ಶೃಂಗೇರಿ ಶಾರದಾ ಪೀಠ ಸ್ಪಷ್ಟನೆ: ಈ ಮಧ್ಯೆ ಕೆಲ ಧರ್ಮದ್ವೇಷಿಗಳು ಸಾಮಾಜಿಕ ಜಾಲತಾಣದಲ್ಲಿ ಶೃಂಗೇರಿ ಶಾರದಾಪೀಠದ ಭಾರತೀತೀರ್ಥಸ್ವಾಮಿಗಳ ಫೋಟೋದ ಜೊತೆಗೆ ಶ್ರೀಗಳು ಪ್ರಾಣಪ್ರತಿಷ್ಠಾ ಕಾರ್ಯಕ್ರಮವನ್ನು ವಿರೋಧಿಸುತ್ತಿದ್ದಾರೆ……

ಅಯೋಧ್ಯೆ ರಾಮಮಂದಿರ: ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳದಿರಲು ಕೆಲ ಪ್ರಮುಖ ಹಿಂದೂ ಸ್ವಾಮೀಜಿಗಳ ನಿರ್ಧಾರ!

ಅಯೋಧ್ಯೆಯಲ್ಲಿನ ನೂತನ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಹಲವು ಹಿಂದೂ ಸ್ವಾಮೀಜಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಅವರ ವಿಭಿನ್ನ ದೃಷ್ಟಿಕೋನ ಮತ್ತು ನಂಬಿಕೆಗಳನ್ನು ಒತ್ತಿ ಹೇಳಿದ್ದಾರೆ. 

Google News

Shankaracharyas_from_Puri_and_Jothis_math1

ನವದೆಹಲಿ: ಅಯೋಧ್ಯೆಯಲ್ಲಿನ ನೂತನ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಹಲವು ಹಿಂದೂ ಸ್ವಾಮೀಜಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಅವರ ವಿಭಿನ್ನ ದೃಷ್ಟಿಕೋನ ಮತ್ತು ನಂಬಿಕೆಗಳನ್ನು ಒತ್ತಿ ಹೇಳಿದ್ದಾರೆ. 

ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪಾಲ್ಗೊಳ್ಳದಿರಲು ಶಂಕರಾಚಾರ್ಯರ  ಕೆಲ ಮಠಗಳ ಸ್ವಾಮೀಜಿಗಳು ನಿರ್ಧರಿಸಿದ್ದಾರೆ ಎಂದು ವರದಿಗಳು ಹೇಳಿವೆ. ಸನಾತನ ಧರ್ಮದ  ಅನುಸಾರ  ಸಮಾರಂಭ ನಡೆಯುತ್ತಿಲ್ಲ ಎಂಬುದು ಅವರು ಹೇಳಿದ್ದಾರೆ. 

ಪುರಿಯ ಗೋವರ್ಧನ ಪೀಠದ  ಸ್ವಾಮೀಜಿ  ನಿಶ್ಚಲಾನಂದ ಸರಸ್ವತಿ ಅವರು ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ನಮ್ಮ ಶಾಸ್ತ್ರಗಳ ಅನುಸಾರ ದೇವಸ್ಥಾನದಲ್ಲಿ ರಾಮಲಾಲ ವಿಗ್ರಹವನ್ನು ಪ್ರತಿಷ್ಠಾಪಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದ್ದರು.

ಗುರುವಾರ ಅವರು ರಾಮನ ಗೌರವವನ್ನು ಕಾಪಾಡಿಕೊಳ್ಳುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಪೂಜೆಯು ಸಾಂಪ್ರದಾಯಿಕ ಆಚರಣೆಗಳೊಂದಿಗೆ ನಡೆಯಬೇಕು ಎಂದು ಒತ್ತಾಯಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದ ತಮ್ಮ ದೃಢನಿಲುವನ್ನು ಪುನರುಚ್ಚಿಸಿದ ನಿಶ್ಚಲಾನಂದ್ ಸ್ವಾಮೀಜಿ, ‘ಪ್ರಾಣ ಪ್ರತಿಷ್ಠಾಪನೆ’ ಸಮಾರಂಭಕ್ಕೆ ರಾಜಕೀಯ ಛಾಯೆ ನೀಡಲಾಗಿದೆ ಎಂದು ಪ್ರತಿಪಾದಿಸಿದರು.

ದೇಶದ ಪ್ರಧಾನಿಯವರು ಗರ್ಭಗುಡಿಯಲ್ಲಿದ್ದು, ವಿಗ್ರಹವನ್ನು ಸ್ಪರ್ಶಿಸುತ್ತಾರೆ ಮತ್ತು ‘ಪ್ರಾಣ ಪ್ರತಿಷ್ಠಾಪನೆ’ ಸಮಾರಂಭ ಉದ್ಘಾಟಿಸುತ್ತಾರೆ. ಇದಕ್ಕೆ ರಾಜಕೀಯ ರಂಗು ನೀಡಲಾಗಿದೆ. ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಆಗಬೇಕಾದರೆ, ಅದು ನಿಯಮ ಪ್ರಕಾರವಾಗಿರಬೇಕು. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಅರ್ಧ-ಸತ್ಯ ಮತ್ತು ಅರ್ಧ-ಸುಳ್ಳನ್ನು ಬೆರೆಸಬಾರದು; ಎಲ್ಲವೂ ಧರ್ಮಗ್ರಂಥದ ಜ್ಞಾನದೊಂದಿಗೆ ಹೊಂದಿಕೊಳ್ಳಬೇಕು ಎಂದು ಅವರು ಹೇಳಿದರು.

ಮತ್ತೊಂದೆಡೆ, ಜನವರಿ 22 ರಂದು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡುವುದಿಲ್ಲ ಎಂದು ಪ್ರತಿಪಾದಿಸಿದ ಶಂಕರಾಚಾರ್ಯ ಜ್ಯೋತಿಶ್ ಪೀಠದ ಸ್ಲಾಮೀಜಿ ಅವಿಮುಕ್ತೇಶ್ವರಾನಂದ, ಮಂದಿರ ನಿರ್ಮಾಣ ಸನಾತನ ಧರ್ಮದ ವಿಜಯವನ್ನು ಸೂಚಿಸುವುದಿಲ್ಲ ಎಂದು ಹೇಳಿದರು. 

“ಅಯೋಧ್ಯೆಯು ಈಗಾಗಲೇ ರಾಮಮಂದಿರವನ್ನು ಹೊಂದಿತ್ತು, ಮತ್ತು ಅದರ ನಿರ್ಮಾಣವು ಧರ್ಮದ ಕೊಡುಗೆ ಅಥವಾ ವಿಜಯವಲ್ಲ. ರಾಜಕೀಯ ನಾಯಕರು ಜನವರಿ 22 ರಂದು ಅಯೋಧ್ಯೆಗೆ ಹೋಗದಿರುವುದು ಅವರ ರಾಜಕೀಯ ನಿರ್ಬಂಧಗಳಿಂದಾಗಿರಬಹುದು, ಆದರೆ ಅಂತಹ ಯಾವುದೇ ನಿರ್ಬಂಧಗಳು ನನ್ನನ್ನು ಬಂಧಿಸುವುದಿಲ್ಲ. ದೇಶದಲ್ಲಿ ಗೋಹತ್ಯೆ ಕೊನೆಯಾದಾಗ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡುತ್ತೇನೆ, ಉತ್ಸಾಹದಿಂದ ಆಚರಿಸುತ್ತೇನೆ ಎಂದು ಅವರು ತಿಳಿಸಿದರು. 

ಶೃಂಗೇರಿ ಶಾರದಾ ಪೀಠ ಸ್ಪಷ್ಟನೆ: ಈ ಮಧ್ಯೆ ಕೆಲ ಧರ್ಮದ್ವೇಷಿಗಳು ಸಾಮಾಜಿಕ ಜಾಲತಾಣದಲ್ಲಿ ಶೃಂಗೇರಿ ಶಾರದಾಪೀಠದ ಭಾರತೀತೀರ್ಥಸ್ವಾಮಿಗಳ ಫೋಟೋದ ಜೊತೆಗೆ ಶ್ರೀಗಳು ಪ್ರಾಣಪ್ರತಿಷ್ಠಾ ಕಾರ್ಯಕ್ರಮವನ್ನು ವಿರೋಧಿಸುತ್ತಿದ್ದಾರೆ ಎಂಬ ಅರ್ಥ ಬರುವಂತೆ ಸಂದೇಶವನ್ನು ಹಾಕಿ ಪ್ರಚಾರ ಮಾಡುತ್ತಿದ್ದಾರೆ. ಆದರೆ ಶ್ರೀಗಳು ಆ ರೀತಿಯ ಯಾವುದೇ ಸಂದೇಶ ನೀಡಿಲ್ಲ ಎಂದು ಶೃಂಗೇರಿ ಶಾರದಾ ಪೀಠ ಸ್ಪಷ್ಟನೆ ನೀಡಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *