ಸಿದ್ದಾಪುರ: ದೇಶಕ್ಕೆ ಅನ್ನ ನೀಡುತ್ತಿರುವ ರೈತಾಪಿ ಸಮೂದಾಯಕ್ಕೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಸಾಲದು ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
ಇಲ್ಲಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ರೈತ ಫಲಾನುಭವಿಗಳಿಗೆ ವಿವಿಧ ಕೃಷಿ ಪರಿಕರಗಳನ್ನು ವಿತರಿಸಿ ಮಾತನಾಡಿ, ಸರ್ಕಾರ ರೈತರಿಗೆ ಸಾಕಷ್ಟು ಸೌಲಭ್ಯವನ್ನು ರಿಯಾಯಿತಿ ದರದಲ್ಲಿ ನೀಡುತ್ತಿದೆ. ಕೃಷಿಕರಿಗೆ ಅನುಕೂಲವಾಗಲೆಂದು ಯಂತ್ರಗಳನ್ನು ನೀಡಲಾಗುತ್ತಿದೆ. ಸರ್ಕಾರದ ಸಹಾಯಧನದ ಸದುಪಯೋಗ ಪಡಿಸಿಕೊಂಡು ಉತ್ತಮ ಕೃಷಿ ಮಾಡಿ ಎಂದು ಕರೆ ನೀಡಿದರು.
ಈ ವೇಳೆ ಸಹಾಯಕ ಕೃಷಿ ನಿರ್ದೇಶಕಿ ಸುಮಾ ಎಸ್.ಎಂ., ರೈತ ಸಂಘದ ಜಿಲ್ಲಾಧ್ಯಕ್ಷ ಕೆರಿಯಪ್ಪ ನಾಯ್ಕ, ಕಾಂಗ್ರೆಸ್ ನ ಪ್ರಮುಖ ಮುಖಂಡರು, ಪಶು ವೈದ್ಯ ಇಲಾಖೆಯ ವಿವೇಕಾನಂದ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.