63 ಸ್ಥಾನಗಳಲ್ಲಿ ಎಸ್ ಪಿ, 17 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧೆ; ಉತ್ತರ ಪ್ರದೇಶದಲ್ಲಿ ಲೋಕಸಮರಕ್ಕೆ ನಾಂದಿ

ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ 63 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ 17 ಸ್ಥಾನಗಳಲ್ಲಿ ಚುನಾವಣೆಗೆ ಸ್ಪರ್ಧಿಸಲಿದೆ.

Representational

ಲಖನೌ: ಲೋಕಸಭೆ ಚುನಾವಣೆಗೆ ಸಮಾಜವಾದಿ ಪಕ್ಷ(ಎಸ್ ಪಿ) ಮತ್ತು ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಬಹುತೇಕ ಅಂತಿಮವಾಗಿದ್ದು, ಎಸ್ ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಪಕ್ಷದ ನಾಯಕ ರವಿದಾಸ್ ಮೆಹ್ರೋತ್ರಾ 2024ರ ಸಾರ್ವತ್ರಿಕ ಚುನಾವಣೆಗಾಗಿ ಕಾಂಗ್ರೆಸ್ ಜೊತೆ ಮೈತ್ರಿಯನ್ನು ಖಚಿತಪಡಿಸಿದ್ದಾರೆ.

ಮೈತ್ರಿಯ ವಿವರಗಳನ್ನು ಹಂಚಿಕೊಂಡ ಮೆಹ್ರೋತ್ರಾ, ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ 63 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ 17 ಸ್ಥಾನಗಳಲ್ಲಿ ಚುನಾವಣೆಗೆ ಸ್ಪರ್ಧಿಸಲಿದೆ ಎಂದು ಹೇಳಿದರು.

“ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಲಿವೆ. ಇದು ಇಂಡಿಯಾ ಮೈತ್ರಿಕೂಟವನ್ನು ಬಲಪಡಿಸುತ್ತದೆ ಮತ್ತು 2024 ರಲ್ಲಿ ಇಂಡಿಯಾ ಮೈತ್ರಿಕೂಟ ಕೇಂದ್ರದಲ್ಲಿ ಸರ್ಕಾರ ರಚಿಸುತ್ತದೆ. ವಿರೋಧ ಪಕ್ಷಗಳು ಒಟ್ಟಾಗಿ ಚುನಾವಣೆಯಲ್ಲಿ ಸ್ಪರ್ಧಿಸಲಿವೆ. ನಾವು ಬಿಜೆಪಿಯೇತರ ಮತಗಳ ಚದುರುವಿಕೆಯನ್ನು ತಡೆಯಲು ಯತ್ನಿಸಿದ್ದೇವೆ” ಮೆಹ್ರೋತ್ರಾ ಅವರು ಎಎನ್‌ಐಗೆ ತಿಳಿಸಿದ್ದಾರೆ.

Representational

“ಸಮಾಜವಾದಿ ಪಕ್ಷ 63 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ 17 ಸ್ಥಾನಗಳಲ್ಲಿ ಚುನಾವಣೆಗೆ ಸ್ಪರ್ಧಿಸಲಿವೆ. ನಾವು ಉತ್ತರ ಪ್ರದೇಶದಲ್ಲಿ ಎಲ್ಲಾ 80 ಸ್ಥಾನಗಳನ್ನು ಗೆಲ್ಲಲು ಪ್ರಯತ್ನಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಕೇಂದ್ರೀಯ ಸಂಸ್ಥೆಗಳಾದ ಜಾರಿ ನಿರ್ದೇಶನಾಲಯ(ಇಡಿ), ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಗಳನ್ನು ದುರುಪಯೋಗಪಡಿಸಿಕೊಂಡಿದೆ ಮತ್ತು ಈ ಮೂಲಕ ವಿರೋಧ ಪಕ್ಷಗಳನ್ನು ದುರ್ಬಲಗೊಳಿಸಲು ಯತ್ನಿಸುತ್ತಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಆರೋಪಿಸಿದ್ದಾರೆ.

ಈ ಮಧ್ಯೆ, ಅಖಿಲೇಶ್ ಯಾದವ್ ಸಹ ಕಾಂಗ್ರೆಸ್ ಜೊತೆ ಮೈತ್ರಿಯನ್ನು ಖಚಿತಪಡಿಸಿದ್ದು, ಶೀಘ್ರದಲ್ಲೇ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಹೇಳಿದ್ದಾರೆ. ಎರಡು ಪಕ್ಷಗಳ ನಡುವೆ ಯಾವುದೇ ಸಂಘರ್ಷವಿಲ್ಲ ಎಂದು ಹೇಳಿದ ಅವರು, ಮುಂದಿನ ದಿನಗಳಲ್ಲಿ ಎಲ್ಲವನ್ನು ಸ್ಪಷ್ಟಪಡಿಸಲಾಗುವುದು ಎಂದು ಒತ್ತಿ ಹೇಳಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *