ಪುನೀತ್‌ ರಾಜಕುಮಾರ ಆಶ್ರಯಧಾಮದಲ್ಲಿ ನಡೆಯಿತು ಮಂತ್ರ ಮಾಂಗಲ್ಯ ಮದುವೆ

ಸಿದ್ದಾಪುರ: ತಾಲೂಕಿನ ಮೂಗದೂರಿನ ಪುನೀತ್ ರಾಜಕುಮಾರ ಆಶ್ರಯಧಾಮ ಅನಾಥಾಶ್ರಮದಲ್ಲಿ ಪರಸ್ಪರ ಪ್ರೀತಿಸುತ್ತಿದ್ದವರಿಗೆ ಗುರುವಾರ ಮಂತ್ರ ಮಾಂಗಲ್ಯದ ಮದುವೆ ಮಾಡಲಾಯಿತು.


ಮನೆಯವರಿಂದ ತಿರಸ್ಕರಿಸಲ್ಪಟ್ಟು ಮಾನಸಿಕವಾಗಿ ಅಸ್ವಸ್ಥರಾಗಿದ್ದ ಹೊನ್ನಾವರದ ದಿವ್ಯಾ ಹಾಗೂ ಸಿಗ್ಗಾಂವನ ಈರಣ್ಣ ಆಶ್ರಮದಲ್ಲಿ ಆಶ್ರಯ ಪಡೆದು ಚೇತರಿಸಿಕೊಂಡಿದ್ದು ಇಬ್ಬರು ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು‌. ಆಶ್ರಮದ ಮುಖ್ಯಸ್ಥ ನಾಗರಾಜ ನಾಯ್ಕ ಎರಡು ಮನೆಯವರಿಗೆ ವಿಷಯ ತಿಳಿಸಿ ತಾಲೂಕಿನ ಗಣ್ಯರು ಹಾಗೂ ಮುತೈದೆಯರ ಸಮ್ಮುಖದಲ್ಲಿ ಕುವೆಂಪು ಆಶಯದ ಮಂತ್ರ ಮಾಂಗಲ್ಯ ಮಾಡಿದರು. ನವಜೋಡಿಗೆ ಹೊಸಬಟ್ಟೆ, ಹೂವಿನ ಹಾರ, ಉಂಗುರ ಹಾಗೂ ತಾಳಿಯೊಂದಿಗೆ ಸರಳವಾಗಿ ವಿವಾಹ ನಡೆಸಲಾಯಿತು. ಪತ್ರಕರ್ತ ಕನ್ನೇಶ್ ನಾಯ್ಕ ಮಂತ್ರ ಮಾಂಗಲ್ಯ ನಡೆಸಿಕೊಟ್ಟರು.

‘ ಗಣ್ಯರು ಸಾಕ್ಷಿ ‘
ರಾಷ್ಟ್ರಕವಿ ಕುವೆಂಪು ಅವರ ಆಶಯದ ಮಂತ್ರ ಮಾಂಗಲ್ಯದ ಮದುವೆಗೆ ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಗೌಡರ್, ಸಿದ್ದಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ ಎ.ಜಿ.ನಾಯ್ಕ, ರೈತ ಮುಖಂಡ ವೀರಭದ್ರ ನಾಯ್ಕ, ತಾಪಂ ಮಾಜಿ ಸದಸ್ಯ ನಾಸಿರ್ ಖಾನ್, ರಾಘವೇಂದ್ರ ಕಾವಂಚೂರ, ಕೆ.ಟಿ.ಹೊನ್ನೆಗುಂಡಿ, ಎಂ.ಡಿ.ನಾಯ್ಕ, ಟಿ.ಕೆ.ಎಂ.ಆಜಾದ್, ಅಸ್ಲಾಂ ಸಿದ್ದಾಪುರ, ಚಿತ್ರಕಲಾ ಶಿಕ್ಷಕ ರಾಘವೇಂದ್ರ ನಾಯ್ಕ ಹಾಗೂ ಮಹಿಳೆಯರು ಮದುವೆಯಲ್ಲಿ ಹಾಜರಿದ್ದು ವಧು-ವರನನ್ನು ಹಾರೈಸಿದರು.

‘ ಆಶ್ರಮ ವಾರ್ಷಿಕೋತ್ಸವ ‘
ಇದೇ ವೇಳೆ ಪುನೀತ್ ರಾಜಕುಮಾರ ಆಶ್ರಯಧಾಮ ಅನಾಥಾಶ್ರಮದ ವಾರ್ಷಿಕೋತ್ಸವ ಆಚರಿಸಲಾಯಿತು. ಜತೆಗೆ ಆಶ್ರಮದ ಮುಖ್ಯಸ್ಥೆ ಮಮತಾ ನಾಯ್ಕ ಅವರ ಜನ್ಮದಿನದ ಆಚರಿಸಲಾಯಿತು. ತಾಲೂಕಾ ಪಂಚಾಯ್ತಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಖಾನ್ ಕೂಡ ತಮ್ಮ ಹುಟ್ಟು ಹಬ್ಬದ ನಿಮಿತ್ತ ಆಶ್ರಮವಾಸಿಗಳಿಗೆ ಸಿಹಿ ನೀಡಿ ಜನ್ಮದಿನ ಆಚರಿಸಿಕೊಂಡರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *