ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ


ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.
ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಯಕ್ಷ ಭಜನೆ, ಸನ್ಮಾನ, ಯಕ್ಷ ರೂಪಕ ಪ್ರದರ್ಶನವನ್ನು ಶಾಸಕ ಭೀಮಣ್ಣ‌ ನಾಯ್ಕ‌ ಉದ್ಘಾಟಿಸಲಿದ್ದಾರೆ.

ಹಿರಿಯ ಸಾಹಿತಿ ಸುಬ್ರಾಯ ಮತ್ತೀಹಳ್ಳಿ ಅವರನ್ನು ಪ್ರಜಾವಾಣಿ ದೈನಿಕದ‌ ಸಂಪಾದಕ ರವೀಂದ್ರ ಭಟ್ಟ ಅವರು ಸನ್ಮಾನಿಸಲಿದ್ದಾರೆ. ಅತಿಥಿಗಳಾಗಿ‌ ಸೊಸೈಟಿ ಅಧ್ಯಕ್ಷ‌ ನಾರಾಯಣ‌ ಬಿ.ಹೆಗಡೆ ‌ಪಾಲ್ಗೊಳ್ಳುವರು.
ಒಂದೇ ಸಾಹಿತ್ಯದ ಎರಡು‌ ಅನುಭೂತಿಯ ಯಕ್ಷ ಭಜನೆಯಲ್ಲಿ ಸ್ವರ್ಣವಲ್ಲೀ‌ ಮಾತೃ ವೃಂದದ ಕಲಾವಿದರಾದ ಸಂಧ್ಯಾ ಹೆಗಡೆ, ಶ್ರತಿ ವೈದ್ಯ , ಗೀತಾ ಹೆಗಡೆ , ವಿಶಾಲಾಕ್ಷಿ ಭಟ್ಟ, ನಾಗರತ್ನಾ ಭಟ್ಟ, ವಾಣಿ ಭಟ್ಟ, ಚಂದ್ರಕಲಾ ಭಟ್ಟ, ಚೇತನಾ ಹೆಗಡೆ, ಸುಮನಾ ಭಟ್ಟ ಹಾಡಲಿದ್ದು,
ಹಾರ್ಮೋನಿಯಂದಲ್ಲಿ ರಾಧಾ ಭಟ್ಟ, ತಬಲಾದಲ್ಲಿ ಕಿರಣ ಕಾನಗೋಡು ಸಹಕಾರ‌ ನೀಡಲಿದ್ದಾರೆ.

ಬಳಿಕ ಕು. ತುಳಸಿ ಹೆಗಡೆ‌ ಯವರಿಂದ ಎಂ.ಎ.ಹೆಗಡೆ‌ ಅವರ ಸಾಹಿತ್ಯ, ನಿರ್ದೇಶನದ ಶ್ರೀಕೃಷ್ಣಂ ವಂದೇ ಯಕ್ಷ ರೂಪಕ ಪ್ರದರ್ಶನ ಕಾಣಲಿದೆ. ಯಕ್ಷ ಭಜನೆ ಹಾಗೂ ರೂಪಕದ‌ ಹಿಮ್ಮೇಳದಲ್ಲಿ ಪ್ರಸಿದ್ಧ ಕಲಾವಿದರಾದ ಕೇಶವ ಹೆಗಡೆ ‌ಕೊಳಗಿ, ಶಂಕರ ಭಾಗವತ್, ವಿಘ್ನೇಶ್ವರ ಕೆಸರಕೊಪ್ಪ ಸಹಕಾರ‌ ನೀಡಲಿದ್ದಾರೆ. ಪ್ರಸಾಧನದಲ್ಲಿ ವೆಂಕಟೇಶ‌ ಬೊಗ್ರಿಮಕ್ಕಿ ಸಹಕಾರ‌ ನೀಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ಟ್ರಸ್ಟ್ ಉಪಾಧ್ಯಕ್ಷ‌ ರಮೇಶ ಹಳೆಕಾನಗೋಡ, ಕಾರ್ಯದರ್ಶಿ ಗಾಯತ್ರೀ ರಾಘವೇಂದ್ರ ತಿಳಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *