


ಸಿದ್ದಾಪುರ: ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ತಾಲೂಕಿನ ತರಳಿ ಮಠದ ಆವರಣದಲ್ಲಿ ಆಯೋಜಿಸಲಾಗಿದ್ದ ವನಮಹೋತ್ಸವ ಕಾರ್ಯಕ್ರಮಕ್ಕೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಚಾಲನೆ ನೀಡಿದರು.
ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ನಡೆದ ವನಮಹೋತ್ಸವ ಕಾರ್ಯಕ್ರಮದಡಿಯಲ್ಲಿ ಗಿಡ ನೆಟ್ಟು ಚಾಲನೆ ನೀಡಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪದಕ ವಿಜೇತರಾದ ಅರಣ್ಯ ಇಲಾಖೆಯ ರವಿ ಹರಳಾದ್ ಹಾಗೂ ವಿಶ್ವನಾಥ ನಾಯ್ಕ, ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತ ಎಂ.ಬಿ.ನಾಯ್ಕ ಕಡಕೇರಿ ಅವರನ್ನು ಸನ್ಮಾನಿಸಿ ಗೌರವಿಸಿದರು.
ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಪರಿಸರ ಸಮತೋಲನವಾಗಿದ್ದರೆ ಮಾತ್ರ ನಾಡು ಸುಭೀಕ್ಷವಾಗಿರಲು ಸಾಧ್ಯ. ಪ್ರತಿಯೊಬ್ಬರು ಸಹ ಅರಣ್ಯ ಸಂರಕ್ಷಣೆಗೆ ಮಹತ್ವ ನೀಡುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಡಿಎಫ್ಓ ಅಜ್ಜಯ್ಯ, ಎಸಿಎಫ್ ಪ್ರವೀಣ ಬಸರೂರ, ಆರ್.ಎಫ್.ಓ ಬಸವರಾಜ ಬೋಚ್ಚಳ್ಳಿ, ತರಳಿ ಮಠದ ಅಧ್ಯಕ್ಷ ಎನ್.ಡಿ.ನಾಯ್ಕ, ಸಮಿತಿಯ ಎಸ್.ಎಚ್.ನಾಯ್ಕ, ಎಂ.ಆಯ್.ನಾಯ್ಕ, ದಿನೇಶ ನಾಯ್ಕ, ಸಿ.ಆರ್.ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.
