

ಸಂಸದ ಬಿ.ಎನ್.ಬಚ್ಚೇಗೌಡ ಬಿಜೆಪಿಗೆ ರಾಜೀನಾಮೆ
ಲೋಕಸಭಾ ಚುನಾವಣೆಗೆ ಕೆಲ ದಿನಗಳ ಬಾಕಿಯಿರುವಂತೆಯೇ, ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಬಿ ಎನ್ ಬಚ್ಚೇಗೌಡ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.


ಬಿಎನ್ ಬಚ್ಚೇಗೌಡ
ನವದೆಹಲಿ: ಲೋಕಸಭಾ ಚುನಾವಣೆಗೆ ಕೆಲ ದಿನಗಳ ಬಾಕಿಯಿರುವಂತೆಯೇ, ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಬಿ ಎನ್ ಬಚ್ಚೇಗೌಡ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಮೂರು ದಿನಗಳ ಹಿಂದೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಹೆಸರಿನಲ್ಲಿ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.


“ಸ್ವ ಇಚ್ಛೆಯಿಂದ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ರಾಜೀನಾಮೆ ಅಂಗೀಕರಿಸಬೇಕು ಎಂದು ಕೋರುತ್ತೇನೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 2008ರಲ್ಲಿ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದು ಶಾಸಕ, ಸಚಿವ, ಸಂಸದನಾಗಿ ಸಾರ್ವಜನಿಕ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟ ಪಕ್ಷಕ್ಕೆ ಮತ್ತು ಪಕ್ಷದ ಹಿರಿಯ ಮುಖಂಡರಿಗೆ ಧನ್ಯವಾದ ಅರ್ಪಿಸುವುದಾಗಿ ಹೇಳಿದ್ದಾರೆ.


ಕಳೆದ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್‌ನ ವೀರಪ್ಪ ಮೊಯ್ಲಿ ಅವರನ್ನು ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಟಿಕೆಟ್ ದೊರಕುವುದಿಲ್ಲ ಎಂಬುದು ಖಚಿತವಾಗುತ್ತಿದ್ದಂತೆ ಬಿ ಎನ್ ಬಚ್ಚೇಗೌಡ ಅವರು ಚುನಾವಣಾ ನಿವೃತ್ತಿ ಘೋಷಿಸಿದ್ದರು. ಪಕ್ಷದ ಸಂಘಟನೆ ಹಾಗೂ ಚಟುವಟಿಕೆಗಳಿಂದ ದೂರ ಉಳಿದಿದ್ದರು.
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ; ಜೆಡಿಎಸ್ ಗೂ ಗುಡ್ಬೈ
ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ
ಹುಬ್ಬಳ್ಳಿ: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ರಾಜೀನಾಮೆ ಅಂಗೀಕರಿಸಿದ ಹೊರಟ್ಟಿ, ನಾನು ಎಲ್ಲವನ್ನು ಪ್ರಶ್ನೆ ಮಾಡಿದ್ದೇನೆ. ತಿಬ್ಬೇಗೌಡರು ಸ್ವಇಚ್ಛೆಯಿಂದ ರಾಜೀನಾಮೆ ಕೊಡುತ್ತಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ರಾಜೀನಾಮೆ ಅಂಗೀಕಾರ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಸಂಸದ ಬಿ.ಎನ್.ಬಚ್ಚೇಗೌಡ ಬಿಜೆಪಿಗೆ ರಾಜೀನಾಮೆ
ಇನ್ನು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಮರಿತಿಬ್ಬೇಗೌಡ, ಮುಂದಿನ ಅವಧಿಗೆ ನಾನು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ. ಸಭಾಪತಿಗಳು ರಾಜೀನಾಮೆ ಅಂಗೀಕಾರ ಮಾಡಿದ್ದಾರೆ. ಸಭಾಪತಿಗೆ ಧನ್ಯವಾದಗಳು ಎಂದರು. ಅಲ್ಲದೆ, ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರಸ್ವಾಮಿ ವಿರುದ್ಧವೂ ತೀವ್ರ ಅಸಮಾಧಾನ ಹೊರಹಾಕಿದ್ದು, ಜೆಡಿಎಸ್ ಗೂ ಗುಡ್ಬೈ ಹೇಳಿದ್ದಾರೆ.(ಕಪ್ರಡಾ)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






