budget2024- ಮನುಷ್ಯತ್ವ ಇಲ್ಲದ ಬಜೆಟ್, ಜಿಲ್ಲೆಯ ಜನರಿಗೆ, ಜನರ ಸ್ವಾಭಿಮಾನಕ್ಕೆ ಅವಮಾನ ಮಾಡಿದ್ದೀರಿ :- ಅನಂತಮೂರ್ತಿ ಹೆಗಡೆ

ಜನರು ರಸ್ತೆ ಮೇಲೆ ಸಾಯುವುದನ್ನು ನೋಡುತ್ತಾ ಸರ್ಕಾರ ಮಜಾ ತೆಗೆದುಕೊಳ್ಳುತ್ತಿದೆ

ಶಿರಸಿ:- ಉಸ್ತುವಾರಿ ಸಚಿವ ಮಂಕಾಳ ವೈದ್ಯರೆ ನಿಮ್ಮ ಸರ್ಕಾರ
ಜಿಲ್ಲೆಯ ಜನರಿಗೆ ಅವಮಾನ ಮಾಡಿದೆ ,ಉತ್ತರ ಕನ್ನಡದ ಜನ ನಿಮ್ಮನ್ನು ಯಾವತ್ತೂ ಕ್ಷಮಿಸುವುದಿಲ್ಲ, ನಮ್ಮ ಸ್ವಾಭಿಮಾನಕ್ಕೆ ಪೆಟ್ಟುಬಿದ್ದಿದೆ. ಇದರ ಪರಿಣಾಮ ಮುಂದಿನ ದಿನದಲ್ಲಿ ನೋಡುವಿರಿ, ಜನರಿಗೆ ಅಸ್ಪತ್ರೆ ಕೊಡಿಸಲು ವಿಫಲರಾದ ತಾವು ತಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಾಮಾಜಿಕ ಹೋರಾಟಗಾರ ಹಾಗೂ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  ಸಚಿವರೇ, ತಮಗೆ  ಒಂದು ಪ್ರಶ್ನೆ,

ತಮಗೆ ಜನರ ಬಗ್ಗೆ ಕರುಣೆ ಇಲ್ಲವೇ? ಸರಕಾರ ಬಂದು 9 ತಿಂಗಳಾದರೂ ಅಸ್ಪತ್ರೆ ಬಗ್ಗೆ ಒಂದೇ ಒಂದು ಸಭೆ ಇಲ್ಲ, ಹಿಂದಿನ ಬಿಜೆಪಿ ಸರ್ಕಾರದಲ್ಲಿ ಘೋಷಣೆಯಾಗಿದ್ದ ಆಸ್ಪತ್ರೆಗೆ ಹಣ ಬಿಡುಗಡೆ ಇಲ್ಲ,

ತಮಗೆ ಲಾಭ ಆಗುವ ಯೋಜನೆಗೆ ಸಾವಿರಾರು ಕೋಟಿ ಕೊಡುತ್ತೀರಿ, ಆಸ್ಪತ್ರೆಗೆ ಒಂದು ರೂಪಾಯಿ ಕೂಡ ಇಲ್ಲ, ಅಲ್ಲಿಗೆ ಸರ್ಕಾರಕ್ಕೆ ಮನುಷ್ಯತ್ವ ಇಲ್ಲ ಅಂತ ನಮಗೆ ಮನವರಿಕೆಯಾಗಿದೆ. ಜನ ರಕ್ತದ ಮಡುವಿನಲ್ಲಿ ರಸ್ತೆ ಮೇಲೆ ಬಿದ್ದು ಒದ್ದಾಡುವಾಗ ಪಡುವ ನೋವು, ಅಸ್ಪತ್ರೆಗಾಗಿ ಮಂಗಳೂರಿಗೆ ಹೋಗುವಾಗ ಪಡುವ ಕಷ್ಟ, ನಿಮ್ಮ ಸರಕಾರವನ್ನು ಶಾಪ ಹಾಕದೇ ಬಿಡುವುದಿಲ್ಲ. ಕಳೆದ 2 ಬಜೆಟ್ ನಲ್ಲಿ ಹಣ ಕೊಡದೇ ತಮಾಷೆ ಮಾಡುತ್ತಿದ್ದೀರಿ ಅಲ್ಲವೇ ?
ಎಂದು ಪ್ರಶ್ನಿಸಿದ್ದಾರೆ.

ಇಷ್ಟು ಹೋರಾಟ ಆದರೂ ಒಂದೇ ಒಂದು ಮಾತನಾಡದ ನೀವು ಶಾಸಕನಾಗಿ ಆಯ್ಕೆಯಾದರೆ ಸ್ವಂತ ಹಣದಿಂದ ಅಸ್ಪತ್ರೆ ಮಾಡುತ್ತೇನೆ ಎಂದು ಸೀರಿಯಸ್ಸಾಗಿ ಹೇಳಿದ್ದೀರಾ ಅಥವಾ ತಮಾಷೆ ಮಾಡಿದ್ದೀರಾ? ತಿಳಿಸಿ. ಅಸ್ಪತ್ರೆ ಮಾಡುವುದಿಲ್ಲ ಅಂತ ಆದರೆ ಹೇಳಿಬಿಡಿ, ನಮಗೆ ಏನು ಮಾಡಬೇಕೆಂದು ಗೊತ್ತಿದೆ.
ಮುಂದಿನ ದಿನದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮದಲ್ಲಿ ಓಡಾಡಿ ಜನಾಂದೋಲನ ನಿರ್ಮಾಣ ಮಾಡಿ, ನಿಮ್ಮ ರಾಜೀನಾಮೆ ಮತ್ತು ಅಸ್ಪತ್ರೆ ನಿರ್ಮಾಣಕ್ಕೆ ಹೋರಾಟ ಮಾಡುತ್ತೇವೆ.
ಹೋರಾಟದಿಂದ ಏನಾಗುವುದು ಅಂತ ತಾತ್ಸಾರ ಬೇಡ , ಭಾರತಕ್ಕೆ ಸ್ವಾತಂತ್ರ್ಯ ಬಂದಿದ್ದೆ ಹೋರಾಟದಿಂದ
ನೆನಪಿಡಿ.
ಹಿಂದಿನ ಸರ್ಕಾರ ಯಾಕೆ ಮಾಡಲಿಲ್ಲ ಅಂತ ಕೇಳಬೇಡಿ, ಅವರು ಮಾಡಿಲ್ಲ ಅಂತಾನೇ ನಿಮಗೆ ಜನ ಅಧಿಕಾರ ಕೊಟ್ಟಿದ್ದಾರೆ ,
ನಾನು ಏಕಾಂಗಿ ಅಲ್ಲ, ನನ್ನ ಜೊತೆ ಸಾವಿರಾರು ಬಿಸಿ ರಕ್ತದ ಯುವಕರಿದ್ದಾರೆ , ಮುಂದಿನ ದಿನ ಜನರ ಆಕ್ರೋಶದ ಪರಿಣಾಮ ಏನಾಗುತ್ತದೆ ನೋಡಿ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *