ಖ್ಯಾತ ನಟ ಪ್ರಕಾಶ್ ಹೆಗ್ಗೋಡು ನಿಧನ

ಕನ್ನಡದ ಖ್ಯಾತ ನಟ, ಹಿರಿಯ ರಂಗಕರ್ಮಿ ಪ್ರಕಾಶ್ ಹೆಗ್ಗೋಡು (Prakash Heggodu) ಅವರು ಶನಿವಾರ ಅನಾರೋಗ್ಯದಿಂದ ನಿಧನರಾಗಿದ್ದು, ಅವರಿಗೆ 58 ವರ್ಷ ವಯಸ್ಸಾಗಿತ್ತು.

ನಟ ಪ್ರಕಾಶ್ ಹೆಗ್ಗೋಡು

ನಟ ಪ್ರಕಾಶ್ ಹೆಗ್ಗೋಡು

ಬೆಂಗಳೂರು: ಕನ್ನಡದ ಖ್ಯಾತ ನಟ, ಹಿರಿಯ ರಂಗಕರ್ಮಿ ಪ್ರಕಾಶ್ ಹೆಗ್ಗೋಡು (Prakash Heggodu) ಅವರು ಶನಿವಾರ ಅನಾರೋಗ್ಯದಿಂದ ನಿಧನರಾಗಿದ್ದು, ಅವರಿಗೆ 58 ವರ್ಷ ವಯಸ್ಸಾಗಿತ್ತು.

ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ ಪ್ರಕಾಶ್ ಹೆಗ್ಗೋಡು ಅವರನ್ನು ಈ ಹಿಂದೆ ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ನಿಧನರಾಗಿದ್ದಾರೆ.

ನಟ ಪ್ರಕಾಶ್ ಹೆಗ್ಗೋಡು

ಕನ್ನಡದ 35ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಪ್ರಕಾಶ್‌ ಹೆಗ್ಗೋಡು ಅವರು ಯೇಸುಪ್ರಕಾಶ್‌ ಕಲ್ಲುಕೊಪ್ಪ ಎಂದೇ ಖ್ಯಾತಿಗಳಿಸಿದ್ದರು. ಸಿನಿಮಾ, ರಂಗಭೂಮಿಗಳಲ್ಲಿ ಸಕ್ರಿಯರಾಗಿದ್ದ ಅವರು ಪರಿಸರ ಹೋರಾಟದಲ್ಲಿಯೂ ಮುಂಚೂಣಿಯಲ್ಲಿದ್ದರು. ಅವರು ಪತ್ನಿ, ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.

ಪ್ರಕಾಶ್ ಹೆಗ್ಗೋಡು ಅವರು ಶಿವಮೊಗ್ಗ ಜಿಲ್ಲೆಯ, ಸಾಗರ ತಾಲೂಕಿನ ಪುರಪ್ಪೆಮನೆಯವರು. ನಾಳೆ (ಮಾರ್ಚ್ 31) ಅವರ ಅಂತಿಮ ದರ್ಶನಕ್ಕೆ ಅವರ ಸ್ವಗೃಹವಾದ ಪುರಪ್ಪೆಮನೆಯಲ್ಲಿ ಅವಕಾಶ ಮಾಡಿಕೊಡಲಾಗುತ್ತದೆ. ಆತ್ಮೀಯರು, ರಂಗಕರ್ಮಿಗಳು ಹಾಗೂ ಸಾರ್ವಜನಿಕರು ಅಂತಿಮ ದರ್ಶನ ಪಡೆಯಬಹುದು ಎಂದು ಮೂಲಗಳು ತಿಳಿಸಿವೆ.

ನಟ ಪ್ರಕಾಶ್ ಹೆಗ್ಗೋಡು

ಸಿನಿಮಾ ಹಿನ್ನಲೆ

ಯಶ್‌ ಅವರ ಜತೆ ʼರಾಜಾಹುಲಿʼ, ಶಿವ ರಾಜ್‌ಕುಮಾರ್‌ ಅವರೊಂದಿಗೆ ʼಸಂತʼ, ʼಭಾಗ್ಯದ ಬಳೆಗಾರʼ, ಉಪೇಂದ್ರ ಅವರೊಂದಿಗೆ ʼಕಲ್ಪನಾ 2ʼ ಜತೆಗೆ ʼವೀರುʼ, ʼಮಾಡ್ರರ್ನ್‌ ಮಹಾಭಾರತʼ ಮುಂತಾದ ಸಿನಿಮಾಗಳಲ್ಲಿ ಖಳನಟನಾಗಿ, ಪೋಷಕ ನಟನಾಗಿ ಮಿಂಚಿದ್ದರು.

ಸಾಮಾಜಿಕ ಜೀವನ

ಇತ್ತೀಚೆಗೆ ಹೊಸನಗರದ ಸಾರಾ ಸಂಸ್ಥೆಯ ಜತೆ ಗುರುತಿಸಿಕೊಂಡಿದ್ದ ಅವರು ಕೆರೆ ಪುನರುಜ್ಜೀವನ ಮೊದಲಾದ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಜತೆಗೆ ಸಾರಾ ಸಂಸ್ಥೆಯ ಖಜಾಂಚಿಯಾಗಿಯೂ ಸಕ್ರಿಯರಾಗಿದ್ದರು. ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *