ಮೋದಿ, ಬಿ.ಜೆ.ಪಿ. ಬಡವರ ವಿರೋಧಿ…… ಇವರ ಮೊಸಳೆ ಕಣ್ಣೀರಿಗೆ ಯಾಮಾರದಿರಿ.- ರಾಮಾ ಮೋಗೇರ್

ಕಳೆದ ಹತ್ತು ವರ್ಷಗಳಿಂದ ದೇಶದ ಜನರ ಸ್ಥಿತಿ ಭೀಕರವಾಗಿದ್ದು ಮೋದಿ ಸುಳ್ಳು ಮತ್ತು ಹಗಲುದರೋಡೆಯಿಂದ ದೇಶದ ಭವಿಷ್ಯ ಆತಂಕದಲ್ಲಿದೆ. ರಾಜ್ಯದ ಗ್ಯಾರಂಟಿಗಳ ಬಗ್ಗೆ ಜನರಿಗೆ ಸಮಾಧಾನವಿದೆ. ಆದರೆ ಮೋದಿ ಗ್ಯಾರಂಟಿ ಅಪ್ಪಟ ಸುಳ್ಳು ಮೋದಿ. ಎನ್.ಡಿ.ಎ. ಸುಳ್ಳುಗಳು ಜನರಿಗೆ ಅರ್ಥವಾಗುತ್ತಿದ್ದು ಇಂಡಿಯಾ ಒಕ್ಕೂಟ ದೇಶದ ಅಧಿಕಾರ ಹಿಡಿಯಲಿದೆ ಎಂದು ಸಿದ್ಧಾಪುರ ತಾಲೂಕಿನ ಕಾಂಗ್ರೆಸ್‌ ಉಸ್ತುವಾರಿ ರಾಮಾ ಮೋಗೇರ್‌ ತಿಳಿಸಿದ್ದಾರೆ.

ಸಿದ್ದಾಪುರದ ತಾಲೂಕಾ ಬ್ಲಾಕ್‌ ಕಾಂಗ್ರೆಸ್‌ ಕಛೇರಿಯಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್‌ ಈ ದೇಶ ಕಟ್ಟಿದೆ ಬಿ.ಜೆ.ಪಿ. ಈ ದೇಶ ಮಾರುತ್ತಿದೆ. ಮಾರುವವರು ಬೇಕೋ? ಕಟ್ಟುವವರು ಬೇಕೋ ಎಂದು ಜನ ತೀರ್ಮಾನ ಮಾಡುತ್ತಾರೆ.

ಮೋದಿ, ಬಿ.ಜೆ.ಪಿ.ಗಳು ಮಹಿಳೆಯರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಾರೆ ದೇಶದಲ್ಲಿ ಆದ ಮಹಿಳಾ ದೌರ್ಜನ್ಯ, ಮಣಿಪುರದ ಸ್ಥಿತಿ, ಉತ್ತರ ಪ್ರದೇಶದ ಅರಾಜಕತೆ ಗಳ ಬಗ್ಗೆ ಮಾತನಾಡದ ಮೋದಿ ಭೇಟಿ ಬಚಾವೋ ಭೇಟಿ ಪಡಾವೋ ಎಂದರೆ ಹೇಗೆ ನಂಬುವುದು ಎಂದು ಪ್ರಶ್ನಿಸಿದ ಅವರು ಬಿ.ಜೆ.ಪಿ.ಯವರಿಗೆ ಮಹಿಳೆಯರ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ. ಕಸ್ತೂರಿ ರಂಗನ್‌ ವರದಿ, ಅರಣ್ಯ ಅತಿಕ್ರಮಣಗಳ ಬಗ್ಗೆ ಮಾತನಾಡದ ಕಾಗೇರಿ ಚುನಾವಣಾ ಸಮಯದಲ್ಲಿ ಒಂದು ಸಮೂದಾಯವನ್ನು ದೂಷಿಸುವುದು ಅವರಿಗೆ ಶೋಭೆ ತರುವುದಿಲ್ಲ. ರಾಜಕೀಯ ಕಾರಣಕ್ಕೆ ಮುಸ್ಲಿಂ ವಿರೋಧ, ಮಹಿಳೆಯರ ಪರ ಕಣ್ಣೀರು ಸುರಿಸುವ ಬಿ.ಜೆ.ಪಿ. ಅವರ ಹಗಲುದರೋಡೆ, ಸುಳ್ಳಿನಿಂದ ಸೋಲಲಿದ್ದು ಅವರ ಹಿಂದಿನ ಪ್ರಣಾಳಿಕೆ ನೋಡಿ,ಕೇಳಿದ ಜನರಿಗೆ ಕಾಂಗ್ರೆಸ್‌ ಬದ್ಧತೆ ಅರ್ಥವಾಗುತ್ತದೆ. ಜನಕಲ್ಯಾಣದ ಕಾರ್ಯಕ್ರಮಗಳಲ್ಲಿ ಜಾತಿ, ಭೇದ ನೋಡುವ ಬಿ.ಜೆ.ಪಿ. ಅಲ್ಪಸಂಖ್ಯಾತರ ವಿರೋಧಿಯಷ್ಟೇ ಅಲ್ಲ ಬಹುಸಂಖ್ಯಾತ ಬಡವರ ವಿರೋಧಿ ಕೂಡಾ ಎಂದು ದೂರಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *