ಕಲ್ಲಡ್ಕ ಭಟ್ಟ, ಅನಂತ ಹೆಗಡೆ ಮೇಲೆ ಆಗದ ಕ್ರಮ, ಇದೇನು ಆರೆಸ್ಸೆಸ್‌ ಸರ್ಕಾರವೆ?

ಇದೇನು ಕಾಂಗ್ರೆಸ್ ಸರ್ಕಾರವೇ? RSS ಸರ್ಕಾರವೇ?: CCB ವಿಚಾರಣೆ ಬೆನ್ನಲ್ಲೇ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ BK ಹರಿಪ್ರಸಾದ್ ಕಿಡಿ!

ರಾಜ್ಯದಲ್ಲಿ ಗೋಧ್ರಾ ರೀತಿ ಘಟನೆ ನಡೆಸಲು ಸಂಚು ರೂಪಿಸಲಾಗುತ್ತಿದೆ ಎಂಬ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ (BK Hari Prasad) ಅವರನ್ನು ಇಂದು ಸಿಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದು, ಈ ನಿಲುವಿನಿಂದ ತಮ್ಮದ ಪಕ್ಷದ ಸರ್ಕಾರದ ವಿರುದ್ಧ ಹರಿಪ್ರಸಾದ್ ಇದೇನು ಕಾಂಗ್ರೆಸ್ ಸರ್ಕಾರವೇ?, RSS ಸರ್ಕಾರವೇ? ಕಿಡಿಕಾರಿದ್ದಾರೆ.

Google News

BK hariprasad

ಬೆಂಗಳೂರು: ರಾಜ್ಯದಲ್ಲಿ ಗೋಧ್ರಾ ರೀತಿ ಘಟನೆ ನಡೆಸಲು ಸಂಚು ರೂಪಿಸಲಾಗುತ್ತಿದೆ ಎಂಬ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ (BK Hari Prasad) ಅವರನ್ನು ಇಂದು ಸಿಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದು, ಈ ನಿಲುವಿನಿಂದ ತಮ್ಮದ ಪಕ್ಷದ ಸರ್ಕಾರದ ವಿರುದ್ಧ ಹರಿಪ್ರಸಾದ್ ಇದೇನು ಕಾಂಗ್ರೆಸ್ ಸರ್ಕಾರವೇ?, RSS ಸರ್ಕಾರವೇ? ಕಿಡಿಕಾರಿದ್ದಾರೆ.

ಕರ್ನಾಟಕದಲ್ಲಿ ಗೋಧ್ರಾ ರೀತಿಯ ಘಟನೆ ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಿರುವ ಕಾಂಗ್ರೆಸ್ ಎಂಎಲ್​ಸಿ ಬಿಕೆ ಹರಿಪ್ರಸಾದ್​ (BK Hariprasad) ಅವರನ್ನು ಶುಕ್ರವಾರ ಸಿಸಿಬಿ ಪೊಲೀಸರು (CCB Police) ವಿಚಾರಣೆ ನಡೆಸಿದರು. ಕೆಕೆ ಗೆಸ್ಟ್​​ಹೌಸ್​ನಲ್ಲಿ ಹರಿಪ್ರಸಾದ್​ ವಿಚಾರಣೆ ನಡೆಸಲಾಯಿತು. 

ಇದೇನು ಕಾಂಗ್ರೆಸ್ ಸರ್ಕಾರವೇ?, RSS ಸರ್ಕಾರವೇ?, ಬೇಕಿದ್ದರೆ ಬಂಧಿಸಿ:
ವಿಚಾರಣೆಗೆ ಅನುಮತಿ ನೀಡಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಪ್ರಸಾದ್ ಕಿಡಿಕಾರಿದ್ದಾರೆ. ವಿಚಾರಣೆಗೆ ಒಳಪಡಿಸುವಂತೆ ನಿರ್ದೇಶನ ನೀಡಿರುವ ಸರ್ಕಾರದ ನಡೆಗೆ ಹರಿಪ್ರಸಾದ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇದೇನು ಕಾಂಗ್ರೆಸ್ ಸರ್ಕಾರವೇ?, RSS ಸರ್ಕಾರವೇ?.. ನನಗೆ ವಿವಿಐಪಿ ಟ್ರೀಟ್​ಮೆಂಟ್​​ ಬೇಡ, ಬೇಕಿದ್ದರೆ ಅರೆಸ್ಟ್ ಮಾಡಿ ಎಂದು ಕಿಡಿಕಾರಿದ್ದಾರೆ.

‘ಇದು ಕಾಂಗ್ರೆಸ್ ಸರ್ಕಾರವೇ ಅಥವಾ ಆರ್​ಎಸ್​ಎಸ್ ಸರ್ಕಾರವೇ ಎಂದು ಪ್ರಶ್ನಿಸಿದ್ದಾರೆ. ನಾನು ಯಾವ ಸರ್ಕಾರದಲ್ಲಿ ಇದ್ದೇನೆ ಎಂದು ಅರ್ಥವಾಗುತ್ತಿಲ್ಲ. ಬೇಕಿದ್ದರೆ ಮಂಪರು ಪರೀಕ್ಷೆ ಮಾಡಿ ಎಂದು ಪೊಲೀಸರಿಗೆ ಹೇಳಿದ್ದೇನೆ. ಸ್ಟೇಷನ್​​ಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಿ. ನನ್ನ ಜತೆಗೆ ವಿಜಯೇಂದ್ರ ಅವರನ್ನು ಕೂಡ ಮಂಪರು ಪರೀಕ್ಷೆಗೆ ಒಳಪಡಿಸಲಿ. ನನ್ನ ಪರಿಸ್ಥಿತಿಯೇ ಹೀಗಾದರೆ ಕಾಂಗ್ರೆಸ್ ಕಾರ್ಯಕರ್ತರ ಕಥೆ ಏನು? ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ.

ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಯಾವುದೇ ಕ್ರಮ ಆಗಿಲ್ಲ. ನಾನು ಇವರ ಬೆದರಿಕೆಗಳಿಗೆಲ್ಲ ಜಗ್ಗಲ್ಲ. ಅಂದು ಕೊಟ್ಟ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ರಾಮ ಮಂದಿರಕ್ಕೆ ಹೋಗುವವರಿಗೆ ಸೂಕ್ತ ರಕ್ಷಣೆ ನೀಡಬೇಕು’ ಎಂದು ಹರಿಪ್ರಸಾದ್​ ಹೇಳಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮನುಷ್ಯನ ಒಳಿತನ್ನೇ ಧ್ಯಾನಿಸುತ್ತಾ……‌

ಒಂದು ಅಪರೂಪದ ಡೊಳ್ಳಿನ ಸ್ಫರ್ಧೆ ನೋಡಿದೆ. ನಮ್ಮದೇ ತಾಲೂಕಿನ ಅರೆಹಳ್ಳದ ತಂಡ ಎಷ್ಟು ಸೊಗಸಾಗಿ ಡೊಳ್ಳು ನೃತ್ಯ ಕುಣಿಯಿತು! ಕೊಡಗಿಬೈಲ್‌ ಎಂಬ ಹಳ್ಳಿಯ ಒಕ್ಕಲಿಗ...

ಶಿಕಾರಿಪುರ ಪ್ರಥಮ, ಸಿದ್ಧಾಪುರ ದ್ವಿತೀಯ, ಸಾಗರ ತೃತೀಯ

ಸಿದ್ದಾಪುರದಲ್ಲಿ ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ರಾಜ್ಯ ಮಟ್ಟದ ಡೊಳ್ಳು ಕುಣಿತ ಸ್ಪರ್ಧೆಯಲ್ಲಿ ಬೀರಲಿಂಗೇಶ್ವರ ಡೊಳ್ಳಿನ ಸಂಘ ಅಂಬಾರಗೊಪ್ಪ ಶಿಕಾರಿಪುರ ಪ್ರಥಮ,ಸಿದ್ದಿವಿನಾಯಕ...

ಮಕ್ಕಳಿಗೆ ಆಸ್ತಿಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿಸಿ

ಮಕ್ಕಳಿಗೆ ಆಸ್ತಿ,ಆಭರಣ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾ ಗಿಸಿ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದ್ದಾರೆ. ಸಿದ್ಧಾಪುರ ಹಾಳದಕಟ್ಟಾ ಮತ್ತು ಕೊಳಗಿ ಪ್ರಾಥಮಿಕ ಶಾಲೆಗಳಲ್ಲಿ...

ಮಾಧ್ಯಮ ಪ್ರತಿನಿಧಿಗಳ ಸಂಘದ ಪದಾಧಿಕಾರಿಗಳ ಅಯ್ಕೆ

ಸಿದ್ದಾಪುರ: ತಾಲೂಕಿನಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ಮಾಧ್ಯಮ ಪ್ರತಿನಿಧಿಗಳ ಸಂಘ (ರಿ) ಸಿದ್ದಾಪುರ ದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸಂಘದ ಅಧ್ಯಕ್ಷರಾಗಿ ಸಮಾಜಮುಖಿ...

ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯುತ್ ಸ್ಪರ್ಶ; ಶಾಲಾ ಆವರಣದಲ್ಲೇ ಬಾಲಕಿ ಸಾವು

ಉತ್ತರ ಕನ್ನಡ: ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯುತ್ ಸ್ಪರ್ಶ; ಶಾಲಾ ಆವರಣದಲ್ಲೇ ಬಾಲಕಿ ಸಾವು ಶಾಲೆಯ ಶೌಚಾಲಯದ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *