

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ JDS MLC ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರ ಬಂಧಿಸಿದ್ದಾರೆ.


ಸೂರಜ್ ರೇವಣ್ಣ
ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ JDS MLC ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರ ಬಂಧಿಸಿದ್ದಾರೆ.


ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಎಚ್.ಡಿ.ರೇವಣ್ಣ ಕುಟುಂಬದ ಮತ್ತೊಬ್ಬರ ಬಂಧನವಾಗಿದೆ.
ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಜ್ವಲ್ ಸಹೋದರ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ.

ನಿನ್ನೆ ರಾತ್ರಿ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರವಾಗಿ ಹೊಳೆ ನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ಪ್ರಕರಣದ ಸಂಬಂಧ ಸೂರಜ್ ರೇವಣ್ಣ ಅವರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳ ಪಡಿಸಿದರು.
ಶನಿವಾರ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ತಡರಾತ್ರಿವರೆಗೂ ವಿಚಾರಣೆ ನಡೆಯಿತು. ಭಾನುವಾರ ಮುಂಜಾನೆ 4 ಗಂಟೆವರೆಗೂ ಸೂರಜ್‌ನನ್ನು ತನಿಖಾಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು. (kp.c)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






