ರಾಮ ಮಂದಿರ ಉದ್ಘಾಟನೆಗೆ ‘ಕೈ’ನಾಯಕರು ಗೈರು; ಆಹ್ವಾನ ತಿರಸ್ಕರಿಸಿದ ಖರ್ಗೆ, ಸೋನಿಯಾ

ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದು, ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕರಾದ ಸೋನಿಯಾ ಗಾಂಧಿ,

Google News

Sonia Gandhi - Mallikarjun Kharge

ನವದೆಹಲಿ: ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದು, ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕರಾದ ಸೋನಿಯಾ ಗಾಂಧಿ, ಅಧೀರ್ ರಂಜನ್ ಚೌಧರಿ ಅವರು ರಾಮ ಮಂದಿರದ ಆಹ್ವಾನವನ್ನು ತಿರಸ್ಕರಿಸಿದ್ದಾರೆ. 

ರಾಮ ಮಂದಿರ ಉದ್ಘಾಟನೆ “ಆರ್‌ಎಸ್‌ಎಸ್/ಬಿಜೆಪಿ ಕಾರ್ಯಕ್ರಮ” ಎಂದಿರುವ ಕಾಂಗ್ರೆಸ್, ಧರ್ಮವು ವೈಯಕ್ತಿಕ ವಿಷಯವಾಗಿದೆ. ಆದರೆ ಆರ್‌ಎಸ್‌ಎಸ್/ಬಿಜೆಪಿ ಅಯೋಧ್ಯೆ ಮಂದಿರವನ್ನು ರಾಜಕೀಯ ಯೋಜನೆಯಾಗಿ ಬಳಸಿಕೊಳ್ಳುತ್ತಿದೆ ಎಂದು ಬುಧವಾರ ಹೇಳಿದೆ.

ಲೋಕಸಭೆ ಚುನಾವಣಾ ಲಾಭಕ್ಕಾಗಿ ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರು ಅಯೋಧ್ಯೆಯ ಅಪೂರ್ಣ ದೇವಾಲಯವನ್ನು ಉದ್ಘಾಟನೆ ಮಾಡಲಾಗುತ್ತಿದೆ. ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.

ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರಿಗೆ ಆಹ್ವಾನ ನೀಡಲಾಗಿತ್ತು.

ಜನವರಿ 22 ರಂದು ರಾಮ ಮಂದಿರ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ 6,000ಕ್ಕೂ ಹೆಚ್ಚು ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *