ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಟ ನಟ ಹಾಗೂ ನಿರ್ಮಾಪಕ ದ್ವಾರಕೀಶ್ (81) ಅವರು ಮಂಗಳವಾರ ವಿಧಿವಶರಾಗಿದ್ದಾರೆ.

ದ್ವಾರಕೀಶ್

ದ್ವಾರಕೀಶ್

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಟ ನಟ ಹಾಗೂ ನಿರ್ಮಾಪಕ ದ್ವಾರಕೀಶ್ (81) ಅವರು ಮಂಗಳವಾರ ವಿಧಿವಶರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಹೃದಯಾಘಾತದಿಂದ ಇಂದು ಇಹಲೋಕ ತ್ಯಜಿಸಿದ್ದಾರೆಂದು ಮೂಲಗಳು ತಿಳಿಸಿವೆ.

ದ್ವಾರಕೀಶ್

ಆಗಸ್ಟ್ 19-1942 ರಂದು ಹುಣಸೂರು ನಲ್ಲಿ ಶಮಾರಾವ್ ಮತ್ತು ಜಯಮ್ಮರವರಿಗೆ ಜನಿಸಿದ ದ್ವಾರಕೀಶ್ ಅವರು, ನಟ, ನಿರ್ದೇಶಕ ಮತ್ತು ನಿರ್ಮಾಪಕ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರಾಗಿದ್ದರು.

ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನಂತರ CPC ಪಾಲಿಟೆಕ್ನಿಕ್ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್ ಮುಗಿಸಿದರು ,ನಂತರ ಅವರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಶುರುಮಾಡಿದರು. 1963ರಲ್ಲಿ ವ್ಯಾಪಾರ ಬಿಟ್ಟು ಸಿನೆಮಾ ನಟನೆಯನ್ನು ಆಯ್ದುಕೊಂಡರು.

ದ್ವಾರಕೀಶ್

ನಟ ದ್ವಾರಕೀಶ್‌ ಅವರು ಕನ್ನಡ ಚಿತ್ರರಂಗದಲ್ಲಿ ಬಹುದೊಡ್ಡ ಹೆಸರು ಮಾಡಿದ್ದಾರೆ. ಹಲವಾರು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಅವರನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್‌ ನೀಡಿದೆ.

ನಟರಾಗಿ, ನಿರ್ದೇಶಕ, ನಿರ್ಮಾಪಕರಾಗಿ ಹಲವಾರು ಚಿತ್ರಗಳ ಕೊಡುಗೆ ನೀಡಿರುವ ಅವರು ಕನ್ನಡ ಚಿತ್ರರಂಗಕ್ಕೆ ಕಲಾಸೇವೆ ಸಲ್ಲಿಸಿದ್ದಾರೆ. ಡಾ. ವಿಷ್ಣುವರ್ಧನ್‌, ಡಾ. ರಾಜ್‌ಕುಮಾರ್‌ ಹಾಗೂ ಅಂಬರೀಶ್‌ರಂತಹ ಮೇರು ನಟರೊಂದಿಗೆ ಹಿರಿಯ ತೆರೆಯಲ್ಲಿ ಮಿಂಚಿರುವ ನಟ ದ್ವಾರಕೀಶ್‌ ಅವರು ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಬರೋಬ್ಬರಿ 40ಕ್ಕೂ ಹೆಚ್ಚು ಸಿನಿಮಾಗಳ ನಿರ್ಮಾಣ ಮಾಡಿ ಸೈ ಎನಿಸಿಕೊಂಡಿರುವ ಅವರು ಕನ್ನಡ ಜನತೆಗೆ ಜನಪ್ರಿಯ ರಾಜಕುಳ್ಳ ಎಂದೇ ಜನಪ್ರಿಯರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *