ಸ್ವಸ್ಥ ಸಮಾಜ ನಿರ್ಮಾಣಕ್ಕೆ ನಾಟಕ ಪೂರಕ

ಸಿದ್ದಾಪುರ
ವ್ಯವಸ್ಥಿತವಾದ ಸಮಾಜ ನಿರ್ಮಾಣ ಮಾಡುವಲ್ಲಿ ಹಾಗೂ ಸಮಾಜದ ಸ್ಥಿತಿಯನ್ನು ಜನರೆದುರು ಸಮರ್ಥವಾಗಿ ಇಡಲು ನಾಟಕ ಪ್ರದರ್ಶನ ಹೆಚ್ಚು ಪ್ರಭಾವಶಾಲಿ ಆಗಿ ಕಾರ್ಯನಿರ್ವಹಿಸುತ್ತಿದೆ ಎಂದು ಟಿಎಸ್‌ಎಸ್ ನಿರ್ದೇಶಕ ರವೀಂದ್ರ ಹೆಗಡೆ ಹಿರೇಕೈ ಹೇಳಿದರು.
ತಾಲೂಕಿನ ಹಾರ್ಸಿಕಟ್ಟಾ ಗಜಾನನೋತ್ಸವ ಸಮಿತಿಯ ಸಭಾಂಗಣದಲ್ಲಿ ರಂಗಸೌಗಂಧ ಸಿದ್ದಾಪುರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರವಾರ ಸಹಯೋಗದಲ್ಲಿ ದಿ.ಹುಲಿಮನೆ ಸೀತಾರಾಮ ಶಾಸ್ತಿç ನೆನಪಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಮೂರು ದಿನಗಳ ಗ್ರಾಮೀಣ ರಂಗೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ರಂಗ ಸೌಗಂಧ ತಂಡ ರಂಗಚಟುವಟಿಕೆಗಳನ್ನು ನಡೆಸುವದರ ಜತೆಗೆ ಸಾಧಕರಿಗೆ ರಂಗ ಗೌರವ ನೀಡಿ ಗೌರವಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಹೇಳಿದರು.
ಪತ್ರಕರ್ತ ನಾಗರಾಜ ಮತ್ತಿಗಾರ ಮಾತನಾಡಿ ರಂಗ ಸೌಗಂಧ ತಂಡ ಮುಂದಿನ ದಿನದಲ್ಲಿ ಈ ಹಿಂದಿನಂತೆ ಪೌರಾಣಿಕ ಹಾಗೂ ಐತಿಹಾಸಿಕ ನಾಟಕವನ್ನು ಪ್ರದರ್ಶನಮಾಡುವುದಕ್ಕೆ ಮುಂದಾಗಬೇಕೆಂದರು.


ಗಜಾನನೋತ್ಸವ ಸಮಿತಿ ಅಧ್ಯಕ್ಷ ಎಲ್.ಜಿ.ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಸದಸ್ಯ ಅನಂತ ಹೆಗಡೆ ಹೊಸಗದ್ದೆ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ನಾಗರಾಜ ಭಟ್ಟ ಕೆಕ್ಕಾರ ಹಾಗೂ ಲತಾ ಭಟ್ಟ ದಂಪತಿಯನ್ನು ರಂಗ ಸೌಗಂಧ ತಂಡದಿಂದ ರಂಗ ಗೌರವ ನೀಡಿ ಗೌರವಿಸಲಾಯಿತು.
ರಂಗ ಗೌರವ ಪ್ರಶಸ್ತಿ ಸ್ವೀಕರಿಸಿ ನಾಗರಾಜ ಭಟ್ಟ ಕೆಕ್ಕಾರ ಮಾತನಾಡಿ ರಂಗ ಸೌಗಂಧ ತಂಡದ ಕಾರ್ಯಚಟುವಟಿಕೆ ಕುರಿತು ಮೆಚ್ಚುಗೆವ್ಯಕ್ತಪಡಿಸಿದರು.
ನಂತರ ದಿ.ಎನ್.ಎಸ್.ರಾವ್ ಮೂಲ ರಚನೆಯ ೩೬ ಅಲ್ಲ ೬೩ ನಾಟಕವನ್ನು ಗಣಪತಿ ಹೆಗಡೆ ಹುಲಿಮನೆ ನಿರ್ದೇಶನದಲ್ಲಿ ಪ್ರದರ್ಶನಗೊಂಡಿತು,

ಶ್ರೀಪಾದ ಹೆಗಡೆ ಕೋಡನಮನೆ ವಿನ್ಯಾಸದ ರಾಜೇಂದ್ರ ಕೊಳಗಿ ಸಂಗೀತ ನಿರ್ದೇಶನ. ನಾಗರಾಜ ಜೋಗಿ ಹಾಗೂ ದತ್ತಾತ್ರಯ ಹೆಗಡೆ ಹುಕ್ಲಮಕ್ಕಿ ಸಂಗೀತ ನಿರ್ವಹಣೆ ಹಾಗೂ ಪೂರ್ಣಚಂದ್ರ ಹೆಗಡೆ ಹುಲಿಮನೆ ಮತ್ತು ಶಮಂತ ಹೆಗಡೆ ಶಿರಳಗಿ ಇವರು ತಾಂತ್ರಿಕ ಸಹಕಾರ ನೀಡಿದ್ದಾರೆ.
ರಂಗದಲ್ಲಿ ಗಣಪತಿ ಹೆಗಡೆ ಗುಂಜಗೋಡು, ಗಣಪತಿ ಭಟ್ಟ ವಡ್ಡಿನಗದ್ದೆ, ಅಜಿತ ಹೆಗ್ಗಾರಳ್ಳಿ, ಶ್ರೀಪಾದ ಹೆಗಡೆ ಕೋಡನಮನೆ, ಪ್ರವೀಣಾ ಹೆಗಡೆ ಗುಂಜಗೋಡ ವಿವಿಧ ಪಾತ್ರ ನಿರ್ವಹಿಸಿ ಮೆಚ್ಚುಗೆಗಳಿಸಿದರು.
ಗಣಪತಿ ಹೆಗಡೆ ಹುಲಿಮನೆ ಸ್ವಾಗತಿಸಿದರು.ಗಣಪತಿ ಹೆಗಡೆ ಗುಂಜಗೋಡು ಜಯರಾಮ ಭಟ್ಟ, ರಾಜಾರಾಮ ಭಟ್ಟ ಹೆಗ್ಗಾರಳ್ಳಿ ಕಾರ್ಯಕ್ರಮ ನಿರ್ವಹಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *