ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಮುಂಡಗೋಡ: ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ಮೋದಿ ಮೋದಿ ಎಂದು ಜೈಕಾರ ಹಾಕಿದ ಯುವಕರಿಗೆ ಅವರು ತಿರುಪತಿ ತಿಮ್ಮಪ್ಪನ ನಾಮ ಹಾಕಿದರು. ನರೇಂದ್ರ ಮೋದಿ ಸುಳ್ಳಿನ ಸರದಾರ, ಬಿಜೆಪಿ ಸುಳ್ಳು ಉತ್ಪಾದನಾ ಕೇಂದ್ರ; ಸುಳ್ಳೇ ಅವರ ಮನೆ ದೇವ್ರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಇಲ್ಲಿ ಹಮ್ಮಿಕೊಂಡಿದ್ದ ಪ್ರಜಾಧ್ವನಿ- 2 ಸಮಾವೇಶದಲ್ಲಿ ಮಾತನಾಡಿದ ಅವರು, ನಿರುದ್ಯೋಗ ಸಮಸ್ಯೆ ಬಗೆಹರಿಸಲು ಹೊಸ ಕಾರ್ಖಾನೆ ಸ್ಥಾಪಿಸದೆ, ಬಂಡವಾಳ ಹೂಡಿಕೆಗೆ ಅವಕಾಶವನ್ನೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿಕೊಟ್ಟಿಲ್ಲ.‌ ಮೋದಿ ಬಹಳ ಸೊಗಸಾಗಿ ಮಾತನಾಡುತ್ತಾರೆ. ಇವತ್ತಿನವರೆಗೆ ಸುಳ್ಳುಗಳನ್ನೇ ಹೇಳಿ ಅವರು ಜನರನ್ನ ತಪ್ಪು ದಾರಿಗೆ ಎಳೆದು, ಜನರ ಭಾವನೆಗಳನ್ನ ಕೆರಳಿಸಿ, ಜಾತಿ- ಧರ್ಮದ ಹೆಸರಿನಲ್ಲಿ ದ್ವೇಷ ಹರಿಬಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ಇದನ್ನ ಜನತೆ ಅರ್ಥ ಮಾಡಿಕೊಳ್ಳಬೇಕು. ಸುಳ್ಳು ಹೇಳುವ ಇಂಥವರನ್ನ ಮತ್ತೆ ನಂಬುತ್ತೀರಾ? ದಯಮಾಡಿ ನಂಬಬೇಡಿ. ಅವರು ದೇಶಕ್ಕೆ ಮಾಡಿದ ದೊಡ್ಡ ಮೋಸ ಸುಳ್ಳು ಎಂದರು.

ರೈತರ ಆದಾಯ ದುಪ್ಪಟ್ಟು ಮಾಡುತ್ತೇನೆಂದವರು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದರು‌. ಬಡವರು ಹಸಿವಿನಿಂದ ಮಲಗಬಾರದು, ಕರ್ನಾಟಕ ಹಸಿವು ಮುಕ್ತ ಮಾಡಬೇಕೆಂದು ಅನ್ನಭಾಗ್ಯದಲ್ಲಿ ಅಕ್ಕಿ ಕೊಟ್ಟೆ. ಬಿಜೆಪಿ ಸರ್ಕಾರ ಬಂದಾಗ ಯಡಿಯೂರಪ್ಪ ಅದರಲ್ಲಿ ೨ ಕೆಜಿ ಇಳಿಸಿದರು. ಅಧಿಕಾರಕ್ಕೆ ಬಂದ ತಕ್ಷಣವೇ ಕ್ಯಾಬಿನೆಟ್‌ನಲ್ಲಿ ಡಿಸೈಡ್ ಮಾಡಿ ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತಂದೆವು. ಆದರೆ ಆಗಲೂ ಅನ್ನಭಾಗ್ಯಕ್ಕೆ‌ ಅಕ್ಕಿ ಕೊಡದೆ ಜನರಿಗೆ ದ್ರೋಹ ಮಾಡಿದರು ಎಂದರು.

ಈ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗೆ ಆಶೀರ್ವಾದ ಮಾಡಬೇಕು. ನಿಮ್ಮೆಲ್ಲರ ಧ್ವನಿಯಾಗಿ ಕರ್ನಾಟಕದ ಪರವಾಗಿ ಲೋಕಸಭೆಯಲ್ಲಿ ಮಾತನಾಡಬೇಕೆಂದು ಮಾತನಾಡಲು ಅವಕಾಶ ಮಾಡಿಕೊಡಿ. ಈ ಜಿಲ್ಲೆಯ ಜನ ರಾಜಕೀಯವಾಗಿ ಬುದ್ಧಿವಂತರು. ಪ್ರಬುದ್ಧರು. ದೇಶದ ರಾಜಕೀಯ ವಿಶ್ಲೇಷಣೆ ಮಾಡಬಲ್ಲರು. ಕೊಟ್ಟ ಮಾತನ್ನ ಉಳಿಸಿಕೊಂಡಿರುವವರು ಯಾರು, ನೀಡಿರುವ ಭರವಸೆ ಈಡೇರಿಸದ ಪಕ್ಷ ಯಾವುದೆಂದು ಗುರುತಿಸುವ ಸಾಮರ್ಥ್ಯ ನಿಮಗಿದೆ ಎಂದು ಭಾವಿಸಿದ್ದೇನೆ ಎಂದರು.

೧೦ ವರ್ಷಗಳಿಂದ ಪ್ರಧಾನಿಯಾಗಿರುವ ನರೇಂದ್ರ ಮೋದಿ, ನುಡಿದಂತೆ ನಡೆದಿದ್ದಾರೆಂದು ಅನಿಸಿದರೆ ಬೆಂಬಲಿಸಿ‌. ನುಡಿದಂತೆ ನಡೆದಿಲ್ಲವೆಂದಾದರೆ ತಿರಸ್ಕರಿಸಿ.
ಸರ್ವರಿಗೂ ಸಮಪಾಲು ಸಮಬಾಳು ನಮ್ಮ ಧ್ಯೇಯ. ಸಂವಿಧಾನ ರಕ್ಷಣೆಗೆ, ಪ್ರಜಾಪ್ರಭುತ್ವ ಉಳಿಸಲು ಕಾಂಗ್ರೆಸ್ ಬೆಂಬಲಿಸಬೇಕು. ಕಾಂಗ್ರೆಸ್ ಉಳಿಯದಿದ್ದರೆ ನಾವ್ಯಾರೂ ಉಳಿಯಲು ಸಾಧ್ಯವಿಲ್ಲ ಎಂದರು.



ಡಾ.ಅಂಜಲಿ ನಿಂಬಾಳ್ಕರ್ ಇದೇ ಉತ್ತರಕನ್ನಡ ಕ್ಷೇತ್ರದವರು. ಮರಾಠ ಹೆಣ್ಣುಮಗಳಿಗೆ ಕೊಡಬೇಕೆಂದು ಈ ಬಾರಿ ಅವರಿಗೆ ಟಿಕೆಟ್ ನೀಡಿದ್ದೇವೆ. ಅವರ ಕೈಹಿಡಿಬೇಕು, ಆಕೆಗೆ ಶಕ್ತಿ ನೀಡಬೇಕಿ. ವೈದ್ಯರಾಗಿದ್ದ ಅವರು ನಿಮ್ಮ ಕಷ್ಟಗಳನ್ನ ಅರಿತಿದ್ದಾರೆ.

  • ಸಿದ್ದರಾಮಯ್ಯ, ‌ಮುಖ್ಯಮಂತ್ರಿ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ...

ಬಿ.ಜೆ.ಪಿ. & ಕಾಂಗ್ರೆಸ್‌ ಗಳಿಂದ ತುಷ್ಟೀಕರಣದ ಸ್ಫರ್ಧೆ… ಕಾಂಗ್ರೆಸ್‌ ಬಸ್ಮಾಸುರ,ಬಿ.ಜೆ.ಪಿ. ಬಕಾಸುರ….

ಮುಸ್ಲಿಂ ಅಲ್ಪಸಂಖ್ಯಾತರನ್ನು ಒಲೈಸುವಲ್ಲಿ ಬಿ.ಜೆ.ಪಿ. ಮತ್ತು ಕಾಂಗ್ರೆಸ್‌ ಗಳು ಸ್ಫರ್ಧೆ ನಡೆಸಿದ್ದು ಅಪಾಯಕಾರಿ ನಡೆಗಳಲ್ಲಿ ಎರಡೂ ಪಕ್ಷಗಳೂ ಒಂದೇ ನಾಣ್ಯದ ಎರಡು ಮುಖಗಳಿಂತಿವೆ ಎಂದು...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *