ಸಂಸದ ಪ್ರತಾಪ್ ಸಿಂಹ ಅವರಿಗೆ ದಲಿತ ‘ರಾಮಭಕ್ತರು ಘೇರಾವ್ ಹಾಕಿರುವ ಘಟನೆ ಸೋಮವಾರ ಮೈಸೂರಿನಲ್ಲಿ ನಡೆದಿದೆ.
ಮೈಸೂರು: ಸಂಸದ ಪ್ರತಾಪ್ ಸಿಂಹ ಅವರಿಗೆ ದಲಿತ ‘ರಾಮಭಕ್ತರು ಘೇರಾವ್ ಹಾಕಿರುವ ಘಟನೆ ಸೋಮವಾರ ಮೈಸೂರಿನಲ್ಲಿ ನಡೆದಿದೆ.
ರಾಮಲಲ್ಲಾ ವಿಗ್ರಹ ಕೆತ್ತನೆಗೆ ಕಲ್ಲು ತೆಗೆದ ಸ್ಥಳದಲ್ಲಿ ಹಾರೋಹಳ್ಳಿ ಮತ್ತು ಗುಜ್ಜೇಗೌಡನಪುರ ಗ್ರಾಮಸ್ಥರು ಆಯೋಜಿಸಿದ್ದ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ವಿರೋಧಿ ಘೋಷಣೆ ಕೂಗಿ ಘೇರಾವ್ ಹಾಕಿದ್ದಾರೆ.
ಇದರಿಂದ ಸ್ಥಳದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ಸ್ಥಳದಲ್ಲಿಯೇ ಇದ್ದ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ರಾಮಲಲ್ಲಾ ಮೂರ್ತಿಗೆ ಕಲ್ಲು ಕೊಟ್ಟ ದಲಿತ ರೈತನಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನವಿಲ್ಲ ಎಂಬುದು ಇವರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ. (ಕಪ್ರಡಾ)