ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಬಿಜೆಪಿಯಿಂದ ಕೋಮು ಗಲಭೆ ನಡೆಸುವ ಫತ್ವಾ ಬಂದಿದೆ: ಹರಿಪ್ರಸಾದ್

ಕೋಮು ಗಲಭೆ ನಡೆಸಿ 2024ಕ್ಕೆ “ವಿಶ್ವಗುರುವನ್ನ” ಮತ್ತೆ ಪ್ರಧಾನಿಯಾಗಬೇಕೆಂದು ಈ ಭಯೋತ್ಪಾದಕರ ತಂಡ ಕೆಲಸ ಮಾಡಲಿದೆಯಂತೆ. ರಾಜ್ಯದಲ್ಲಿ ಎಲ್ಲಿ? ಯಾವಾಗಾ? ಹೇಗಾದರೂ ಭಯೋತ್ಪಾದಕ ಕೃತ್ಯಗಳನ್ನ ನಡೆಸಲು ಸಂಚು ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ.

B K Hariprasad

ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕೋಮು ಗಲಭೆ ಸೃಷ್ಟಿಸಿ, ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸಕ್ಕೆ ಬಿಜೆಪಿ ಪಕ್ಷ ತನ್ನ ಸಹೋದರ ಸಂಘಟನೆಗಳಿಗೆ ಅಣಿಗೊಳಿಸುತ್ತಿರುವುದು ಬಹಿರಂಗವಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಕೆ ಹರಿಪ್ರಸಾದ್ ಆರೋಪಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರೌಡಿ ಶೀಟರ್ ಆಗಿರುವ ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಬಿಜೆಪಿಯಿಂದ ಕೋಮು ಗಲಭೆ ನಡೆಸುವ ಫತ್ವಾ ಬಂದಿದೆ ಎಂದು ಸ್ವತಃ ತಾನೇ ಸೃಷ್ಟಿಸಿರುವ “ರಾಷ್ಟ್ರ ರಕ್ಷಣಾ ಪಡೆ” ಎಂಬ ವಾಟ್ಸಪ್ ಗ್ರೂಪಿನಲ್ಲಿ ಹೇಳಿಕೊಂಡಿದ್ದಾನೆ. ಕೋಮು ಗಲಭೆ ನಡೆಸಿ 2024ಕ್ಕೆ “ವಿಶ್ವಗುರುವನ್ನ” ಮತ್ತೆ ಪ್ರಧಾನಿಯಾಗಿಸಬೇಕೆಂದು ಈ ಭಯೋತ್ಪಾದಕರ ತಂಡ ಕೆಲಸ ಮಾಡಲಿದೆಯಂತೆ ಎಂದು ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಎಲ್ಲಿ? ಯಾವಾಗಾ? ಹೇಗಾದರೂ ಭಯೋತ್ಪಾದಕ ಕೃತ್ಯಗಳನ್ನ ನಡೆಸಲು ಸಂಚು ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ಇಂತಹ ಸಮಾಜಘಾತುಕರಿಗೆ ಇಡಿ ಬಿಜೆಪಿಯೇ ಬೆಂಬಲಕ್ಕೆ ನಿಂತಿರುವುದು ಜಗಜ್ಜಾಹೀರು. ಕೂಡಲೇ ಸರ್ಕಾರ ಇಂತಹ ಭಯೋತ್ಪಾದಕ ಶಕ್ತಿಗಳನ್ನ ಮಟ್ಟ ಹಾಕಬೇಕು. ರಾಜ್ಯದ ಆಂತರಿಕ ಭದ್ರತೆಗೆ ಧಕ್ಕೆ ಉಂಟು ಮಾಡುತ್ತಿರುವವರ ಮೇಲೆ ರಾಷ್ಟ್ರದ್ರೋಹದ ಅಡಿಯಲ್ಲಿ ಕೇಸ್ ದಾಖಲಿಸಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *