RSS ಸಾಮಾನ್ಯ ಕಾರ್ಯದರ್ಶಿಯಾಗಿ ದತ್ತಾತ್ರೇಯ ಹೊಸಬಾಳೆ ಪುನರಾಯ್ಕೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ಪುನರಾಯ್ಕೆ ಮಾಡಲಾಗಿದೆ.

ದತ್ತಾತ್ರೇಯ ಹೊಸಬಾಳೆ

ದತ್ತಾತ್ರೇಯ ಹೊಸಬಾಳೆ

ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ಪುನರಾಯ್ಕೆ ಮಾಡಲಾಗಿದೆ.

ಕರ್ನಾಟಕ ಮೂಲದ ದತ್ತಾತ್ರೇಯ ಹೊಸಬಾಳೆ ಅವರು ಭಾನುವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ (ಪ್ರಧಾನ ಕಾರ್ಯದರ್ಶಿ) ಆಗಿ ಮರು ಆಯ್ಕೆಯಾಗಿದ್ದಾರೆ. ಸಂಘ ಪರಿವಾರದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಅಖಿಲ ಭಾರತೀಯ ಪ್ರತಿನಿಧಿ ಸಭಾ (ABPS) 2024-2027ರ ಮೂರು ವರ್ಷಗಳ ಅವಧಿಗೆ ಆರೆಸ್ಸೆಸ್‌ನ ನಂ. 2 ಹುದ್ದೆಗೆ ಹೊಸಬಾಳೆ ಅವರನ್ನು ಆಯ್ಕೆ ಮಾಡಿದೆ ಎಂದು ತಿಳಿದುಬಂದಿದೆ.

ಆರು ವರ್ಷಗಳ ನಂತರ ಆರ್‌ಎಸ್‌ಎಸ್‌ನ ಕೇಂದ್ರ ಕಚೇರಿ ನಾಗ್ಪುರದಲ್ಲಿ ಸಭೆ ನಡೆಯುತ್ತಿದೆ. ಆರ್‌ಎಸ್‌ಎಸ್‌ನ ವಿವಿಧ ಸಂಘಟನೆಗಳ 1,500ಕ್ಕೂ ಹೆಚ್ಚು ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ. ನಾಗ್ಪುರದಲ್ಲಿ ನಡೆಯುತ್ತಿರುವ ಎಬಿಪಿಎಸ್ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದ್ದು, 9 ವರ್ಷಗಳ ಕಾಲ ಮೂರು ಅವಧಿಗೆ ಹುದ್ದೆಯನ್ನು ಅಲಂಕರಿಸಿದ ಸುರೇಶ್ ‘ಭೈಯಾಜಿ’ ಜೋಶಿ ಅವರ ಬದಲಿಗೆ 2021 ರಿಂದ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಅವರು ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು.

ಪ್ರಸ್ತುತ ಡಾ. ಮೋಹನ್‌ ಭಾಗವತ್‌ ಅವರು ನಂ.1 ಸ್ಥಾನವಾದ ಸರಸಂಘಚಾಲಕ್‌ ಪದವಿಯಲ್ಲಿದ್ದು, ಅವರ ನಂತರದ ಸ್ಥಾನದಲ್ಲಿ ಅಂದರೆ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಅವರು ಕಾರ್ಯ ನಿರ್ವಹಿಸಲಿದ್ದಾರೆ.

70 ವರ್ಷದ ದತ್ತಾತ್ರೇಯ ಹೊಸಬಾಳೆ ಕರ್ನಾಟಕದ ಶಿವಮೊಗ್ಗದ ಸೊರಬ ಮೂಲದವರಾಗಿದ್ದಾರೆ. (kp.c)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *