ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್‌ ಭಾರತ್‌ ವಿಸ್ತರಣೆ!

ಕೇಂದ್ರ ಬಜೆಟ್

ಕೇಂದ್ರ ಬಜೆಟ್ 2024-25: ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್‌ ಭಾರತ್‌ ವಿಸ್ತರಣೆ!

ಆಯುಷ್ಮಾನ್ ಭಾರತ್ ಅಡಿಯಲ್ಲಿ ಆರೋಗ್ಯ ರಕ್ಷಣೆಯನ್ನು ಎಲ್ಲಾ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ವಿಸ್ತರಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಹೇಳಿದ್ದಾರೆ.

File photo

ನವದೆಹಲಿ: ಆಯುಷ್ಮಾನ್ ಭಾರತ್ ಅಡಿಯಲ್ಲಿ ಆರೋಗ್ಯ ರಕ್ಷಣೆಯನ್ನು ಎಲ್ಲಾ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ವಿಸ್ತರಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಹೇಳಿದ್ದಾರೆ.

ಪ್ರಸಕ್ತ ಸಾಲಿನ ಮಧ್ಯಂತರ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಈ ಅಂಶವನ್ನು ಪ್ರಸ್ತಾಪಿಸಿದರು.

ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ-ಜನ ಆರೋಗ್ಯ ಯೋಜನೆ ವಿಶ್ವದಲ್ಲೇ ಅತಿ ದೊಡ್ಡ ಸಾರ್ವಜನಿಕ ನಿಧಿಯ ಆರೋಗ್ಯ ವಿಮಾ ಯೋಜನೆಯಾಗಿದ್ದು, ದ್ವಿತೀಯ ಮತ್ತು ತೃತೀಯ ಆರೈಕೆಗಾಗಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷ ರೂ.ಗಳನ್ನು ಒದಗಿಸುತ್ತದೆ. ಕಳೆದ ವರ್ಷ ಡಿಸೆಂಬರ್ 27ರವರೆಗೆ 12 ಕೋಟಿ ಕುಟುಂಬಗಳಿಗೆ ಸೇರಿದ 55 ಕೋಟಿ ಜನ ಈ ಯೋಜನೆಗೆ ಒಳಪಟ್ಟಿದ್ದರು.

ಎಂಎಸ್‌ಎಂಇಗಳಿಗೆ ಸಮರ್ಪಕವಾಗಿ ಮತ್ತು ಸಮಯೋಚಿತ ಹಣಕಾಸು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ. ಭಾರತೀಯ ಆರ್ಥಿಕತೆ ಕಳೆದ ಒಂದು ದಶಕದಲ್ಲಿ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ. 2014ರಿಂದ ಭಾರತ ದೈತ್ಯ ಸವಾಲುಗಳನ್ನು ಎದುರಿಸಿತ್ತು. ಆದರೆ ,ಸರ್ಕಾರ ಈ ಅಡೆತಡೆಗಳನ್ನು ನಿವಾರಿಸಿದೆ. ರಚನಾತ್ಮಕ ಸುಧಾರಣೆಗಳನ್ನು ಪ್ರಾರಂಭಿಸಿದೆ. ಜನಪರ ಸುಧಾರಣೆಗಳಿಗೆ ಒತ್ತು ನೀಡಲಾಗಿದೆ. ಉದ್ಯೋಗ ಸೃಷ್ಟಿ ಮತ್ತು ಉದ್ಯಮಶೀಲತೆಗಳನ್ನು ಉತ್ತೇಜಿಸಲಾಗಿದೆ. ಅಭಿವೃದ್ಧಿ ಉಪಕ್ರಮಗಳು ಬೃಹತ್ ಪ್ರಮಾಣದಲ್ಲಿ ಜನರನ್ನು ತಲುಪಿವೆ ಎಂದು ಹೇಳಿದರು.

ಅಂತರ್ಗತ ಅಭಿವೃದ್ಧಿ ಉಪಕ್ರಮಗಳು ವಸತಿ, ನೀರು, ವಿದ್ಯುತ್, ಅಡುಗೆ ಅನಿಲ ಮತ್ತು ಆರ್ಥಿಕ ಸೇರ್ಪಡೆಯಂತಹ ಅಗತ್ಯ ಸೇವೆಗಳೊಂದಿಗೆ ಮನೆಗಳು ಮತ್ತು ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡಿವೆ. 80 ಕೋಟಿ ಜನರಿಗೆ ಉಚಿತ ಪಡಿತರವನ್ನು ಒದಗಿಸುವ ಮೂಲಕ ಆಹಾರ ಭದ್ರತೆಗೆ ಸಂಬಂಧಿಸಿದ ಕಳವಳವನ್ನು ನಿವಾರಿಸಲಾಗಿದೆ ಎಂದು ತಿಳಿಸಿದರು.

ನಮ್ಮ ರಾಷ್ಟ್ರದ ಬೆನ್ನೆಲುಬಾಗಿರುವ ರೈತರಿಗೆ ಬೆಂಬಲವನ್ನು ಖಾತ್ರಿಪಡಿಸುವ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (MSP) ಕಾಲಕಾಲಕ್ಕೆ ಹೆಚ್ಚಿಸಲಾಗಿದೆ. ಮೂಲಭೂತ ಅವಶ್ಯಕತೆಗಳ ಪೂರೈಕೆಯು ಗ್ರಾಮೀಣ ಪ್ರದೇಶಗಳಲ್ಲಿ ನೈಜ ಆದಾಯದಲ್ಲಿ ಗಮನಾರ್ಹ ಹೆಚ್ಚಳಕ್ಕೆ ಕಾರಣವಾಗಿದೆ. ಸಮಾಜದ ಎಲ್ಲಾ ಜಾತಿಗಳು ಮತ್ತು ಸ್ತರಗಳನ್ನು ಒಳಗೊಳ್ಳುವ ಸಮಗ್ರ, ಅಂತರ್ಗತ ಮತ್ತು ವ್ಯಾಪಕ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದರು.

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಮಹತ್ವಾಕಾಂಕ್ಷೆಯ ಕಡೆಗೆ ಕೆಲಸ ಮಾಡುವುದು ನಮ್ಮ ಗುರಿ. ನಮ್ಮ ಪ್ರಯತ್ನಗಳು ಸಮಾಜದ ಪ್ರತಿಯೊಂದು ವಿಭಾಗವನ್ನೂ ಒಳಗೊಳ್ಳುವ ಸಮಗ್ರ ಪ್ರಗತಿಯತ್ತ ನಿರ್ದೇಶಿಸಲ್ಪಟ್ಟಿವೆ ಎಂದು ತಿಳಿಸಿದರು. (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *