ರಾಜಕೀಯ ವಿದಾಯ? ಅನಂತ್‌ ಕುಮಾರ್ ಹೆಗಡೆ ಭಾವುಕ ಪತ್ರ!

ಸಮಾಜ ದೇವತೆಯ ಪದತಲದಲ್ಲಿ ಹೂವಾಗುವ ಸೌಭಾಗ್ಯ ಅದೆಷ್ಟು ಜನರಿಗೆ ತಾನೇ ಸಿಕ್ಕೀತು? ಅನಂತ್‌ ಕುಮಾರ್ ಹೆಗಡೆ ಡೆ ಭಾವುಕ ಪತ್ರ

ಕ್ಷೇತ್ರದ ಟಿಕೆಟ್‌ ಘೋಷಣೆಯಾಗುತ್ತಿದ್ದಂತೆ ಹಾಲಿ ಸಂಸದ ಅನಂತ್‌ ಕುಮಾರ್ ಹೆಗಡೆ ಇಷ್ಟು ವರ್ಷ ತಮ್ಮ ಜೊತೆಗಿದ್ದ ಕಾರ್ಯಕರ್ತರು ಹಾಗೂ ಮತದಾರರಿಗೆ ಭಾವುಕ ಪತ್ರ ಬರೆದಿದ್ದಾರೆ.

ಅನಂತ್ ಕುಮಾರ್ ಹೆಗಡೆ

ಅನಂತ್ ಕುಮಾರ್ ಹೆಗಡೆ

ಬೆಂಗಳೂರು: 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆಯಾಗಿದ್ದು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲಾಗಿದೆ. ಹಾಲಿ ಸಂಸದ ಅನಂತ್‌ ಕುಮಾರ್ ಹೆಗಡೆ ಟಿಕೆಟ್ ಕೈತಪ್ಪಿದೆ.

ಕ್ಷೇತ್ರದ ಟಿಕೆಟ್‌ ಘೋಷಣೆಯಾಗುತ್ತಿದ್ದಂತೆ ಹಾಲಿ ಸಂಸದ ಅನಂತ್‌ ಕುಮಾರ್ ಹೆಗಡೆ ಇಷ್ಟು ವರ್ಷ ತಮ್ಮ ಜೊತೆಗಿದ್ದ ಕಾರ್ಯಕರ್ತರು ಹಾಗೂ ಮತದಾರರಿಗೆ ಭಾವುಕ ಪತ್ರ ಬರೆದಿದ್ದಾರೆ. ಈ ಪತ್ರವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿಅನಂತ್‌ ಕುಮಾರ್ ಹೆಗಡೆ ಹಂಚಿಕೊಂಡಿದ್ದಾರೆ.

ನನ್ನ ಜನಕ್ಕೆ ಸೇವೆಯ ಸೌಭಾಗ್ಯವನ್ನು ಒದಗಿಸಿಕೊಟ್ಟ ಕ್ಷೇತ್ರದ ಜನಮನಕ್ಕೆ ಹೃದಯದಾಳದ ಕೃತಜ್ಞತೆ ಎಂದು ತಿಳಿಸಿದ್ದಾರೆ. ” ಈ ಭೂಮಿಯಲ್ಲಿ ನನ್ನ ಲೌಕಿಕ ಬದುಕಿನಿಂದಾಚೆಗೂ ಒಂದು ಭವ್ಯವಾದ ಬದುಕಿದೆ ಎಂದೆನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು, ತಳಮಳವೂ ಇತ್ತು. ಸೋಲು ಗೆಲುವಿನ ಆತಂಕದಿಂದಾಚೆ ಜೀವನವನ್ನು ನಿತ್ಯ ಸತ್ಯವಾಗಿಸುವ ಹಾಗೂ ಎಂದೂ ನಿಲ್ಲದ ಪ್ರವಾಹವಾಗಿಸುವ, ಚೈತನ್ಯದ ಪೂಜೆಯನ್ನಾಗಿಸುವ ಹಂಬಲ ಕಾಡುತ್ತಿತ್ತು. ಆದರೆ, ಆರಂಭ ಎಲ್ಲಿಂದ ತಿಳಿದಿರಲಿಲ್ಲ.

ಜ್ಞಾನಿಗಳು, ಹಣವಂತರು, ಅಧಿಕಾರ ಇದ್ದವರು ಅವರದೇ ಆದ ರೀತಿಯಲ್ಲಿ ಪೂಜೆ ಮಾಡುತ್ತಾರೆ. ಆದರೆ, ಅಂತಹ ಯಾವುದೇ ಉಪಾಧಿಗಳಿಲ್ಲದ ನಾನು ಈ ಪೂಜೆಯನ್ನು ಎಲ್ಲಿಂದ, ಹೇಗೆ ಆರಂಭಿಸಲಿ ಎಂದು ಗೊತ್ತಿರಲಿಲ್ಲ. ಈ ಮಧ್ಯದಲ್ಲಿ ಆರಂಭಗೊಂಡಿದ್ದು ಜನತಾ ಜನಾರ್ದನ ಆರಾಧನೆ. ಸರಿ ಸುಮಾರು ಮೂವತ್ತು ವರ್ಷಗಳ ತಮ್ಮೆಲ್ಲರ ಅಪೂರ್ವ ಒಡನಾಟ, ತಾವುಗಳು ತೋರಿದ ಸ್ನೇಹ, ಪ್ರೀತಿ, ವಾತ್ಸಲ್ಯ ನಿಜಕ್ಕೂ ಭಾಷೆಗೆ ನಿಲುಕದ್ದು, ಅದು ಅದಮ್ಯ.

ಅನಂತ್ ಕುಮಾರ್ ಹೆಗಡೆ

ಯಾವುದೇ ಪೂಜೆ ಆರಾಧನೆ, ಅದು ಎಂದಿಗೂ ಮುಗಿಯದ ಅನಂತ ಕಾಯಕ. ಈ ತಾಯ್ಕೆಲದ ಪೂಜೆಯಲ್ಲಿ, ಆಕೆಯ ಸೇವೆಯಲ್ಲಿ ನನ್ನನ್ನು ನಾನು ಸಮರ್ಪಿಸಕೊಳ್ಳುವ ಸೌಭಾಗ್ಯ ಈ ಜನ್ಮದಲ್ಲಿ ಭಗವಂತ ಕರುಣಿಸಿದಕ್ಕೆ, ಈ ಕಣ್ಣಿಗೆ ಕಾಣದ ಆ ಅಕ್ಷಯ ಪಾದಪದ್ಮಗಳಿಗೆ ನನ್ನ ಅನಂತ ನಮನಗಳನ್ನು ಸಲ್ಲಿಸುತ್ತೇನೆ.

ಕಳೆದ 3 ದಶಕಗಳಿಂದ ಹಿಂದವೀ ಹಿತದಲ್ಲಿ ಸೇವೆ ಸಲ್ಲಿಸುವ ಅಪೂರ್ವ ಸಯ್ಯೋಗ ಈ ಬದುಕಿನಲ್ಲಿ ನನಗೊಂದು ಗುರುತು ನೀಡಿದೆ. ನಿಜಕ್ಕೂ ಅಷ್ಟೇ ಸಾಕು. ಈ ಸಮಾಜ ದೇವತೆಯ ಪದತಲದಲ್ಲಿ ಹೂವಾಗುವ ಸೌಭಾಗ್ಯ ಅದೆಷ್ಟು ಜನರಿಗೆ ತಾನೇ ಸಿಕ್ಕೀತು?

ಹೆತ್ತ ತಾಯೊಡಲಿಗೆ, ಬದುಕು ಕೊಟ್ಟ ಈ ಮಣ್ಣಿಗೆ ಗುರುತು ಕೊಟ್ಟ ನನ್ನ ಜನಕ್ಕೆ ಸೇವೆಯ ಸೌಭಾಗ್ಯವನ್ನು ಒದಗಿಸಿಕೊಟ್ಟ ಕ್ಷೇತ್ರದ ಜನಮನಕ್ಕೆ ಮತ್ತೊಮ್ಮೆ, ಮತ್ತೊಮ್ಮೆ, ಮತ್ತೊಮ್ಮೆ ಸಾಷ್ಟಾಂಗವೆರಗುತ್ತೇನೆ” ಎಂದು ಕ್ಷೇತ್ರದ ಮತದಾರರಿಗೆ ಭಾವುಕ ಪತ್ರ ಬರೆದಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ದುರಹಂಕಾರ ಪಟ್ಟವರನ್ನು ಶ್ರೀರಾಮನೇ 240 ಸೀಟುಗಳಿಗೆ ತಡೆದ: RSS ನಾಯಕ ಇಂದ್ರೇಶ್ ಕುಮಾರ್ ವಾಗ್ದಾಳಿ

ಲೋಕಸಭಾ ಚುನಾವಣೆಯ ಫಲಿತಾಂಶಗಳ ನಂತರ ಆರೆಸ್ಸೆಸ್‌ ನಾಯಕ ಇಂದ್ರೇಶ್‌ ಕುಮಾರ್ ಆಡಳಿತ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ ಹಾಗೂ ʼಅಹಂಕಾರʼಕ್ಕಾಗಿ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ....

ಗುಡ್ಡ ಅಗೆದು ಇಲಿಯನ್ನೂ ಹಿಡಿಯದ ಲೋಕಾಯುಕ್ತ!

ಸಿದ್ಧಾಪುರದ ವಿಚಾರಗಳು ಈಗ ಜಿಲ್ಲೆಯ ಗಮನ ಸೆಳೆಯುತ್ತಿವೆ. ಮೂವತ್ತು ವರ್ಷಗಳಿಂದ ನೇಪಥ್ಯದಲ್ಲಿದ್ದ ಸಿದ್ಧಾಪುರ ಮತ್ತೆ ಸೌಂಡು ಮಾಡುತ್ತಿದೆಯೊ? ಅಥವಾ ತಟ್ಟಿ ಬಡಿದು ಹುಲಿ ಹೆದರಿಸುವ...

BSYಗಾಗಿ CID ಹುಡುಕಾಟ!

ಪೋಕ್ಸೋ ಪ್ರಕರಣ: ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್, BSYಗಾಗಿ CID ಹುಡುಕಾಟ! ಪೊಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್...

ಕೊಲೆ ಪ್ರಕರಣ: ಪವಿತ್ರಾ ಗಂಡ ಏನಂತಾರೆ ಗೊತ್ತೆ?

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ಪವಿತ್ರಾ ಗೌಡ ಬಗ್ಗೆ ಮಾಜಿ ಪತಿ ಸಂಜಯ್ ಸಿಂಗ್ ಹೇಳಿದ್ದಿಷ್ಟು! ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟಿ ಪವಿತ್ರಾ...

ಜೂನ್‌ ೨೩ ಕ್ಕೆ ಮತ್ತೆ neet ಪರೀಕ್ಷೆ ….

1,563 NEET ಅಭ್ಯರ್ಥಿಗಳ ಗ್ರೇಸ್ ಅಂಕ ರದ್ದು, ಜೂನ್ 23ಕ್ಕೆ ಮರು ಪರೀಕ್ಷೆ: ಕೇಂದ್ರ ಸರ್ಕಾರ ಗ್ರೇಸ್ ಅಂಕಗಳನ್ನು ಪಡೆದಿರುವ 1,563 NEET-UG 2024...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *