ಲೋಕಸಭೆ ೨೦೨೪- ಕಾಂಗ್ರೆಸ್‌ ಪಟ್ಟಿ ಪ್ರಕಟ..

ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್: ಐವರು ಸಚಿವರ ಮಕ್ಕಳಿಗೆ ಟಿಕೆಟ್; ಅಧಿಕೃತ ಘೋಷಣೆಯೊಂದೇ ಬಾಕಿ!

ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ಸಭೆ ಸೇರಿದ್ದ ಕಾಂಗ್ರೆಸ್ ಚುನಾವಣಾ ಸಮಿತಿಯು ಬಾಕಿಯಿದ್ದ 21 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಅಂತಿಮಗೊಳಿಸುವಲ್ಲಿ ಯಶಸ್ವಿಯಾಗಿದ್ದು, ಪಟ್ಟಿಯನ್ನು ಬುಧವಾರ ಪ್ರಕಟಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಸಂಗ್ರಹ ಚಿತ್ರ

ಸಂಗ್ರಹ ಚಿತ್ರ

ಬೆಂಗಳೂರು: ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ಸಭೆ ಸೇರಿದ್ದ ಕಾಂಗ್ರೆಸ್ ಚುನಾವಣಾ ಸಮಿತಿಯು ಬಾಕಿಯಿದ್ದ 21 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಅಂತಿಮಗೊಳಿಸುವಲ್ಲಿ ಯಶಸ್ವಿಯಾಗಿದ್ದು, ಪಟ್ಟಿಯನ್ನು ಬುಧವಾರ ಪ್ರಕಟಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 21 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಯಿತು. ಆದರೆ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬಳ್ಳಾರಿ ಈ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿಲ್ಲ ಎಂದು ತಿಳಿದುಬಂದಿದೆ.

ಎಐಸಿಸಿ ನಾಯಕಿ ಸೋನಿಯಾ ಗಾಂಧಿ, ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದ ಸಿಇಸಿ ಸಭೆಯಲ್ಲಿ ಒಟ್ಟು 17 ಕ್ಷೇತ್ರಗಳ ಟಿಕೆಟ್‌ ಅಂತಿಮಗೊಳಿಸಲಾಗಿದೆ. ಇನ್ನು ರಾಜ್ಯದ 7 ಕ್ಷೇತ್ರಗಳಿಗೆ ಕಾಂಗ್ರೆಸ್‌ ಮೊದಲ ಪಟ್ಟಿಯಲ್ಲಿ ಈಗಾಗಲೇ ಟಿಕೆಟ್‌ ಘೋಷಣೆಯಾಗಿದೆ.

ಸಂಗ್ರಹ ಚಿತ್ರ

ಪಟ್ಟಿಯಲ್ಲಿ ಐವರು ಸಚಿವರ ಮಕ್ಕಳಿಗೆ ಟಿಕೆಟ್ ನೀಡಲಾಗಿದೆ ಎಂದು ತಿಳಿದುಬಂದಿದೆ. ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳಕ್ಕರ್‌ ಪುತ್ರ ಮೃಣಾಲ್‌ಗೆ ಹಾಗೂ ಚಿಕ್ಕೋಡಿಯಿಂದ ಸತೀಶ್‌ ಜಾರಕಿಹೊಳಿ ಪುತ್ರಿ ಪ್ರಿಯಾಂಕಾಗೆ ಅವಕಾಶ ನೀಡಲಾಗಿದ್ದು, ಸಚಿವ ಶಿವಾನಂದ ಪಾಟೀಲ್‌ ಪುತ್ರಿ ಸಂಯುಕ್ತ ಪಾಟೀಲ್‌ಗೆ ಬಾಗಲಕೋಟೆಯಿಂದ ಟಿಕೆಟ್‌ ನೀಡಲಾಗಿದೆ. ಶಾಮನೂರು ಶಿವಶಂಕರಪ್ಪ ಸೊಸೆ ಪ್ರಭಾ ಮಲ್ಲಿಕಾರ್ಜುನಗೆ ದಾವಣಗೆರೆಯಿಂದ ಹಾಗೂ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿಗೆ ಬೆಂಗಳೂರು ದಕ್ಷಿಣದಿಂದ ಟಿಕೆಟ್‌ ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. (kp.c)

ಸಂಗ್ರಹ ಚಿತ್ರ

ಸಿಇಸಿ ಅಂತಿಮಗೊಳಿಸಿರುವ ಅಭ್ಯರ್ಥಿಗಳ ವಿವರ

  • ಚಿತ್ರದುರ್ಗ -ಬಿ.ಎನ್‌.ಚಂದ್ರಪ್ಪ
  • ಬೆಳಗಾವಿ – ಮೃಣಾಲ್‌ ಹೆಬ್ಬಾಳಕರ್‌
  • ಚಿಕ್ಕೋಡಿ – ಪ್ರಿಯಾಂಕಾ ಜಾರಕಿಹೊಳಿ
  • ಬಾಗಲಕೋಟೆ – ಸಂಯುಕ್ತಾ ಪಾಟೀಲ್‌
  • ಧಾರವಾಡ – ವಿನೋದ್‌ ಅಸುಟಿ
  • ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ
  • ಕೊಪ್ಪಳ – ರಾಜಶೇಖರ ಹಿಟ್ನಾಳ್‌
  • ಕಲಬುರಗಿ – ರಾಧಾಕೃಷ್ಣ ದೊಡ್ಡಮನಿ
  • ಬೀದರ್‌ – ರಾಜಶೇಖರ್‌ ಪಾಟೀಲ್‌
  • ದಕ್ಷಿಣ ಕನ್ನಡ – ಪದ್ಮರಾಜ್‌
  • ಉಡುಪಿ -ಚಿಕ್ಕಮಗಳೂರು -ಜಯಪ್ರಕಾಶ್‌ ಹೆಗ್ಡೆ
  • ಬೆಂಗಳೂರು ದಕ್ಷಿಣ – ಸೌಮ್ಯ ರೆಡ್ಡಿ
  • ಬೆಂಗಳೂರು ಸೆಂಟ್ರಲ್‌ -ಮನ್ಸೂರ್‌ ಅಲಿಖಾನ್‌
  • ಬೆಂಗಳೂರು ಉತ್ತರ -ಪ್ರೊ.ರಾಜೀವ್‌ ಗೌಡ
  • ಮೈಸೂರು -ಎಂ.ಲಕ್ಷ್ಮಣ್‌
  • ರಾಯಚೂರು -ಜಿ.ಕುಮಾರ ನಾಯಕ್‌
  • ಉತ್ತರ ಕನ್ನಡ -ಡಾ.ಅಂಜಲಿ ನಿಂಬಾಳ್ಕರ್‌

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *