ನಮಗೆ ಗ್ಯಾರಂಟಿ ಸಹಾಯಕ…

ಸರ್ಕಾರದ ಗ್ಯಾರಂಟಿ ಯೋಜನೆಗಳು ನನ್ನ ಗೆಲುವಿಗೆ ಸಹಕಾರಿಯಾಗಲಿದೆ: ಗೀತಾ ಶಿವರಾಜ್’ಕುಮಾರ್ (ಸಂದರ್ಶನ)

ಬೆಂಗಳೂರು: 2014ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದ ಗೀತಾ ಶಿವರಾಜಕುಮಾರ್ ಅವರು, ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಮೊಗ್ಗ ಕ್ಷೇತ್ರದಿಂದ ಮತ್ತೊಮ್ಮೆ ಸ್ಪರ್ಧೆಗಿಳಿದಿದ್ದು, ಬಿಜೆಪಿಯ ಬಿವೈ ರಾಘವೇಂದ್ರ ವಿರುದ್ಧ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಈ ನಡುವೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಗೀತಾ ಅವರು, ಸರ್ಕಾರದ ಗ್ಯಾರಂಟಿ ಯೋಜನೆಗಳು ನನ್ನ ಗೆಲುವಿಗೆ ಸಹಕಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಂದರ್ಶನದ ಆಯ್ದ ಭಾಗಗಳು ಇಂತಿವೆ…

Q

ಪ್ರಚಾರ ಹೇಗೆ ನಡೆಯುತ್ತಿದೆ?

A

ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದ್ದು, ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನರು ಸಾಕಷ್ಟು ಪ್ರೀತಿಯನ್ನು ತೋರಿಸುತ್ತಿದ್ದಾರೆ. ಯಾವುದೇ ನಕಾರಾತ್ಮಕ ಪ್ರತಿಕ್ರಿಯೆಗಳು ಬಂದಿಲ್ಲ. ಮಹಿಳೆಯರು ಮತ್ತು ಯುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ನನ್ನ ಸಭೆಗಳಿಗೆ ಬರುತ್ತಿದ್ದಾರೆ. ದಿವಂಗತ ನನ್ನ ತಂದೆ ಬಂಗಾರಪ್ಪ ಅವರ ಅನುಪಸ್ಥಿತಿಯನ್ನು ಎಲ್ಲರೂ ನೆನೆಯುತ್ತಿದ್ದಾರೆ.

Q

ತಮ್ಮ ನೆಚ್ಚಿನ ನಟರನ್ನು ನೋಡಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿರುವ ಸಾಧ್ಯತೆಗಳಿವೆ. ಇದು ಮತವಾಗಿ ಬದಲಾಗುತ್ತದೆ ಎಂದು ನೀವು ನಂಬುತ್ತೀರಾ?

A

2014ರ ಲೋಕಸಭಾ ಚುನಾವಣೆಯಲ್ಲಾದ ನನ್ನ ಹಿಂದಿನ ಅನುಭವದಂತೆ ಇದು ಮತಗಳಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ. ನಟರ ಪ್ರಚಾರ ನನಗೆ ಸಹಾಯ ಮಾಡುವ ಸಾಧ್ಯತೆಯಿದೆ.

Q

2014ರಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರಿಂದ ನೀವು ಸೋಲು ಕಂಡಿದ್ದಿರಿ. 2018ರ ಉಪಚುನಾವಣೆ ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಸಹೋದರ ಮಧು ಬಂಗಾರಪ್ಪ ಅವರನ್ನು ಬಿಜೆಪಿಯ ರಾಘವೇಂದ್ರ ಅವರು ಸೋಲಿಸಿದ್ದರು…?

A

ರಾಘವೇಂದ್ರ ಅವರ ಗೆಲುವಿನ ಓಟ ಈ ಬಾರಿ ಕೊನೆಗೊಳ್ಳಲಿದೆ ಎಂಬುದು ನನ್ನ ನಂಬಿಕೆ.

Q

ಸಂಸದರಾಗಿ ಆಯ್ಕೆಯಾದ ನಂತರ ನೀವು ಯಾವ ವಿಷಯಗಳಿಗೆ ಆದ್ಯತೆ ನೀಡುತ್ತೀರಿ?

A

ನನ್ನ ಸಹೋದರ ಮತ್ತು ಸ್ಥಳೀಯ ಶಾಸಕರು ಹಲವಾರು ಸಮಸ್ಯೆಗಳನ್ನು ಪರಿಹರಿಸುತ್ತಿದ್ದಾರೆ. ಸಂಂಸದೆಯಾದ ಬಳಿಕ ನನ್ನ ಮೊದಲ ಆದ್ಯತೆ ನೀರಿನ ಕೊರತೆ ನೀಗಿಸುವುದಾಗಿದೆ. ಸ್ಥಳೀಯವಾಗಿ ನಿಯಮಿತ ಬಸ್ ಸಂಪರ್ಕದ ಕೊರತೆಯಿಂದಾಗಿ ಚಿಕ್ಕ ಮಕ್ಕಳನ್ನು ಸಂಬಂಧಿಕರ ಮನೆ ಅಥವಾ ಹಾಸ್ಟೆಲ್‌ಗಳಿಗೆ ಓದಲು ಕಳುಹಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ರಸ್ತೆ ಸುಧಾರಣೆಯ ಉಪಕ್ರಮಗಳ ಜೊತೆಗೆ ಈ ಸಮಸ್ಯೆಯನ್ನು ಪರಿಹರಿಸಲಾಗುವುದು. ದೂರದ ಪ್ರದೇಶಗಳಲ್ಲಿ ಮೊಬೈಲ್ ಟವರ್‌ಗಳನ್ನು ಸ್ಥಾಪಿಸುವುದು. ಅರ್ಹ ವ್ಯಕ್ತಿಗಳಿಗೆ ಹಕ್ಕುಪತ್ರಗಳನ್ನು ನೀಡುವುದು. ನನ್ನ ಸಹೋದರ ಮತ್ತು ಇತರ ಶಾಸಕರ ಸಹಕಾರದೊಂದಿಗೆ ಹಲವಾರು ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶವಿದೆ.

Q

ಕಾಂಗ್ರೆಸ್ ಗ್ಯಾರಂಟಿ ಯೋಡನೆಗಳು ನಿಮಗೆ ಸಹಾಯ ಮಾಡುತ್ತವೆಯೇ?

A

ಗ್ಯಾರಂಟಿ ಯೋಜನೆಗಳು ನನ್ನ ಗೆಲುವಿಗೆ ಮಹತ್ತರ ಕೊಡುಗೆ ನೀಡುತ್ತವೆ ಎಂಬ ವಿಶ್ವಾಸ ನನಗಿದೆ. ಗ್ಯಾರಂಟಿ ಯೋಜನೆಗಳು ಶೇ.98 ಜನರನ್ನು ತಲುಪಿವೆ, ಉಳಿದ ಶೇ.2 ಅರ್ಹ ಜನರು ತಾಂತ್ರಿಕ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಫಲಾನುಭವಿಗಳು ನನ್ನ ಪರವಾಗಿ ಮತ ಚಲಾಯಿಸುವ ಸಾಧ್ಯತೆ ಇದೆ. ಮತದ ಮೂಲಕ ಜನರು ಪಕ್ಷಕ್ಕೆ ಧನ್ಯವಾದ ಹೇಳಲಿದ್ದಾರೆ.

Q

ಒಂದೊಮ್ಮೆ ಗೆದ್ದರೆ ಜನರ ಸಂಪರ್ಕಕ್ಕೆ ಸಿಗದೆ ಬೆಂಗಳೂರಿಗೆ ಮರಳುತ್ತೀರ ಎಂಬ ಆರೋಪವಿದೆ. ಈ ಆರೋಪಕ್ಕೆ ನೀವು ಹೇಗೆ ಪ್ರತಿಕ್ರಿಯಿಸುತ್ತೀರಿ?

A

ಕುಬಟೂರು ಮತ್ತು ಶಿವಮೊಗ್ಗ ನನ್ನ ಮನೆಗಳಿವೆ. ಇಲ್ಲ ಸಲ್ಲದ ಆರೋಪಗಳನ್ನು ಪ್ರಚಾರ ಮಾಡುವ ಬದಲು ಬಿಜೆಪಿ ನಾಯಕರು ಪ್ರಬುದ್ಧತೆ ಪ್ರದರ್ಶಿಸಬೇಕು. ರೈತರ ಸಮಸ್ಯೆಗಳು ಮತ್ತು ಹಿಂದುಳಿದವರ ಸಂಕಷ್ಟದ ಬಗ್ಗೆ ಬಿಜೆಪಿ ಮಾತನಾಡಬೇಕು. ಕ್ಷೇತ್ರ ಜನರೊಂದಿಗೆ ಇರುತ್ತೇನೆ. ಅವರ ಸಮಸ್ಯೆಗಳನ್ನು ಪರಿಹರಿಸುತ್ತೇನೆಂಬ ಭರವಸೆಯನ್ನು ನಾನು ನಿಮಗೆ ನೀಡುತ್ತಿದ್ದೇನೆ. ನಾನು ಎಂದಿಗೂ ನನ್ನ ಜವಾಬ್ದಾರಿಯಿಂದ ನುಣುಚಿಕೊಂಡಿಲ್ಲ, ಶಕ್ತಿಧಾಮ ಅನಾಥಾಶ್ರಮಕ್ಕೆ ವಾರಕ್ಕೆ ಎರಡು ಬಾರಿ ಭೇಟಿ ನೀಡುವುದು ಇದಕ್ಕೆ ಸಾಕ್ಷಿ ಎಂದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *