ಆರ್​​ಎಸ್​ಎಸ್​ ಸಮವಸ್ತ್ರದಲ್ಲೇ ಕಾಂಗ್ರೆಸ್​ ಸೇರ್ಪಡೆಯಾದ ಬಿಜೆಪಿ ಕಾರ್ಯಕರ್ತ!

ಬಿಜೆಪಿ ಹಿರಿಯ ಕಾರ್ಯಕರ್ತನೋರ್ವ ಆರ್​​ಎಸ್​ಎಸ್ ಸಮವಸ್ತ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಿ ಎಲ್ಲರ ಗಮನಸೆಳೆದಿದ್ದಾರೆ.

ನಿಂಗಬಸಪ್ಪ ಬಾಣದ್

ನಿಂಗಬಸಪ್ಪ ಬಾಣದ್

ಗದಗ: ಬಿಜೆಪಿ ಹಿರಿಯ ಕಾರ್ಯಕರ್ತನೋರ್ವ ಆರ್​​ಎಸ್​ಎಸ್ ಸಮವಸ್ತ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಿ ಎಲ್ಲರ ಗಮನಸೆಳೆದಿದ್ದಾರೆ.

ಗದಗ ಜಿಲ್ಲೆಯ ನರಗುಂದದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ರೋಣ ತಾಲೂಕಿನ ಮೆಣಸಗಿ ಗ್ರಾಮದ ನಿಂಗಬಸಪ್ಪ ಬಾಣದ್ ಎನ್ನುವ ಆರ್​ಎಸ್​ಎಸ್​ ಸ್ವಯಂ ಸೇವಕ ಕಾಂಗ್ರೆಸ್​ ಸೇರ್ಪಡೆಯಾದರು.

30 ವರ್ಷದ ಆರ್​ಎಸ್​ಎಸ್ ಸಕ್ರಿಯ ಕಾರ್ಯಕರ್ತರಾಗಿರುವ ಬಾಣದ್ ಅವರು ಸಮವಸ್ತ್ರದಲ್ಲೇ ಕಾಂಗ್ರೆಸ್​​ ಶಾಲು ಹಾಕಿಸಿಕೊಂಡಿರುವುದು ವಿಶೇಷವಾಗಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಇದೇ ಮೊದಲ ಬಾರಿಗೆ ಆರ್‌ಎಸ್‌ಎಸ್ ಕಾರ್ಯಕರ್ತರೊಬ್ಬರು ಸಂಘದ ಸಮವಸ್ತ್ರದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ನಿಂಗಬಸಪ್ಪ ಬಾಣದ್ ಆರ್‌ಎಸ್‌ಎಸ್ ಸಮವಸ್ತ್ರದಲ್ಲಿ ಬಂದಿದ್ದನ್ನು ಕಂಡು ಸ್ಥಳದಲ್ಲಿದ್ದ ಜನರು ಆಶ್ಚರ್ಯಚಕಿತರಾದರು. ಇದೀಗ ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನಿಂಗಬಸಪ್ಪ ಬಾಣದ್

ಬಾಗಲಕೋಟೆ ಅಭ್ಯರ್ಥಿ ಸಂಯುಕ್ತಾ ಪಾಟೀಲ ಪರ ಪ್ರಚಾರದ ಅಂಗವಾಗಿ ಕಾಂಗ್ರೆಸ್ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಹಾಜರೀದ್ದ ಸಚಿವ ಶಿವಾನಂದ ಪಾಟೀಲ, ಪುತ್ರಿ ಸಂಯುಕ್ತಾ ಪಾಟೀಲ, ಮಾಜಿ ಶಾಸಕ ಎಸ್.ಜಿ.ನಂಜಯ್ಯನಮಠ, ಮಾಜಿ ಸಚಿವ ಬಿ.ಆರ್.ಯಾವಗಲ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ನಿಂಗಬಸಪ್ಪ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ಈ ವೇಳೆ ನಿಂಗಬಸಪ್ಪ ಅವರು ಧರಿಸಿದ್ದ ಆರ್‌ಎಸ್‌ಎಸ್ ಕ್ಯಾಪ್ ನ್ನು ತೆಗೆದು ಕಾಂಗ್ರೆಸ್‌ನ ಬಿಳಿ ಟೋಪಿ ಹಾಕಿದರು.

ಜನರ ಗಮನ ಸೆಳೆಯಲು ನಿಂಗಬಸಪ್ಪ ಆರ್‌ಎಸ್‌ಎಸ್‌ ಸಮವಸ್ತ್ರ ಧರಿಸಿ ಕಾಂಗ್ರೆಸ್‌ ಸೇರಿದ್ದಾರೆ ಎಂದು ಸ್ಥಳೀಯ ಬಿಜೆಪಿ ಮುಖಂಡರು ಹೇಳಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *