ಚಂಡೀಗಢ ಮೇಯರ್ ಚುನಾವಣೆ ಕುರಿತು ‘ಸುಪ್ರೀಂ’ ಆಕ್ರೋಶ ಬಿ.ಜೆ.ಪಿ.ಗೆ ಮುಖಭಂಗ

ಪ್ರಜಾಪ್ರಭುತ್ವದ ಕಗ್ಗೊಲೆಗೆ ಅವಕಾಶ ನೀಡುವುದಿಲ್ಲ’: ಚಂಡೀಗಢ ಮೇಯರ್ ಚುನಾವಣೆ ಕುರಿತು ‘ಸುಪ್ರೀಂ’ ಆಕ್ರೋಶ

ಚಂಡೀಗಢ ಮೇಯರ್ ಚುನಾವಣೆ ಪ್ರಕ್ರಿಯೆ ಕುರಿತು ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ಪ್ರಜಾಪ್ರಭುತ್ವದ ಕಗ್ಗೊಲೆಗೆ ಅವಕಾಶ ನೀಡುವುದಿಲ್ಲ ಎಂದು ಕಿಡಿಕಾರಿದೆ.

Chandigarh-mayor-elections

ನವದೆಹಲಿ: ಚಂಡೀಗಢ ಮೇಯರ್ ಚುನಾವಣೆ ಪ್ರಕ್ರಿಯೆ ಕುರಿತು ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ಪ್ರಜಾಪ್ರಭುತ್ವದ ಕಗ್ಗೊಲೆಗೆ ಅವಕಾಶ ನೀಡುವುದಿಲ್ಲ ಎಂದು ಕಿಡಿಕಾರಿದೆ.

ಚಂಡೀಗಢ ಮೇಯರ್ ಚುನಾವಣೆಗೆ ಸಂಬಂಧಿಸಿದ ವೀಡಿಯೋಗ್ರಫಿ ಸೇರಿದಂತೆ ಎಲ್ಲಾ ಮತಪತ್ರಗಳು ಮತ್ತು ಇತರ ಮೂಲ ದಾಖಲೆಗಳನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ರಿಜಿಸ್ಟ್ರಾರ್‌ಗೆ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ.

ಮೇಯರ್ ಚುನಾವಣೆಯ ರಿಟರ್ನಿಂಗ್ ಆಫೀಸರ್ ಮತಪತ್ರಗಳನ್ನು ತಿದ್ದುವ ಅಥವಾ ವಿರೂಪಗೊಳಿಸುವ ಮೂಲಕ ಪ್ರಜಾಪ್ರಭುತ್ವವನ್ನು ಕೊಲೆ ಮಾಡುತ್ತಿದ್ದಾರೆಯೇ? ಪ್ರಜಾಪ್ರಭುತ್ವವನ್ನು ಈ ರೀತಿ ಕೊಲೆ ಮಾಡಲು ನಾವು ಅನುಮತಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಕಿಡಿಕಾರಿದೆ. ಚಂಡೀಘಡ ಮೇಯರ್ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಮನೋಜ್ ಸೋಂಕರ್ ವಿರುದ್ಧ ಸೋತಿದ್ದ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ಕುಲದೀಪ್ ಧಲೋರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ನೋಟಿಸ್ ಜಾರಿ ಮಾಡುವಾಗ ಈ ರೀತಿ ಹೇಳಿದೆ.

ಅಲ್ಲದೆ ಫೆಬ್ರವರಿ 7 ರಂದು ನಿಗದಿಯಾಗಿದ್ದ ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಸಭೆಯನ್ನು ಮುಂದೂಡಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಇಂದಿನ ವಿಚಾರಣೆ ವೇಳೆ ಚುನಾವಣಾಧಿಕಾರಿ ಅನಿಲ್‌ ಮಸಿಹ್‌ ವಿರುದ್ಧ ಸುಪ್ರೀಂ ಕೋರ್ಟ್‌ ಕಿಡಿಕಾರಿದೆಯಲ್ಲದೆ ಅವರು ಮತ ಪತ್ರಗಳಲ್ಲಿ ಗೀಚಿದ್ದಾರೆಂದು ತಿಳಿಯುತ್ತದೆ ಎಂದು ಹೇಳಿದೆ. “ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅವರೇಕೆ ಕ್ಯಾಮೆರಾ ನೋಡುತ್ತಿದ್ದರು? ಸಾಲಿಸಿಟರ್‌ ಅವರೇ ಇದು ಪ್ರಜಾಪ್ರಭುತ್ವದ ಅಪಹಾಸ್ಯ, ಕಗ್ಗೊಲೆ,” ಎಂದು ಸಿಜೆಐ ಹೇಳಿದರು. 

ಚಂಡೀಗಢ ಮೇಯರ್‌ ಚುನಾವಣೆಯಲ್ಲಿ ಎಂಟು ಮತಗಳನ್ನು ಚುನಾವಣಾಧಿಕಾರಿ ಅಮಾನ್ಯಗೊಳಿಸಿದ ನಂತರ ಬಿಜೆಪಿಗೆ 16 ಮತಗಳು ಹಾಗೂ ಆಪ್‌, ಕಾಂಗ್ರೆಸ್‌ ಮೈತ್ರಿಕೂಟಕ್ಕೆ 12 ಮತಗಳು ದೊರೆತು ಬಿಜೆಪಿಯ ಮನೋಜ್‌ ಸೋಂಕರ್‌ ಅವರನ್ನು ಮೇಯರ್‌ ಆಗಿ ಆಯ್ಕೆಗೊಳಿಸಿದ್ದು ಭಾರೀ ವಿವಾದಕ್ಕೀಡಾಗಿತ್ತು.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *