

ಕನ್ನಡ ಚಿತ್ರರಂಗದ ಹಿರಿಟ ನಟ ಹಾಗೂ ನಿರ್ಮಾಪಕ ದ್ವಾರಕೀಶ್ (81) ಅವರು ಮಂಗಳವಾರ ವಿಧಿವಶರಾಗಿದ್ದಾರೆ.


ದ್ವಾರಕೀಶ್
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಟ ನಟ ಹಾಗೂ ನಿರ್ಮಾಪಕ ದ್ವಾರಕೀಶ್ (81) ಅವರು ಮಂಗಳವಾರ ವಿಧಿವಶರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಹೃದಯಾಘಾತದಿಂದ ಇಂದು ಇಹಲೋಕ ತ್ಯಜಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಆಗಸ್ಟ್ 19-1942 ರಂದು ಹುಣಸೂರು ನಲ್ಲಿ ಶಮಾರಾವ್ ಮತ್ತು ಜಯಮ್ಮರವರಿಗೆ ಜನಿಸಿದ ದ್ವಾರಕೀಶ್ ಅವರು, ನಟ, ನಿರ್ದೇಶಕ ಮತ್ತು ನಿರ್ಮಾಪಕ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರಾಗಿದ್ದರು.
ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನಂತರ CPC ಪಾಲಿಟೆಕ್ನಿಕ್ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್ ಮುಗಿಸಿದರು ,ನಂತರ ಅವರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಶುರುಮಾಡಿದರು. 1963ರಲ್ಲಿ ವ್ಯಾಪಾರ ಬಿಟ್ಟು ಸಿನೆಮಾ ನಟನೆಯನ್ನು ಆಯ್ದುಕೊಂಡರು.

ನಟ ದ್ವಾರಕೀಶ್ ಅವರು ಕನ್ನಡ ಚಿತ್ರರಂಗದಲ್ಲಿ ಬಹುದೊಡ್ಡ ಹೆಸರು ಮಾಡಿದ್ದಾರೆ. ಹಲವಾರು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಅವರನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿದೆ.
ನಟರಾಗಿ, ನಿರ್ದೇಶಕ, ನಿರ್ಮಾಪಕರಾಗಿ ಹಲವಾರು ಚಿತ್ರಗಳ ಕೊಡುಗೆ ನೀಡಿರುವ ಅವರು ಕನ್ನಡ ಚಿತ್ರರಂಗಕ್ಕೆ ಕಲಾಸೇವೆ ಸಲ್ಲಿಸಿದ್ದಾರೆ. ಡಾ. ವಿಷ್ಣುವರ್ಧನ್, ಡಾ. ರಾಜ್‌ಕುಮಾರ್ ಹಾಗೂ ಅಂಬರೀಶ್‌ರಂತಹ ಮೇರು ನಟರೊಂದಿಗೆ ಹಿರಿಯ ತೆರೆಯಲ್ಲಿ ಮಿಂಚಿರುವ ನಟ ದ್ವಾರಕೀಶ್ ಅವರು ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಬರೋಬ್ಬರಿ 40ಕ್ಕೂ ಹೆಚ್ಚು ಸಿನಿಮಾಗಳ ನಿರ್ಮಾಣ ಮಾಡಿ ಸೈ ಎನಿಸಿಕೊಂಡಿರುವ ಅವರು ಕನ್ನಡ ಜನತೆಗೆ ಜನಪ್ರಿಯ ರಾಜಕುಳ್ಳ ಎಂದೇ ಜನಪ್ರಿಯರು. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
