


ಪಟ್ಟಣದ ಬಾಲಭವನದಲ್ಲಿ ನಡೆದ ಪತ್ರಿಕಾ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಗುರುವಾರ ಅವರು ಮಾತನಾಡಿದರು.
ಬದಲಾದ ಕಾಲದಲ್ಲಿ ಸಾಮಾಜಿಕ ಜಾಲತಾಣಗಳು ತಮ್ಮ ಪ್ರಭಾವನ್ನು ಹೆಚ್ಚಿಸಿಕೊಂಡಿದ್ದು ಹಲವು ಬಾರಿ ಅವಸರದಿಂದ ಸುಳ್ಳು ಮಾಹಿತಿಗಳು ಬಿತ್ತರಗೊಳ್ಳುತ್ತಿವೆ. ಇದರಿಂದ ಸಮಾಜಕ್ಕೆ ತಪ್ಪು ಸಂದೇಶಗಳು ರವಾನೆಯಾಗುತ್ತದೆ.
ಮಳೆಗಾಲದಲ್ಲಿ ಸಂಭವಿಸುತ್ತಿರುವ ಅನಾಹುತಗಳನ್ನು ನಾವು ನೋಡುತ್ತಿದ್ದೇವೆ. ಇವುಗಳಿಗೆ ಶಾಶ್ವತ ಪರಿಹಾರ ಸಿಗಬೇಕಾದರೆ ಪರಿಸರದ ಜಾಗೃತಿ ಮೂಡಬೇಕು. ಈ ಕುರಿತು ಅಧಿಕಾರಿಗಳಿಗೆ, ಜನ ಪ್ರತಿನಿಧಿಗಳಿಗೆ ಮನದಟ್ಟು ಮಾಡಲು ಮಾಧ್ಯಮಗಳು ಕಾರ್ಯಪ್ರವೃತ್ತರಾಗಬೇಕು ಎಂದರು.
ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಕೊಳಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತನಾಡಿದರು.
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಾಯ ಭಟ್ ಬಕ್ಕಳ ಪತ್ರಕರ್ತರ ಮಾಹಿತಿಯನ್ನು ಬಿಡುಗಡೆಗೊಳಿಸಿ ಮಾತನಾಡಿ ಪ್ರತಿಯೊಬ್ಬ ವ್ಯಕ್ತಿ ನಮ್ಮಿಂದ ಸಮಾಜಕ್ಕೆ ಏನು ಕೊಡಬಹುದೆಂದು ಯೋಚಿಸಿದಾಗ ಸಮಾಜ ನಮ್ಮನ್ನು ಗೌರವಿಸುತ್ತದೆ. ಅಂತೆಯೇ ಪತ್ರಕರ್ತರೂ ಕೂಡ ಹಣದ ಆಮಿಷಗಳಿಗೆ ಬಲಿಯಾಗದೆ ಸಮಾಜಕ್ಕೆ ಒಳಿತಾಗುವ ಕಾರ್ಯದಲ್ಲಿ ತೊಡಗಿಕೊಂಡಾಗ ಗೌರವ ದೊರೆಯುತ್ತದೆ
ಎಂದರು.
ಸ್ಥಳೀಯ ಲಯನ್ಸ್ ಕ್ಲಬ್ ಅಧ್ಯಕ್ಷ ಎ ಜಿ ನಾಯ್ಕ ಸಭೆಯಲ್ಲಿ ಭಾಗಿಯಾಗಿ ಮಾತನಾಡಿ ಸಮಾಜವನ್ನು ತಿದ್ದುವ ಕೆಲಸ ಪತ್ರಿಕೆಗಳಿಂದ ಆಗುತ್ತಿದೆ. ತಾಲ್ಲೂಕಿನ ಪತ್ರಕರ್ತರ ಮತ್ತು ಜನರ ಸಹಕಾರದಿಂದ ಲಯನ್ಸ್ ಸಂಸ್ಥೆಯ ಮೂಲಕ ಬಡವರ ಉಚಿತ ಆರೋಗ್ಯ ತಪಾಸಣೆ ನಡೆಸಬೇಕೆಂಬ ಆಶಯವಿದೆ ಎಂದರು.
ಪತ್ರಕರ್ತ ಕೆಕ್ಕಾರ್ ನಾಗರಾಜ ಭಟ್ಟ ಅವರ ವತಿಯಿಂದ ಪ್ರತಿ ವರ್ಷ ನೀಡಲಾಗುತ್ತಿರುವ ಗುರುಮನೆ ದತ್ತಿ ನಿಧಿ ಪ್ರಶಸ್ತಿಯನ್ನು ತಾಲ್ಲೂಕಿನ ವಾಜಗದ್ದೆ ದುರ್ಗಾವಿನಾಯಕ ಕೃಷಿ ಯುವಕ ಸಂಘಕ್ಕೆ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪತ್ರಿಕಾ ವಿತರಕ ಪ್ರಶಾಂತ ಶೇಟ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಂಘದ ಜಿಲ್ಲಾ ಉಪಾಧ್ಯಕ್ಷ ನಾಗರಾಜ ಭಟ್ಟ ಕೆಕ್ಕಾರ್ ಸನ್ಮಾನಿತರ ಪರಿಚಯ ಮಾಡಿದರು.
ಈ ಸಂದರ್ಭದಲ್ಲಿ ತಾಲ್ಲೂಕಿನ ಬಿಳಗಿ ವಾಲ್ಮೀಕಿ ಸೇವಾ ಟ್ರಸ್ಟ್ ವತಿಯಿಂದ ತಾಲ್ಲೂಕಿನ ಪತ್ರಕರ್ತರಿಗೆ ಗೌರವಿಸಲಾಯಿತು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಮಂಗಲಾ ಹೊನ್ನೆಕೊಪ್ಪ ವೇದಿಕೆಯಲ್ಲಿದ್ದರು.
ಪತ್ರಕರ್ತ ಗಣೇಶ ಭಟ್ಟ ಹೊಸೂರು ಸ್ವಾಗತಿಸಿದರು. ಸಂಘದ ತಾಲ್ಲೂಕು ಕಾರ್ಯದರ್ಶಿ ರಮೇಶ ಹಾರ್ಸಿಮನೆ ನಿರೂಪಿಸಿದರು. ಸುಜಯ್ ಭಟ್ಟ ವಂದಿಸಿದರು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
