


ಸಿದ್ದಾಪುರ: ತಾಲೂಕಿನ ಕೋಲಶಿರ್ಸಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರಾರಂಭವಾಗಿರುವ ಪಿ.ಎಮ್.ಶ್ರೀ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಮಂಗಳವಾರ ಚಾಲನೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಕ್ಷೇತ್ರದ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳು ಗುಣಮಟ್ಟದ ಶಿಕ್ಷಣ ನೀಡುತ್ತಿವೆ. ಸರ್ಕಾರ ಕೋಟ್ಯಂತರ ರು ಖರ್ಚು ಮಾಡಿ ಶಿಕ್ಷಣ ನೀಡುತ್ತಿದ್ದರೂ ಪಾಲಕರು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಮುಂದಾಗುತ್ತಿರುವುದು ಬೇಸರದ ಸಂಗತಿ. ಸರ್ಕಾರಿ ಶಾಲೆಗಳ ಮೇಲೆ ಪಾಲಕರು ಹಾಗೂ ಸಮಾಜದ ಅಭಿಮಾನ ಹೆಚ್ಚಬೇಕು ಎಂದರು.

ಈ ಸಂದರ್ಭದಲ್ಲಿ ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ನಾಯ್ಕ, ಎಸ್.ಡಿ.ಎಂ.ಸಿ ಅಧ್ಯಕ್ಷ ಕುಮಾರ ನಾಯ್ಕ, ಕೋಲಶಿರ್ಸಿ ಗ್ರಾಪಂ ಅಧ್ಯಕ್ಷೆ ಹೇಮಾವತಿ ಗೌಡರ್, ಸದಸ್ಯರಾದ ಕೆ.ಆರ್.ವಿನಾಯಕ, ಜಿ.ಬಿ.ನಾಯ್ಕ, ಕ್ಷೇತ್ರ ಸಮನ್ವಯಾಧಿಕಾರಿ ಚೈತನ್ಯಕುಮಾರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ಹೆಗಡೆ, ಎಸ್.ಡಿ.ಎಂ.ಸಿ ಸದಸ್ಯ ಪಾಂಡುರಂಗ ನಾಯ್ಕ, ಬಾಲಕೃಷ್ಣ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.
