ಚಿಣ್ಣರ ಕಲರವ- ಸಮಾರೋಪ, ಬೇಸಿಗೆ ಶಿಬಿರದಿಂದ ಮಕ್ಕಳಿಗೆ ಅನುಕೂಲ


ಸಿದ್ದಾಪುರ
ಬೇಸಿಗೆ ಶಿಬಿರ ಮಕ್ಕಳ ಪಾಲಿಗೆ ಓಯಸ್ಸಿಸ್ ಇದ್ದಂತೆ. ವರ್ಷದ ಹಲವು ತಿಂಗಳು ಪಠ್ಯದ ಒತ್ತಡದಲ್ಲಿರುವ ಮಕ್ಕಳಿಗೆ ಮರುಭೂಮಿಯಲ್ಲಿ ಓಯಸ್ಸಿಸ್ ರೀತಿಯಲ್ಲಿ ಇಂಥ ಶಿಬಿರಗಳು ಮುದ ನೀಡುತ್ತವೆ ಎಂದು ಸ್ಥಳೀಯ ಜೆ.ಎಮ್.ಎಪ್.ಸಿ.ನ್ಯಾಯಾಲಯದ ನ್ಯಾಯಾಧೀಶ ಭರತಚಂದ್ರ ಕೆ.ಎಸ್.ಹೇಳಿದರು.
ಅವರು ಸ್ಥಳೀಯ ಸರಕಾರಿನಿವೃತ್ತ ನೌಕರರ ಸಂಘ, ಲಯನ್ಸ ಕ್ಲಬ್ ಸಹಯೋಗದಲ್ಲಿ ೭ ದಿನಗಳ ಕಾಲ ಆಯೋಜಿಸಿದ ಚಿಣ್ಣರ ಕಲರವ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪದಲ್ಲಿ ಬಹುಮಾನ ವಿತರಿಸಿ ಮಾತನಾಡಿ ಇಂಥ ಶಿಬಿರಗಳು ಮಕ್ಕಳ ಮನಸ್ಸನ್ನು ಅರಳಿಸುತ್ತವೆ. ಮಕ್ಕಳ ಬೌದ್ಧಿಕ ಮತ್ತು ಶಾರೀರಿಕ ಬೆಳವಣಿಗೆಗೆ ಕಾರಣವಾಗುತ್ತವೆ ಎಂದರು.


ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಲಯನ್ಸ ಕ್ಲಬ್ ಅಧ್ಯಕ್ಷ ಆರ್.ಎಂ.ಪಾಟೀಲ ಇಂಥ ಶಿಬಿರಗಳು ಮಕ್ಕಳ ವ್ಯಕ್ತಿತ್ವದ ಬೆಳವಣಿಗೆಗೆ ಸಹಕಾರಿ. ಸ್ವತಂತ್ರವಾಗಿ ಪಾಲ್ಗೊಂಡು ಹಲವು ವಿಷಯಗಳ ಬಗ್ಗೆ ಅರಿತುಕೊಳ್ಳುವದರಿಂದ ಮುಂದಿನ ವಿದ್ಯಾಭ್ಯಾಸ ಮತ್ತು ಸಾಮಾಜಿಕವಾದ ಜ್ಞಾನ ದೊರೆಯುತ್ತದೆ ಎಂದರು.


ಇನ್ನೊರ್ವ ಅತಿಥಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಕೊಳಗಿ ಹಿಂದಿನ ತಲೆಮಾರಿನವರಿಗೆ ಇಂಥ ಶಿಬಿರಗಳ ಸೌಲಭ್ಯ ಇರಲಿಲ್ಲ. ಸುತ್ತಲಿನ ಪರಿಸರ,ಕಾಡು,ಹೊಳೆ ಮುಂತಾದವು ಹೊಸ ಕಲಿಕೆಯ ವಿಧಾನಗಳಾಗಿದ್ದವು. ಬದಲಾದ ಬದುಕಿನ ಕ್ರಮದಲ್ಲಿ ಇಂದಿನ ಮಕ್ಕಳಿಗೆ ಇಂಥ ಶಿಬಿರಗಳು ಅಗತ್ಯ ಎಂದರು.


ಅಧ್ಯಕ್ಷತೆವಹಿಸಿದ್ದ ಸರಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಗೌಡರ್ ಸ್ವಾಗತಿಸಿ,ಪ್ರಾಸ್ತಾವಿಕ ಮಾತನಾಡಿ ಕಳೆದ ೫ ವರ್ಷದಿಂದ ಮಕ್ಕಳ ಬೇಸಿಗೆ ಶಿಬಿರ ಆಯೋಜಿಸುತ್ತಿದ್ದು ಈ ವರ್ಷ ೮೨ ಮಕ್ಕಳು ಪಾಲ್ಗೊಂಡಿದ್ದಾರೆ. ಚಿತ್ರಕಲೆ, ನಾಟಕ, ಹಾಡು ಮುಂತಾದವುಗಳ ಕಲಿಕೆಯ ಜೊತೆಗೆ ಪರಿಸರದ ಕುರಿತಾಗಿಯೂ ಅವರಿಗೆ ತಜ್ಞರಿಂದ ಕಲಿಕೆ ಒದಗಿಸಲಾಗಿದೆ. ಹಲವು ಸಂಘ,ಸಂಸ್ಥೆಗಳು,ವ್ಯಕ್ತಿಗಳು ಈ ಕಾರ್ಯದಲ್ಲಿ ಕೈಜೋಡಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಪಟ್ಟಣದ ನೆಹರೂ ಮೈದಾನದ ಪಕ್ಕದಲ್ಲಿನ ಮಕ್ಕಳ ಪಾರ್ಕ ಲ್ಲಿ ಅತ್ಯತ್ತಮವಾಗಿ ಕಾರ್ಯನಿರ್ವಹಿಸುವ ಪಪಂ ಸಿಬ್ಬಂದಿ ಮಾದು ಸುಬ್ಬಾ ಕೋರಾರ್ ಅವರನ್ನು ಸನ್ಮಾನಿಸಲಾಯಿತು.


ವೇದಿಕೆಯಲ್ಲಿದ್ದ ಮಕ್ಕಳ ಸಾಹಿತಿ ತಮ್ಮಣ್ಣ ಬೀಗಾರ,ಲಯನ್ಸ ಕ್ಲಬ್ ಕಾರ್ಯದರ್ಶಿ ಕುಮಾರ ಗೌಡರ್,ಸಂಕಲ್ಪ ಸೇವಾ ಸಂಸ್ಥೆಯ ಅಧ್ಯಕ್ಷ ಪಿ.ಬಿ.ಹೊಸೂರ, ಡಾ|ಶರತ್‌ಚಂದ್ರ ಕೆ.ಎಸ್. ಮಾತನಾಡಿದರು. ಸ.ನಿ.ನೌಕರರ ಸಂಘದ ಉಪಾಧ್ಯಕ್ಷ ಎನ್.ವಿ.ಹೆಗಡೆ ಲಯನ್ಸ ಡಿಸ್ಟಿçಕ್ಟ ಚೇರ್ ಪರ್ಸನ್ ಸತೀಶ ಗೌಡರ್ ಉಪಸ್ಥಿತರಿದ್ದರು.
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಜಿ.ಜಿ.ಹೆಗಡೆ ಬಾಳಗೋಡ ನಿರೂಪಿಸಿದರು. ಸ.ನಿ.ನೌ.ಸಂಘದ ಕಾರ್ಯದರ್ಶಿ ವಿ.ಎಸ್.ಶೇಟ ವಂದಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *