ಸರಳ ವ್ಯಕ್ತಿ ಭಾರತರತ್ನಕ್ಕೆ ಭಾಜನರಾದ ದಿ.ಕರ್ಪೂರಿ ಠಾಕೂರ್

ಭಾರತ ರತ್ನಕ್ಕೆ ಭಾಜನರಾದ ಜನ ನಾಯಕ ಕರ್ಪೂರಿ ಠಾಕೂರ್ ಸರಳತೆ ಬಗ್ಗೆ ನಿಮಗೆಷ್ಟು ಗೊತ್ತು?

ಸ್ವಾತಂತ್ರ್ಯ ಹೋರಾಟ ಮತ್ತು ಸಮಾಜವಾದಿ ಆಂದೋಲನಕ್ಕೆ ಅನನ್ಯ ಕೊಡುಗೆ ನೀಡಿದ್ದ ಬಿಹಾರ ಮಾಜಿ ಮುಖ್ಯಮಂತ್ರಿ ದಿ. ಕರ್ಪೂರಿ ಠಾಕೂರ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ ನೀಡಿ ಕೇಂದ್ರ ಸರ್ಕಾರ ಗೌರವಿಸಿದೆ.

thakur

ಸ್ವಾತಂತ್ರ್ಯ ಹೋರಾಟ ಮತ್ತು ಸಮಾಜವಾದಿ ಆಂದೋಲನಕ್ಕೆ ಅನನ್ಯ ಕೊಡುಗೆ ನೀಡಿದ್ದ ಬಿಹಾರ ಮಾಜಿ ಮುಖ್ಯಮಂತ್ರಿ ದಿ. ಕರ್ಪೂರಿ ಠಾಕೂರ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ ನೀಡಿ ಕೇಂದ್ರ ಸರ್ಕಾರ ಗೌರವಿಸಿದೆ.

ಜನನಾಯಕ ಎಂದೇ ಖ್ಯಾತಿ ಪಡೆದಿದ್ದ ಕರ್ಪೂರಿ ಠಾಕೂರ್ ಅತ್ಯಂತ ಸರಳ ಜೀವಿಯಾಗಿದ್ದರು. ಠಾಕೂರ್ ಅವರು ಎರಡು ಬಾರಿ ಬಿಹಾರದ ಮುಖ್ಯಮಂತ್ರಿಯಾಗಿದ್ದರೂ ಅವರ ಬಳಿ ಒಂದು ಸ್ವಂತ ಕಾರು ಸಹ ಇರಲಿಲ್ಲ. ಕಾರು ಬಿಡಿ, ಸ್ವಂತ ಮನೆ ಸಹ ಕಟ್ಟಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ.

ಕರ್ಪೂರಿ ಠಾಕೂರ್ ಅವರು ಒಬ್ಬ ಶಿಕ್ಷಕ, ಸ್ವಾತಂತ್ರ್ಯ ಹಾಗೂ ಸಮಾಜವಾದಿ ಹೋರಾಟಗಾರ, ರಾಜಕಾರಣಿ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಜನನಾಯಕರಾಗಿದ್ದರು. ನಾಳೆ ಅವರ ಜನ್ಮ ಶತಮಾನೋತ್ಸವದ ದಿನದಂದು ಕೇಂದ್ರ ಸರ್ಕಾರ ಕರ್ಪೂರಿ ಠಾಕೂರ್‌ಗೆ ಭಾರತ ರತ್ನ ಪ್ರಶಸ್ತಿ ನೀಡಲು ನಿರ್ಧರಿಸಿದೆ.

ಜನವರಿ 24, 1924 ರಂದು ಬಿಹಾರದ ಸಮಸ್ತಿಪುರ್ ಜಿಲ್ಲೆಯ ಪಿಟೊಂಜಿಯಾದಲ್ಲಿ(ಈಗ ಕರ್ಪೂರಿಗ್ರಾಮ್) ಜನಿಸಿದ ಠಾಕೂರ್ ಅವರು ಬಿಹಾರದ ಉಪ ಮುಖ್ಯಮಂತ್ರಿಯಾಗಿ ಮತ್ತು ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಸರಳತೆಯ ಬಗ್ಗೆ ಅನೇಕ ಕಥೆಗಳಿವೆ. 1952 ರಲ್ಲಿ ಅವರು ಮೊದಲ ಬಾರಿಗೆ ಶಾಸಕರಾದಾಗ ಅವರು ಆಸ್ಟ್ರಿಯಾಗೆ ಹೋಗುವ ನಿಯೋಗದಲ್ಲಿ ಇದ್ದರು. ಆದರೆ ಅವರ ಬಳಿ ಧರಿಸಲು ಒಂದು ಕೋಟ್ ಸಹ ಇರಲಿಲ್ಲ. ಗೆಳೆಯನ ಬಳಿ ಕೋಟು ಕೇಳಿದಾಗ ಅದೂ ಹರಿದದ್ದು ತಂದು ಕೊಟ್ಟಿದ್ದರು. ಕರ್ಪೂರಿ ಅದೇ ಕೋಟ್ ಧರಿಸಿ ಹೊರಟು ಹೋಗಿದ್ದರು. ಅಲ್ಲಿ ಯುಗೊಸ್ಲಾವಿಯಾದ ಮುಖ್ಯಸ್ಥ ಮಾರ್ಷಲ್ ಟಿಟೊ ಅವರು ಹರಿದ ಕೋಟ್ ಅನ್ನು ಗಮನಸಿ ಅವರಿಗೆ ಹೊಸ ಕೋಟ್ ಅನ್ನು ಉಡುಗೊರೆಯಾಗಿ ನೀಡಿದ್ದರು.

ಕರ್ಪೂರಿ ಠಾಕೂರ್ ಅವರ ಬಳಿ ಕಾರು ಇರಲಿಲ್ಲ. 80ರ ದಶಕದಲ್ಲಿ ಕರ್ಪೂರಿ ಠಾಕೂರ್ ಅವರು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದರು. ಒಮ್ಮೆ ಊಟಕ್ಕೆ ನಿವಾಸಕ್ಕೆ ಹೋಗಬೇಕಿತ್ತು. ಸ್ವಲ್ಪ ಹೊತ್ತು ಅವರದೇ ಪಕ್ಷದ ಶಾಸಕರಿಗೆ ಜೀಪ್ ಕೊಡಿ ಎಂದು ಕೇಳಿದಾಗ, ಆ ಶಾಸಕರು, ನನ್ನ ಜೀಪಿನಲ್ಲಿ ಎಣ್ಣೆ ಇಲ್ಲ. ನೀವು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಿರಿ. ಕಾರು ಏಕೆ ಖರೀದಿಸಬಾರದು? ಎಂದು ಪ್ರಶ್ನಿಸಿದ್ದರು. ಅವರು ಸದಾ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದರು.

ಹಿರಿಯ ಪತ್ರಕರ್ತ ಸುರೇಂದ್ರ ಕಿಶೋರ್ ಅವರು 1977 ರ ಒಂದು ಘಟನೆಯ ಬಗ್ಗೆ ಬರೆದಿದ್ದಾರೆ, ಜಯಪ್ರಕಾಶ್ ನಾರಾಯಣ್ ಅವರ ಜನ್ಮದಿನವನ್ನು ಪಾಟ್ನಾದ ಕದಮ್ ಕುವಾನ್‌ನಲ್ಲಿರುವ ಚರಖಾ ಸಮಿತಿ ಕಟ್ಟಡದಲ್ಲಿ ಆಚರಿಸಲಾಯಿತು. ಇದರಲ್ಲಿ ಮಾಜಿ ಪ್ರಧಾನಿ ಚಂದ್ರಶೇಖರ್, ನಾನಾಜಿ ದೇಶಮುಖ್ ಸೇರಿದಂತೆ ದೇಶಾದ್ಯಂತ ಹಲವು ಮುಖಂಡರು ಭಾಗವಹಿಸಿದ್ದರು.  ಬಿಹಾರ ಮುಖ್ಯಮಂತ್ರಿ ಕರ್ಪೂರಿ ಠಾಕುರ್ ಅವರು ಹರಿದ ಕುರ್ತಾ, ಹರಿದ ಚಪ್ಪಲಿಯೊಂದಿಗೆ ಆಗಮಿಸಿದರು. ಇದನ್ನು ಗಮನಿಸಿದ ಚಂದ್ರಶೇಖರ್ ಅವರು ಒಬ್ಬ ನಾಯಕ ‘ಮುಖ್ಯಮಂತ್ರಿ ಚೆನ್ನಾಗಿ ಬದುಕಲು ಎಷ್ಟು ಸಂಬಳ ಪಡೆಯಬೇಕು? ಎಂದು ಪ್ರಶ್ನಿಸಿದರು. ಆಗ ಎಲ್ಲರೂ ನಗಲು ಪ್ರಾರಂಭಿಸಿದರು. ಚಂದ್ರಶೇಖರ್ ತಮ್ಮ ಆಸನದಿಂದ ಎದ್ದು ನಿಂತು ತಮ್ಮ ಕುರ್ತಾವನ್ನು ಹರಡಿ, ಕರ್ಪೂರಿ ಅವರ ಕುರ್ತಾ ನಿಧಿಗೆ ದೇಣಿಗೆ ನೀಡಿ ಎಂದು ಹೇಳಲು ಪ್ರಾರಂಭಿಸಿದರು. ನೂರಾರು ರೂಪಾಯಿ ಹಣ ಸಂಗ್ರಹವಾಗಿದ್ದು, ಅದರಿಂದ ನೀವು ಕುರ್ತಾ-ಧೋತಿಯನ್ನು ಮಾತ್ರ ಖರೀದಿಸುತ್ತೀರಾ ಎಂದು ಕರ್ಪೂರಿ  ಅವರನ್ನು ಕೇಳಿದಾಗ, ಕರ್ಪೂರಿ ಅವರು “ನಾನು ಅದನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುತ್ತೇನೆ” ಎಂದು ಹೇಳಿದ್ದರು.

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿ; 26 ತಿಂಗಳು ಜೈಲುವಾಸ
ಕರ್ಪೂರಿ ಠಾಕೂರ್ ಅವರು ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ತೊಡಗಿಸಿಕೊಂಡ ಸ್ವಾತಂತ್ರ್ಯ ಹೋರಾಟಗಾರ. ಸ್ವಾತಂತ್ರ್ಯ ಹೋರಾಟದಲ್ಲಿ ಧುಮಿಕಿದ ಕರ್ಪೂರಿ ಠಾಕೂರ್ 26 ತಿಂಗಳು ಜೈಲು ವಾಸ ಸಹ ಅನುಭವಿಸಿದ್ದರು.

ಇನ್ನು ಠಾಕೂರ್ ಅವರು ಮೊದಲ ಬಾರಿಗೆ 1970 ರಿಂದ 1971 ರ ವರೆಗೆ ಮತ್ತು ಎರಡನೇ ಬಾರಿಗೆ 1977ರಿಂದ 1979ರ ವರೆಗೆ ಬಿಹಾರದ ಮುಖ್ಯಮಂತ್ರಿಯಾಗಿದ್ದರು. 1988ರಲ್ಲಿ ತಮ್ಮ 64 ವಯಸ್ಸಿನಲ್ಲಿ ನಿಧನರಾದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *