ಅನಂತ್ ಕುಮಾರ್ ಹೆಗಡೆ ಅವರನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕು: ಸಚಿವ ಎಂ.ಬಿ. ಪಾಟೀಲ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸುತ್ತಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರನ್ನು ಮೆಂಟರ್ (ಮಾನಸಿಕ) ಆಸ್ಪತ್ರೆಗೆ ಸೇರಿಸಬೇಕೆಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಶನಿವಾರ ಹೇಳಿದರು.
ಎಂ.ಬಿ. ಪಾಟೀಲ್
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸುತ್ತಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರನ್ನು ಮೆಂಟರ್ (ಮಾನಸಿಕ) ಆಸ್ಪತ್ರೆಗೆ ಸೇರಿಸಬೇಕೆಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಶನಿವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಐದು ವರ್ಷಗಳಿಂದ ಜನರಿಂದ ದೂರ ಉಳಿದಿದ್ದ ಹೆಗಡೆಯವರು ಇದೀಗ ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಣಿಸಿಕೊಳ್ಳುತ್ತಿದ್ದಾರೆ. ಇಲ್ಲಿಯವರೆಗೆ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ತಮ್ಮ ಮತದಾರರನ್ನು ಭೇಟಿ ಮಾಡಿಲ್ಲ. ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣೆಯಲ್ಲಿ ಸ್ಪರ್ಧಿಸುವ ಏಕೈಕ ಗುರಿಯೊಂದಿಗೆ ಹಿಂದೂ ಮತ್ತು ಮುಸ್ಲಿಮರ ಬಗ್ಗೆ ಹೇಳಿಕೆಗಳನ್ನು ನೀಡಲು ಪ್ರಾರಂಭಿಸಿದ್ದಾರೆ ಎಂದು ಹೇಳಿದರು.
ಈ ಹಿಂದೆ ಕೇಂದ್ರ ಸಚಿವರಾಗಿದ್ದಾಗ ಸಂವಿಧಾನ ಬದಲಿಸಬೇಕು ಎಂದು ಹೇಳಿಕೆ ನೀಡಿದ್ದರು. ಇಂತಹವರನ್ನು ಜನ ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷಿಸಬೇಕು ಎಂದು ತಿಳಿಸಿದರು.
ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಮಾತನಾಡಿ ದೀಪ ಆರೋ ಮುಂಚೆ ದೊಡ್ಡದಾಗಿ ಉರಿಯುವಂತೆ ಸಂಸದ ಅನಂತಕುಮಾರ್ ಹೆಗಡೆ ವರ್ತಿಸುತ್ತಿದ್ದಾರೆಂದು ಕಿಡಿಕಾರಿದರು.
ಅನಂತಕುಮಾರ್ ಹೆಗಡೆ ರಾಜಕೀಯವಾಗಿ ಕಳೆದು ಹೋಗುವ ಮುನ್ನ ಅವಾಚ್ಯ ಶಬ್ದಗಳಿಂದ ಮಾತನಾಡುತ್ತಿದ್ದಾರೆ. ತಮ್ಮ ಅಸ್ತಿತ್ವವನ್ನು ತಾವೇ ಕಳೆದುಕೊಳ್ಳುತ್ತಿರುವ ಸಮಯ ಪ್ರಾರಂಭವಾಗಿದೆ. ವಿನಾಶ ಕಾಲೇ ವಿಪರೀತ ಬುದ್ಧಿ ಎಂದರು.
ಎಂ.ಬಿ. ಪಾಟೀಲ್
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸುತ್ತಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರನ್ನು ಮೆಂಟರ್ (ಮಾನಸಿಕ) ಆಸ್ಪತ್ರೆಗೆ ಸೇರಿಸಬೇಕೆಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಶನಿವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಐದು ವರ್ಷಗಳಿಂದ ಜನರಿಂದ ದೂರ ಉಳಿದಿದ್ದ ಹೆಗಡೆಯವರು ಇದೀಗ ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಣಿಸಿಕೊಳ್ಳುತ್ತಿದ್ದಾರೆ. ಇಲ್ಲಿಯವರೆಗೆ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ತಮ್ಮ ಮತದಾರರನ್ನು ಭೇಟಿ ಮಾಡಿಲ್ಲ. ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣೆಯಲ್ಲಿ ಸ್ಪರ್ಧಿಸುವ ಏಕೈಕ ಗುರಿಯೊಂದಿಗೆ ಹಿಂದೂ ಮತ್ತು ಮುಸ್ಲಿಮರ ಬಗ್ಗೆ ಹೇಳಿಕೆಗಳನ್ನು ನೀಡಲು ಪ್ರಾರಂಭಿಸಿದ್ದಾರೆ ಎಂದು ಹೇಳಿದರು.
ರಾಜ್ಯದ ಕೈಗಾರಿಕಾ ಪ್ರದೇಶಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ತ್ವರಿತ ಕ್ರಮ: ಸಚಿವ ಎಂಬಿ ಪಾಟೀಲ್
ಈ ಹಿಂದೆ ಕೇಂದ್ರ ಸಚಿವರಾಗಿದ್ದಾಗ ಸಂವಿಧಾನ ಬದಲಿಸಬೇಕು ಎಂದು ಹೇಳಿಕೆ ನೀಡಿದ್ದರು. ಇಂತಹವರನ್ನು ಜನ ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷಿಸಬೇಕು ಎಂದು ತಿಳಿಸಿದರು.
ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಮಾತನಾಡಿ ದೀಪ ಆರೋ ಮುಂಚೆ ದೊಡ್ಡದಾಗಿ ಉರಿಯುವಂತೆ ಸಂಸದ ಅನಂತಕುಮಾರ್ ಹೆಗಡೆ ವರ್ತಿಸುತ್ತಿದ್ದಾರೆಂದು ಕಿಡಿಕಾರಿದರು.
ಅನಂತಕುಮಾರ್ ಹೆಗಡೆ ರಾಜಕೀಯವಾಗಿ ಕಳೆದು ಹೋಗುವ ಮುನ್ನ ಅವಾಚ್ಯ ಶಬ್ದಗಳಿಂದ ಮಾತನಾಡುತ್ತಿದ್ದಾರೆ. ತಮ್ಮ ಅಸ್ತಿತ್ವವನ್ನು ತಾವೇ ಕಳೆದುಕೊಳ್ಳುತ್ತಿರುವ ಸಮಯ ಪ್ರಾರಂಭವಾಗಿದೆ. ವಿನಾಶ ಕಾಲೇ ವಿಪರೀತ ಬುದ್ಧಿ ಎಂದರು. (kpc)