗಾರಪ್ಪ) ಬದುಕಿದ್ದಾಗಲೇ ಈ ವಹಿವಾಟು ನಡೆದಿತ್ತು. ಈಗ ನ್ಯಾಯಾಲಯದ ಮೂಲಕ ಪರಿಹರಿಸಿಕೊಂಡಿದ್ದೇವೆಎಂದರು.

ಗ್ರಾಮ ಪಂಚಾಯ್ತಿ ಚುನಾವಣೆ ಗೆಲ್ಲಲು ಯೋಗ್ಯತೆ ಇಲ್ಲದ ಎನ್.ರವಿಕುಮಾರ್ ನನ್ನ ರಾಜೀನಾಮೆ ಕೇಳುತ್ತಾರೆ ಎಂದು ವ್ಯಂಗ್ಯವಾಡಿದ ಮಧು, ಉತ್ತರಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಂಗಾರಪ್ಪ ಬಡಾವಣೆ ಹೆಸರಲ್ಲಿ ಭೂ ಹಗರಣ ನಡೆಸಿರುವ ಆರ್.ಅಶೋಕ್ ನನ್ನ ವಿರುದ್ಧ ಮಾತಾಡುತ್ತಿದ್ದಾರೆ. ಸಮಯ ಬಂದಾಗ ಅಲ್ಲಿ ನಡೆದಿರುವ ಎಲ್ಲ ಅವ್ಯವಹಾರದ ಸಂಗತಿಗಳನ್ನು ಜನರ ಮುಂದಿಡಲಾಗುವುದು ಎಂದರು. (KPC)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *