ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ ಹೋರಾಟಗಳ ಮೂಲಕ ಸುಧಾರಣೆ ಮಾಡುವ ಅನಿವಾರ್ಯತೆ ಇದೆ ಎಂದಿದ್ದಾರೆ. ತೀರ್ಥಹಳ್ಳಿಯಲ್ಲಿ ನಡೆದ ಬಿ.ಎ.ಎಂ.ಸಿ.ಎಫ್.‌ ನ ದಕ್ಷಿಣ ಭಾರತದ ಅರ್ಧವಾರ್ಷಿಕ ಸಮಾಗಮ ದಲ್ಲಿ ಅವರು ಮಾತನಾಡಿದರು.

ಅಂಬೇಡ್ಕರ್‌ ಹಿಂದುಳಿದ ವರ್ಗಗಳಿಗೆ ಅರ್ಥವಾದರೆ ಕಷ್ಟ ಎಂದು ಗ್ರಹಿಸಿದ ಪಟ್ಟಭದ್ರರು ಅವರನ್ನು ದಲಿತರಿಗೆ ಸೀಮಿತ ಮಾಡಿದರು. ಡಾ. ಅಂಬೇಡ್ಕರ್‌, ನಾರಾಯಣಗುರುಗಳು ಯಾರಿಗೂ ಸೀಮಿತವಲ್ಲ ಅವರ ಚಿಂತನೆಗಳ ಆಧಾರದಲ್ಲಿ ಬಹುಜನಚಳವಳಿಗಳು ಗಟ್ಟಿಗೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಅವರು ಪ್ರತಿಪಾದಿಸಿದರು.

ಅಂಬೇಡ್ಕರ್‌ ಕಾಂಗ್ರೆಸ್‌ ಜೊತೆ ಜಗಳಕ್ಕೆ ನಿಲ್ಲಲು ಅನೇಕ ಕಾರಣಗಳಿವೆ ಅವುಗಳಲ್ಲಿ ಹಿಂದೂ ಬಿಲ್‌ ಮತ್ತು ಹಿಂದುಳಿದವರ ಪ್ರಾತಿನಿಧ್ಯದ ಅಂಶಗಳು ಪ್ರಮುಖವಾದವು ಅಂಬೇಡ್ಕರ್‌, ನಾರಾಯಣ ಗುರುಗಳನ್ನು ಜಾತಿ, ಧರ್ಮಕ್ಕೆ ಸೀಮಿತಮಾಡುವವರ ಹಿಂದಿನ ಹುನ್ನಾರ ದೇಶಕ್ಕೆ ಅರ್ಥವಾಗಬೇಕಿದೆ ಎಂದು ಆಶಿಸಿದರು.

ಬಿ.ಎ.ಎಂ.ಸಿ.ಎಫ್‌ ಬಹುಜನರ ಪರವಾಗಿನ ಸಿದ್ಧಾಂತ ಬೋಧನೆ ಮತ್ತು ವಂಚಿತರ ಪರವಾಗಿನ ಹೋರಾಟ ಕಟ್ಟುವ ಕೆಲಸಮಾಡುತ್ತಿದೆ ಎಂದು ತಿಳಿಸಿದರು. ಈ ಸಮಾರಂಭದಲ್ಲಿ ಬಿ.ಎ.ಎಂ.ಸಿ.ಎಫ್‌ ಮುಖ್ಯಸ್ಥ ವಿಲಾಸ ಕಾರತ್‌, ಕೇರಳ ಮತ್ತು ತೆಲಂಗಾಣ ಉಸ್ತುವಾರಿಗಳು,ಆಯ್. ಎಂ. ಪಿ.ಎ. ಮುಖ್ಯಸ್ಥ ಡಾ. ಭಾನುಪ್ರಕಾಶ್‌, ಶಿವಮೊಗ್ಗ ವಕೀಲರ ಸಂಘದ ಅಧ್ಯಕ್ಷ ಶಿವಮೂರ್ತಿ, ಸುಧೀರ್‌ ನಾಗ್‌, ಅಬ್ದುಲ್‌ ಅಜೀಜ್‌ ಸೇರಿದಂತೆ ಸಂಘಟನೆಯ ಪ್ರಮುಖರು ಪಾಲ್ಗೊಂಡಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *