

ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಮಂಗಳವಾರ ತಾಲೂಕಿನ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಮೂಲಭೂತ ಸೌಲಭ್ಯ ಹಾಗೂ ಸಮಸ್ಯೆ ಆಲಿಸಿದರು.


ತಾಲೂಕಿನ ಅವರಗುಪ್ಪಾದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಭೇಟಿ ನೀಡಿ ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಸಿಬ್ಬಂದಿಗಳೊಂದಿಗೆ ಚರ್ಚೆ ನಡೆಸಿ ಕಾಲೇಜಿನ ಸಮಸ್ಯೆ ಆಲಿಸಿ ಕಾಲೇಜಿಗೆ ಅಗತ್ಯವಿರುವ ಮೂಲ ಸೌಲಭ್ಯ ಕಲ್ಪಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆಸಲಾಗುವುದು ಎಂದು ಪ್ರವೇಶಾತಿ ಬಯಸಿ ಬರುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಅವಕಾಶ ನೀಡುವಂತೆ ಪ್ರಚಾರ್ಯರಿಗೆ ಸೂಚಿಸಿದರು.
ನಂತರ ಹಾಳದಕಟ್ಟಾ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಆಗಮಿಸಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಉಪನ್ಯಾಸಕರೊಂದಿಗೆ ಸಭೆ ನಡೆಸಿ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರೀಯೆ, ಕಲಿಕೆಯ ಗುಣಮಟ್ಟ ಹಾಗೂ ಇತರ ಸೌಲಭ್ಯಗಳ ಮಾಹಿತಿ ಪಡೆದುಕೊಂಡರು.
ಮಧ್ಯಾಹ್ನ ಇಲ್ಲಿಯ ಸರ್ಕಾರಿ ಪ್ರಥಮದರ್ಜೆ ಕಾಲೇಜಿಗೆ ಭೇಟಿ ನೀಡಿ ಪ್ರಾಚಾರ್ಯರು, ಉಪನ್ಯಾಸಕರೊಂದಿಗೆ ಚರ್ಚಿಸಿ ವಿದ್ಯಾರ್ಥಿಗಳ ಹಾಜರಾತಿ, ಶಿಸ್ತು ಮತ್ತಿತರ ವಿಷಯಗಳ ಕುರಿತು ಮಾಹಿತಿ ಪಡೆದು ಗುಣಮಟ್ಟದ ಶಿಕ್ಷಣ ನೀಡುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಕಾಲೇಜುಗಳ ಪ್ರಾಚಾರ್ಯರಾದ ಸತೀಶ ನಾಯ್ಕ, ಶಾಂತಾರಾಮ, ಬಿ.ಎಸ್.ಹೆಗಡೆ, ಗ್ಯಾರೆಂಟಿ ಅನುಷ್ಠಾನ ಸಮಿತಿ ತಾಲೂಕಾ ಅಧ್ಯಕ್ಷ ಕೆ.ಜಿ.ನಾಗರಾಜ, ಪ್ರಮುಖರಾದ ವಿ.ಎನ್.ನಾಯ್ಕ, ಬಿ.ಆರ್.ನಾಯ್ಕ, ಬಾಲಕೃಷ್ಣ ನಾಯ್ಕ, ಬಾಬು ನಾಯ್ಕ, ಎಸ್.ಕೆ.ನಾಯ್ಕ, ಮಂಜುನಾಥ ನಾಯ್ಕ ತ್ಯಾರ್ಸಿ, ಅಣ್ಣಪ್ಪ ಶಿರಳಗಿ, ಎನ್.ಟಿ.ನಾಯ್ಕ, ವಿನಾಯಕ ಕೊಂಡ್ಲಿ ಮತ್ತಿತರರು ಉಪಸ್ಥಿತರಿದ್ದರು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
