

ಕರ್ನಾಟಕದ ಶಾಲೆಗಳಲ್ಲಿ ಮಕ್ಕಳ ಹುಟ್ಟುಹಬ್ಬ ಆಚರಣೆ ನಿಷೇಧಿಸಿ ಆದೇಶ ಹೊರಡಿಸಿದ ಸರ್ಕಾರ!
ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ (ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಇತ್ಯಾದಿ.) ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ.


ಸಾಂದರ್ಭಿಕ ಚಿತ್ರ
ಬೆಂಗಳೂರು: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ (ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಇತ್ಯಾದಿ.) ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ.
ಯಾವುದೇ ಕಾರಣಕ್ಕೂ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು, ಸೆಲೆಬ್ರಿಟಿಗಳು, ಗಣ್ಯರು ಮತ್ತು ಅವರ ಮಕ್ಕಳ ಹುಟ್ಟುಹಬ್ಬವನ್ನು ಶಾಲೆಯಲ್ಲಿ ಆಚರಿಸುವುದನ್ನು ನಿಷೇಧಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು. ರಾಜಕೀಯ ಮುಖಂಡರುಗಳು, ಮಠಾಧೀಶರು ಇತ್ಯಾದಿ ತಮ್ಮ ಅಥವಾ ತಮ್ಮ ಮಕ್ಕಳ ಜನ್ಮದಿನವನ್ನು ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಇತ್ಯಾದಿ ಹಂಚುವ ಮೂಲಕ ಅದ್ದೂರಿಯಾಗಿ ಆಚರಿಸುತ್ತಿರುವುದು ಕಂಡುಬಂದಿದೆ.
ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲಾಗುವ ಮಕ್ಕಳು ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳು, ಬಾಲ ಕಾರ್ಮಿಕ ಪದ್ದತಿಯಿಂದ ರಕ್ಷಿಸಲ್ಪಟ್ಟಿ, ಬಾಲ್ಯ ವಿವಾಹಕ್ಕೆ ಒಳಗಾದ, ಅತ್ಯಾಚಾರಕ್ಕೆ ಒಳಗಾದ. ತಂದೆ-ತಾಯಿಯಿಂದ ತಿರಸ್ಕರಿಸಲ್ಪಟ್ಟ, ತಾಯಿ ಅಥವಾ ತಂದೆ ಇಲ್ಲದ, ಭಿಕ್ಷಾಟನೆಯಿಂದ ರಕ್ಷಿಸಲ್ಪಟ್ಟ ಇತ್ಯಾದಿ ಪಾಲನೆ ಮತ್ತು ರಕ್ಷಣೆಯ ಅವಶ್ಯವಿರುವ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ/ಬಾಲನ್ಯಾಯ ಮಂಡಳಿಗಳ ಆದೇಶದ ಮೂಲಕ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲು ಮಾಡಲಾಗಿರುತ್ತದೆ.

ಈ ಎಲ್ಲಾ ವರ್ಗದ ಮಕ್ಕಳು ಸಮಾಜದಿಂದ ವಂಚಿತರಾಗಿ ಮನನೊಂದವರಾಗಿರುವುದರಿಂದ ಮಕ್ಕಳ ಪಾಲನಾ ಸಂಸ್ಥೆಯಲ್ಲಿ ದಾಖಲಾಗಿರುವ ಮಕ್ಕಳ ಮನಸ್ಸಿಗೆ ಖುಷಿ ತರುವಂತಹ ಸೃಜನಶೀಲತೆಯ ಕಾರ್ಯಕ್ರಮಗಳನ್ನು ಏರ್ಪಡಿಸಿ ಮಕ್ಕಳ ಮನಸ್ಸು ಸಧೃಡ ಹಾಗೂ ಆಹ್ಲಾದಕರವಾಗುವಂತೆ ಪ್ರೋತ್ಸಾಹಿಸಬೇಕಾಗುತ್ತದೆ.
ಆದರೆ ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು, ಇತ್ಯಾದಿ ಗಣ್ಯವ್ಯಕ್ತಿಗಳು ಅವರ ಹಾಗೂ ಅವರ ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಇತ್ಯಾದಿ ಹಂಚುವ ಅದ್ದೂರಿ ಕಾರ್ಯಕ್ರಮಗಳು ಸಂಸ್ಥೆಯಲ್ಲಿ ಆಚರಿಸುವುದರಿಂದ ಮಕ್ಕಳ ಪಾಲನಾ ಸಂಸ್ಥೆಯ ಮಕ್ಕಳಿಗೆ ಅವರ ಹುಟ್ಟು ಹಬ್ಬ ಈ ರೀತಿ ಆಚರಿಸಿಕೊಳ್ಳಲು ಸಾಧ್ಯವಾಗದೇ ಆಚರಿಸಲ್ಪಡುತ್ತಿರುವ ಹುಟ್ಟುಹಬ್ಬದೊಂದಿಗೆ ಹೋಲಿಕೆ ಮಾಡಿಕೊಂಡಲ್ಲಿ ಈ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಿ, ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ. ಇಂತಹ ಆಚರಣೆಗಳು ಸದರಿ ಮಕ್ಕಳ ಆತ್ಮಾಭಿಮಾನ, ಆತ್ಮಗೌರವಕ್ಕೆ ಧಕ್ಕೆಯನ್ನುಂಟು ಮಾಡುತ್ತವೆ.
ಮಕ್ಕಳು ಕುಟುಂಬದಲ್ಲಿ ಬೆಳೆಯುವ ಬೇರೆ ಯಾವುದೇ ಮಗುವಿಗಿಂತ ಕಡಿಮೆ ಇಲ್ಲ ಎಂಬ ಭಾವನೆಯನ್ನು ಕಾಪಾಡುವ ಸಲುವಾಗಿ ಈ ಮಕ್ಕಳ ಹುಟ್ಟುಹಬ್ಬ ಹಾಗೂ ಸರ್ಕಾರದ ಆದೇಶದ ಮೂಲಕ ನಿಗದಿಪಡಿಸಿದ ವ್ಯಕ್ತಿಗಳ ಹುಟ್ಟುಹಬ್ಬ ಆಚರಣೆಯನ್ನು ಹೊರತು ಪಡಿಸಿ, ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಬೇರೆ ಯಾರ ಹುಟ್ಟುಹಬ್ಬ ಆಚರಿಸುವುದನ್ನು ಈ ಮೂಲಕ ನಿಷೇಧಿಸಲಾಗಿದೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
