


ಮಾಜಿ ಸಚಿವ ಹಾಗೂ ಕಲಬುರಗಿಯ ಪ್ರಭಾವಿ ನಾಯಕ ಮಾಲೀಕಯ್ಯ ಗುತ್ತೇದಾರ್ ಹಾಗೂ ಮಾಜಿ ಶಾಸಕಿ ಶಾರದಾ ಶೆಟ್ಟಿಯವರು ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.


ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ ಮಾಲೀಕಯ್ಯ ಗುತ್ತೇದಾರ್, ಶಾರದಾ ಶೆಟ್ಟಿ.
ಬೆಂಗಳೂರು: ಮಾಜಿ ಸಚಿವ ಹಾಗೂ ಕಲಬುರಗಿಯ ಪ್ರಭಾವಿ ನಾಯಕ ಮಾಲೀಕಯ್ಯ ಗುತ್ತೇದಾರ್ ಹಾಗೂ ಮಾಜಿ ಶಾಸಕಿ ಶಾರದಾ ಶೆಟ್ಟಿಯವರು ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇಬ್ಬರೂ ಅಧಿಕೃತವಾಗಿ ಸೇರ್ಪಡೆಯಾದರು.
ಮಾಲೀಕಯ್ಯ ಗುತ್ತೇದಾರ್ ಅಫ್ಜಲ್ ಪುರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿದ್ದರು. ಮಾಜಿ ಸಚಿವರಾಗಿರುವ ಗುತ್ತೇದಾರ್ ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲೇ ಇದ್ದರು. ಬಳಿಕ ಜಿಲ್ಲೆಯಲ್ಲಿ ರಾಜಕೀಯ ಅಸಮಾಧಾನದಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡರು. 2018 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಎಂವೈ ಪಾಟೀಲ್ ವಿರುದ್ಧ ಸ್ಪರ್ಧಿಸಿ ಸೋತಿದ್ದರು.

ಬಿಜೆಪಿಯಲ್ಲಿದ್ದ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆಯಾಗಲು ಅವರ ಸಹೋದರ ನಿತಿನ್ ಗುತ್ತೇದಾರ್ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿರುವುದು ಕಾರಣವಾಗಿದೆ.
ಪಕ್ಷದ ನಾಯಕರ ನಡೆಯಿಂದ ಅಸಮಾಧಾನಗೊಂಡಿದ್ದ ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ನಾಯಕರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಬಿಜೆಪಿಯ ಭ್ರಷ್ಟಾಚಾರವೇ ಕಾರಣ ಎಂದು ಆರೋಪಿಸಿದ್ದರು. ಅಲ್ಲದೆ, ಈಶ್ವರಪ್ಪ, ಪ್ರತಾಪ ಸಿಂಹ, ಸಂಗಣ್ಣ ಕರಡಿ ಅವರಿಗೆ ಟಿಕೆಟ್ ಕೈತಪ್ಪಲು ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿವೈ ವಿಜಯೇಂದ್ರ ಕಾರಣ ಎಂದು ಆರೋಪ ಮಾಡಿದ್ದರು.
ಮಾಲೀಕಯ್ಯ ಗುತ್ತೇದಾರ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಡಿ ಕೆ ಶಿವಕುಮಾರ್, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನು ವಿರೋಧಿಸಿ ಎರಡು ಪಕ್ಷದಲ್ಲಿ ವಿರೋಧದ ವಾತಾವರಣ ಇದೆ. ರಾಜ್ಯದ ಉದ್ದಗಳದಲ್ಲಿ ಕಾಂಗ್ರೆಸ್ ಪರವಾದ ಒಲವು ಇದೆ. ನಾವು ನುಡಿದಂತೆ ನಡೆದಿದ್ದೇವೆ ಎಂಬ ಭಾವನೆ ಜನರಲ್ಲಿದೆ. ಜನರ ಬದುಕನ್ನು ನೋಡಬೇಕು ಎಂದು ಗಮನದಲ್ಲಿ ಇಟ್ಟುಕೊಂಡು ಕಾಂಗ್ರೆಸ್ ಕಡೆಗೆ ಬೇರೆ ಪಕ್ಷದವರು ಬರುತ್ತಿದ್ದಾರೆ ಎಂದು ಹೇಳಿದರು.
ಕಲಬುರಗಿ ಕಾಂಗ್ರೆಸ್ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆ, ಖರ್ಗೆಯವರು 2009 ಮತ್ತು 2014 ರ ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಿಂದ ಗೆದ್ದಿದ್ದರು. ಆದರೆ, 2019 ರ ಚುನಾವಣೆಯಲ್ಲಿ ಸೋಲು ಕಾಣುವಂತಾಗಿತ್ತು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಕಲಬುರಗಿ (ಗುಲ್ಬರ್ಗ) ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
