


ಕೇಂದ್ರ ಬಜೆಟ್ 2024-25: ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್ ಭಾರತ್ ವಿಸ್ತರಣೆ!
ಆಯುಷ್ಮಾನ್ ಭಾರತ್ ಅಡಿಯಲ್ಲಿ ಆರೋಗ್ಯ ರಕ್ಷಣೆಯನ್ನು ಎಲ್ಲಾ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ವಿಸ್ತರಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಹೇಳಿದ್ದಾರೆ.

ನವದೆಹಲಿ: ಆಯುಷ್ಮಾನ್ ಭಾರತ್ ಅಡಿಯಲ್ಲಿ ಆರೋಗ್ಯ ರಕ್ಷಣೆಯನ್ನು ಎಲ್ಲಾ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ವಿಸ್ತರಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಹೇಳಿದ್ದಾರೆ.
ಪ್ರಸಕ್ತ ಸಾಲಿನ ಮಧ್ಯಂತರ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಈ ಅಂಶವನ್ನು ಪ್ರಸ್ತಾಪಿಸಿದರು.
ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ-ಜನ ಆರೋಗ್ಯ ಯೋಜನೆ ವಿಶ್ವದಲ್ಲೇ ಅತಿ ದೊಡ್ಡ ಸಾರ್ವಜನಿಕ ನಿಧಿಯ ಆರೋಗ್ಯ ವಿಮಾ ಯೋಜನೆಯಾಗಿದ್ದು, ದ್ವಿತೀಯ ಮತ್ತು ತೃತೀಯ ಆರೈಕೆಗಾಗಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷ ರೂ.ಗಳನ್ನು ಒದಗಿಸುತ್ತದೆ. ಕಳೆದ ವರ್ಷ ಡಿಸೆಂಬರ್ 27ರವರೆಗೆ 12 ಕೋಟಿ ಕುಟುಂಬಗಳಿಗೆ ಸೇರಿದ 55 ಕೋಟಿ ಜನ ಈ ಯೋಜನೆಗೆ ಒಳಪಟ್ಟಿದ್ದರು.
ಎಂಎಸ್‌ಎಂಇಗಳಿಗೆ ಸಮರ್ಪಕವಾಗಿ ಮತ್ತು ಸಮಯೋಚಿತ ಹಣಕಾಸು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ. ಭಾರತೀಯ ಆರ್ಥಿಕತೆ ಕಳೆದ ಒಂದು ದಶಕದಲ್ಲಿ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ. 2014ರಿಂದ ಭಾರತ ದೈತ್ಯ ಸವಾಲುಗಳನ್ನು ಎದುರಿಸಿತ್ತು. ಆದರೆ ,ಸರ್ಕಾರ ಈ ಅಡೆತಡೆಗಳನ್ನು ನಿವಾರಿಸಿದೆ. ರಚನಾತ್ಮಕ ಸುಧಾರಣೆಗಳನ್ನು ಪ್ರಾರಂಭಿಸಿದೆ. ಜನಪರ ಸುಧಾರಣೆಗಳಿಗೆ ಒತ್ತು ನೀಡಲಾಗಿದೆ. ಉದ್ಯೋಗ ಸೃಷ್ಟಿ ಮತ್ತು ಉದ್ಯಮಶೀಲತೆಗಳನ್ನು ಉತ್ತೇಜಿಸಲಾಗಿದೆ. ಅಭಿವೃದ್ಧಿ ಉಪಕ್ರಮಗಳು ಬೃಹತ್ ಪ್ರಮಾಣದಲ್ಲಿ ಜನರನ್ನು ತಲುಪಿವೆ ಎಂದು ಹೇಳಿದರು.
ಅಂತರ್ಗತ ಅಭಿವೃದ್ಧಿ ಉಪಕ್ರಮಗಳು ವಸತಿ, ನೀರು, ವಿದ್ಯುತ್, ಅಡುಗೆ ಅನಿಲ ಮತ್ತು ಆರ್ಥಿಕ ಸೇರ್ಪಡೆಯಂತಹ ಅಗತ್ಯ ಸೇವೆಗಳೊಂದಿಗೆ ಮನೆಗಳು ಮತ್ತು ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡಿವೆ. 80 ಕೋಟಿ ಜನರಿಗೆ ಉಚಿತ ಪಡಿತರವನ್ನು ಒದಗಿಸುವ ಮೂಲಕ ಆಹಾರ ಭದ್ರತೆಗೆ ಸಂಬಂಧಿಸಿದ ಕಳವಳವನ್ನು ನಿವಾರಿಸಲಾಗಿದೆ ಎಂದು ತಿಳಿಸಿದರು.
ನಮ್ಮ ರಾಷ್ಟ್ರದ ಬೆನ್ನೆಲುಬಾಗಿರುವ ರೈತರಿಗೆ ಬೆಂಬಲವನ್ನು ಖಾತ್ರಿಪಡಿಸುವ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (MSP) ಕಾಲಕಾಲಕ್ಕೆ ಹೆಚ್ಚಿಸಲಾಗಿದೆ. ಮೂಲಭೂತ ಅವಶ್ಯಕತೆಗಳ ಪೂರೈಕೆಯು ಗ್ರಾಮೀಣ ಪ್ರದೇಶಗಳಲ್ಲಿ ನೈಜ ಆದಾಯದಲ್ಲಿ ಗಮನಾರ್ಹ ಹೆಚ್ಚಳಕ್ಕೆ ಕಾರಣವಾಗಿದೆ. ಸಮಾಜದ ಎಲ್ಲಾ ಜಾತಿಗಳು ಮತ್ತು ಸ್ತರಗಳನ್ನು ಒಳಗೊಳ್ಳುವ ಸಮಗ್ರ, ಅಂತರ್ಗತ ಮತ್ತು ವ್ಯಾಪಕ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದರು.
2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಮಹತ್ವಾಕಾಂಕ್ಷೆಯ ಕಡೆಗೆ ಕೆಲಸ ಮಾಡುವುದು ನಮ್ಮ ಗುರಿ. ನಮ್ಮ ಪ್ರಯತ್ನಗಳು ಸಮಾಜದ ಪ್ರತಿಯೊಂದು ವಿಭಾಗವನ್ನೂ ಒಳಗೊಳ್ಳುವ ಸಮಗ್ರ ಪ್ರಗತಿಯತ್ತ ನಿರ್ದೇಶಿಸಲ್ಪಟ್ಟಿವೆ ಎಂದು ತಿಳಿಸಿದರು. (ಕಪ್ರಡಾ)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
