ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ, ಗ್ಯಾರಂಟಿ ಯೋಜನೆಗೆ ಬಹುಪರಾಕ್!

ರಾಜ್ಯ ಬಜೆಟ್ ಅಧಿವೇಶನ: ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ, ಗ್ಯಾರಂಟಿ ಯೋಜನೆಗೆ ಬಹುಪರಾಕ್!

ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದ್ದು, ವಿಧಾನಸಭೆಯಲ್ಲಿ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೂಟ್ ಅವರು ಉಭಯ ಸದನಗಳನ್ನು ಉದ್ದೇಶಿಸಿ ಜಂಟಿ ಸದನ ಭಾಷಣ ಮಾಡಿದ್ದು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗೆ ಬಹುಪರಾಕ್ ಹೇಳಿದ್ದಾರೆ.

Governor-Thawar-Chand-Gehlo

ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದ್ದು, ವಿಧಾನಸಭೆಯಲ್ಲಿ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೂಟ್ ಅವರು ಉಭಯ ಸದನಗಳನ್ನು ಉದ್ದೇಶಿಸಿ ಜಂಟಿ ಸದನ ಭಾಷಣ ಮಾಡಿದ್ದು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗೆ ಬಹುಪರಾಕ್ ಹೇಳಿದ್ದಾರೆ.

ವಿಧಾನಮಂಡಲ ಬಜೆಟ್​​ ಅಧಿವೇಶನ ಆರಂಭವಾಗಿದ್ದು, ಥಾವರ್ ಚಂದ್ ಗೆಹ್ಲೋಟ್‌ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ್ದು, ಮಂಗಳವಾರದಿಂದ ಮೂರು ದಿನಗಳ ಕಾಲ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಚರ್ಚೆ ನಡೆಯಲಿದೆ. 16ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.

ಇಂದು ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ‘ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ (Karnataka Government) ‘ಗ್ಯಾರಂಟಿ’ ಯೋಜನೆಗಳು (Guarantee schemes) ಮಾದರಿಯಾಗಿವೆ. ಸರ್ಕಾರವು ನಡೆ ನುಡಿಗಳಗಳನ್ನು ಒಂದಾಗಿಸಿಕೊಂಡು ಕೆಲಸ ಮಾಡುತ್ತಿದೆ. ಕರ್ನಾಟಕ ಮಾದರಿಯನ್ನು ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಅನುಸರಿಸುತ್ತಾ ಬಂದಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಡವರಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾಂತ್ವನವನ್ನು ಒದಗಿಸಿವೆ. ಶಕ್ತಿ, ಅನ್ನಭಾಗ್ಯ, ಯುವನಿಧಿ, ಗೃಹಲಕ್ಷ್ಮೀ, ಗೃಹಜ್ಯೋತಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ತೃಪ್ತಿ ನೀಡಿವೆ ಎಂದರು.

ಆರ್ಥಿಕ ಅಸಮಾನತೆಯಿಂದ ಅಶಕ್ತರಾಗಿರುವ ಜನತೆಯ ಬದುಕಿಗೆ ಕೇವಲ ಈ ಗ್ಯಾರಂಟಿಗಳು ಮಾತ್ರ ಸಾಕಾಗುವುದಿಲ್ಲ ಎನ್ನುವ ಅರಿವು ಸರ್ಕಾರಕ್ಕೆ ಇದೆ. ಸರ್ಕಾರವು ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಿಂದ ಎರಡು ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಗಿಂತ ಹೊರಗೆ ಬಂದು ಮಧ್ಯಮ ವರ್ಗದ ಸ್ಥಿತಿಗೆ ಏರುತ್ತಿವೆ. ಸರ್ಕಾರದ ಒಂದು ನಿರ್ಣಯದಿಂದ ರಾಜ್ಯದ 5 ಕೋಟಿಗೂ ಹೆಚ್ಚು ಜನರು ಮಧ್ಯಮ ವರ್ಗದ ಸ್ಥಿತಿಗೆ ಬಂದಿರುವುದು ಜಾಗತಿಕ ದಾಖಲೆಯಾಗಿದೆ. ನನ್ನ ಸರ್ಕಾರ ಭವಿಷ್ಯದತ್ತ ದೃಷ್ಟಿ ನೆಟ್ಟಿರುವ ಸರ್ಕಾರ. ಈ ಎಂಟು ತಿಂಗಳಲ್ಲಿ 77,000 ಕೋಟಿಗೂ ಹೆಚ್ಚು ಬಂಡವಾಳವು ರಾಜ್ಯಕ್ಕೆ ಹರಿದು ಬಂದಿದೆ.

ಜನವರಿ ತಿಂಗಳ ಅಂತ್ಯದವರೆಗೆ ನಮ್ಮ ರಾಜ್ಯದ ಜಿಎಸ್‌ಟಿ ಸಂಗ್ರಹಣೆಯ ಬೆಳವಣಿಗೆ ದರವು ಇಡೀ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಲು ಖುಷಿಪಡುತ್ತೇನೆ. ಬರಗಾಲವಿದ್ದರೂ ರಸ್ತೆ, ನೀರು, ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಕೈಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ರಾಜ್ಯವು ದಾಖಲಾರ್ಹ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಬಜೆಟ್​​ನಲ್ಲಿ ಘೋಷಿಸಿದ ಒಟ್ಟು ಘೋಷಣೆಗಳಲ್ಲಿ ಶೇಕಡ 97 ರಷ್ಟು ಘೋಷಣೆಗಳಿಗೆ ಅಧಿಸೂಚನೆ ಹೊರಡಿಸಿ ಕಾರ್ಯಗತಗೊಳಿಸಲಾಗುತ್ತಿರುವುದು ದಾಖಲೆಯ ಸಂಗತಿ ಎಂದು ಹೇಳಿದರು.

ಅತಿಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯ ಕರ್ನಾಟಕ
ವಿವಿಧ ಮೂಲಗಳಿಂದ ಸಿಗಬೇಕಾದಷ್ಟು ಸಂಪನ್ಮೂಲಗಳು ಸಿಗುತ್ತಿಲ್ಲ. ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆದರೆ ತೆರಿಗೆಯ ಪಾಲು ಪಡೆಯುವ ವಿಚಾರದಲ್ಲಿ 10ನೇ ಸ್ಥಾನದಲ್ಲಿದೆ. ಈ ಹಿನ್ನಲೆಯಲ್ಲಿ ನಮಗೆ ನ್ಯಾಯ ಮತ್ತು ನ್ಯಾಯಯುತವಾಗಿ ಸಿಗಬೇಕಾದ ಪಾಲನ್ನು ಪಡೆಯಲು ನನ್ನ ಸರ್ಕಾರವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಹೊಸ ಸರ್ಕಾರ ರಚನೆಯಾದ ನಂತರ ಕಂದಾಯ ಇಲಾಖೆಯ ಜಿಲ್ಲಾಧಿಕಾರಿ ಉಪವಿಭಾಗಾಧಿಕಾರಿಗಳಲ್ಲಿ ಒಟ್ಟು 93,350 ಪ್ರಕರಣಗಳು ಬಾಕಿ ಇದ್ದು, ಈ ಪೈಕಿ 2024 ರ ಫೆಬ್ರವರಿ 5 ರ ವರೆಗೆ 84,253 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. 5787 ಪ್ರಕರಣಗಳು ಬಾಕಿ ಉಳಿದಿವೆ ಎಂದು ತಿಳಿಸಿದರು.

ಬರಪೀಡಿತ ಜಿಲ್ಲೆಗಳಿಗೆ 324 ಕೋಟಿ ಬಿಡುಗಡೆ
ರಾಜ್ಯದ 240 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಅವುಗಳಲ್ಲಿ 196 ತಡಲೂಕುಗಳನ್ನ ತೀವ್ರ ಬರಪೀಡಿತ ಎಂದು ವರ್ಗೀಕರಿಸಲಾಗಿದೆ. ಕುಡಿಯುವ ನೀರು ಮತ್ತು ಮೇವಿನ ಲಭ್ಯತೆ ಕಾರ್ಯಕ್ರಮಗಳನ್ನು ಕೈಗೊಳ್ಳಲು 31 ಜಿಲ್ಲೆಗಳಿಗೆ 324 ಕೋಟಿ ಬಿಡುಗಡೆ ಮಾಡಲಾಗಿದೆ. ಜನರ ಅನುಕೂಲಕ್ಕಾಗಿ ನಾಮಫಲಕಗಳ ಶೇಕಡ 60ರಷ್ಟು ಭಾಗವು ಕನ್ನಡದಲ್ಲಿ ಇರಬೇಕೆಂದು ತೀರ್ಮಾನಿಸಿ ಕಾನೂನು ರೂಪಿಸಿ ಅನುಷ್ಠಾನ ಮಾಡಲು ಕ್ರಮವಹಿಸಿದ್ದೇವೆ. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022 ಕಾಯ್ದೆಯನ್ನು ರೂಪಿಸಲಾಗಿದೆ. ಸದ್ಯದಲ್ಲೇ ಅದು ಅನುಷ್ಠಾನಕ್ಕೆ ಬರಲಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆಗೊಳಿಸಲು ಟನಲ್ ರಸ್ತೆಯನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಪ್ರಸ್ತುತ ಟನಲ್ ನಿರ್ಮಾಣದ ಕುರಿತು ಸಾಧಕ ವರದಿಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಅವರು ಭಾಷಣದಲ್ಲಿ ತಿಳಿಸಿದರು.

ಅಧಿವೇಶನ ಆರಂಭಕ್ಕೂ ಮುನ್ನ ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲರಿಗೆ ಭವ್ಯ ಸ್ವಾಗತ ದೊರೆಯಿತು. ವಿಧಾನಸೌಧ ಗ್ರ್ಯಾಂಡ್ ಸ್ಟೆಪ್ ದ್ವಾರದಲ್ಲಿ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಅವರಿಗೆ ಮೈಸೂರು ಕರ್ನಾಟಿಕ್ ಬ್ಯಾಂಡ್, ಮೈಸೂರು ಇಂಗ್ಲಿಷ್ ಬ್ಯಾಂಡ್, ಮೌಂಟೆಡ್ ಲ್ಯಾನ್ಸ್ ಮೇನ್, ಮೌಂಟೆಡ್ ಹಾರ್ಸ್ ಎಸ್ಕಾರ್ಟ್, ಸಿಎಆರ್ ಪೊಲೀಸ್ ಬ್ಯಾಂಡ್ ಮೂಲಕ ಸ್ವಾಗತ ಕೋರಲಾಯಿತು. ರಾಜ್ಯಪಾಲ ಗೆಹ್ಲೋಟ್​ರನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದರು. ಈ ವೇಳೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಇತರರು ಹಾಜರಿದ್ದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *