ಮಳೆ ಬಾಧಿತರಿಗೆ ನೆರವಿನ ಹಸ್ತ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ಭಾರಿ ಮಳೆ ಹಾಗೂ ಗಾಳಿಯಿಂದ ಹಾನಿಗೊಳಗಾದ ತಾಲೂಕಿನ ವಿವಿಧ ಪ್ರದೇಶಗಳಿಗೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರದ ಚೆಕ್ ಜತೆಗೆ ವೈಯಕ್ತಿಕ ಸಹಾಯ ನೀಡಿದರು.


ಮಳೆಯಿಂದ ಸಂಪೂರ್ಣ ಹಾನಿಯಾದ ಸಿದ್ದಾಪುರ ಪಟ್ಟಣದ ರವೀಂದ್ರನಗರದ ಸರೋಜಾ ಮಾಣಿಕ್ಯಸ್ವಾಮಿ ಇವರ ಮನೆಗೆ ಭೇಟಿ ನೀಡಿ ಪರಿಶೀಲಿಸಿ ಫಲಾನುಭವಿಗೆ ಪರಿಹಾರದ ಚೆಕ್ ಹಾಗೂ ವೈಯಕ್ತಿಕ ಸಹಾಯ ನೀಡಿ ಆದ್ಯತೆ ಮೇರೆಗೆ ಸರ್ಕಾರದ ವಸತಿ ಯೋಜನೆಯಡಿ ಮನೆ ಮಂಜೂರಿ ಮಾಡುವಂತೆ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗೆ ಸೂಚಿಸಿದರು.


ತಾಲೂಕಿನ ಕಲ್ಯಾಣಪುರದಲ್ಲಿ ನೆರೆಹಾವಳಿಯಿಂದ ಐದು ಕುಟುಂಬಗಳಿಗೆ ವಾಸಕ್ಕೆ ಸಮಸ್ಯೆಯಾದ ಹಿನ್ನೆಲೆಯಲ್ಲಿ ಅಕ್ಕುಂಜಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವ್ಯವಸ್ಥೆ ಮಾಡಲಾದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ಥರ ಸಮಸ್ಯೆ ಆಲಿಸಿ ಫಲಾನುಭವಿಗಳಿಗೆ ಶಾಸ್ವತ ಪರಿಹಾರ ಕಲ್ಪಿಸಲು ಯೋಜನೆ ರೂಪಿಸಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸುವಂತೆ ತಹಶೀಲ್ದಾರರಿಗೆ ಸೂಚಿಸಿದರು.


ನಿಪ್ಲಿಯ ಜಲಪಾತ ವೀಕ್ಷಿಸಿ ಪ್ರವಾಸಿಗರು ನೀರಿಗಿಳಿಯದಂತೆ ಸೂಕ್ರ ಕ್ರಮ ಕೈಗೊಳ್ಳಿ ಎಂದು ಸಂಬಂಧಪಟ್ಟ ಗ್ರಾಪಂ ಪಿಡಿಓಗೆ ಸೂಚಿಸಿದರು. ಇಟಗಿ ಪಂಚಾಯ್ತಿ ವ್ಯಾಪ್ತಿಯ ಹರ್ಕನಳ್ಳಿಯ ಮಹಾಬಲೇಶ್ವರ ರಾಮಾ ನಾಯ್ಕ ಇವರ ಮನೆ ಹತ್ತಿರ ಧರೆ ಕುಸಿದ ಪ್ರದೇಶ ವೀಕ್ಷಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಗುಲ್ಲುಮನೆಯಲ್ಲಿ ಕೊಟ್ಟಿಗೆಯ ಮೇಲೆ ಮರ ಬಿದ್ದು ಎರಡು ಜಾನುವಾರು ಮೃತಪಟ್ಟ ಶಿವಾನಂದ ನಾರಾಯಣ ನಾಯ್ಕ ಇವರ ಮನೆಗೆ ಭೇಟಿ ನೀಡಿ ಜಾನುವಾರುಗಳಿಗೆ ಸರ್ಕಾರದ ಪರಿಹಾರದ ಚೆಕ್ ಜತೆ ವೈಯಕ್ತಿಕವಾಗಿ ಧನ ಸಹಾಯ ನೀಡಿದರು.


ನಂತರ ಇಟಗಿಯ ಕಾಂತಿವನದ ಕೆರೆದೇವಿ ಚೌಡಾ ಹಸ್ಲರ್, ಕೊಡ್ತಗಣಿಯ ಕೃಷ್ಣ ತಿಮ್ಮ ಹಸ್ಲರ ಇವರ ವಾಸದ ಮನೆ ಹಾನಿಯಾಗಿರುವುದನ್ನು ವೀಕ್ಷಿಸಿ ಚೆಕ್ ವಿತರಿಸಿ ವೈಯಕ್ತಿಕ ಸಹಾಯ ನೀಡಿ ಧೈರ್ಯ ತುಂಬಿದರು. ಸಿದ್ದಾಪುರ ತಾಲೂಕಿನ ವಾಜಗೋಡ ಪಂಚಾಯ್ತಿ ವ್ಯಾಪ್ತಿಯ ಐಸೂರಿನಲ್ಲಿ ಮಳೆಯಿಂದ ಹಾನಿಯಾದ ದ್ಯಾವರಿ ತಿಮ್ಮ ನಾಯ್ಕ ಅವರ ಮನೆಯನ್ನು ವೀಕ್ಷಿಸಿ ಸರ್ಕಾರದ ಚೆಕ್ ವಿತರಿಸಿ ವೈಯಕ್ತಿಕ ಸಹಾಯ ನೀಡಿದರು.

ದೊಡ್ಮನೆ ಪಂಚಾಯ್ತಿ ವ್ಯಾಪ್ತಿಯ ಹಸ್ವಿಗುಳಿಯ ವೆಂಕಟ್ರಮಣ ತಿಮ್ಮ ನಾಯ್ಕ ರ ಮನೆ ಬಳಿ ಕುಸಿದ ಧರೆ ವೀಕ್ಷಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನಂತರ ಕೆರೆಕುಳಿಯ ಮಂಜುನಾಥ ನಾರಾಯಣ ಗೌಡ ಅವರ ವಾಸದ ಮನೆಗೆ ಹಾನಿಯಾಗಿರುವುದನ್ನು ಪರಿಶೀಲಿಸಿ ಸರ್ಕಾರದ ಚೆಕ್ ಜತೆಗೆ ವೈಯಕ್ತಿಕ ಸಹಾಯ ನೀಡಿದರು.
ಹಾರ್ಸಿಕಟ್ಟಾ ಗ್ರಾಪಂ ವ್ಯಾಪ್ತಿಯ ಭಂಡಾರಕೇರಿ-ಮಲ್ಕಾರ್ ಘಟ್ಟದ ರಸ್ತೆ ಪಕ್ಕ ಕುಸಿದ ಧರೆ, ಹೆಗ್ಗರಣಿ ಪಂಚಾಯ್ತಿ ವ್ಯಾಪ್ತಿಯ ಹೆಗ್ಗರಣಿ ಬಸ್ ತಂಗುದಾಣದ ಬಳಿ ಧರೆ ಕುಸಿದಿರುವುದನ್ನು ವೀಕ್ಷಿಸಿ ತಕ್ಷಣ ತಾತ್ಕಾಲಿಕ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಣಲೆಬೈಲ್ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆರೂರ ಉರ್ದು ಶಾಲೆ, ನಾಡ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿ ಅಬ್ದುಲ್ಲಾ ಹೆರೂರ ಇವರ ಮನೆ ಬಳಿ ಕುಸಿದ ಧರೆ ವೀಕ್ಷಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದರು.
ಈ ವೇಳೆ ತಹಶಿಲ್ದಾರ ಎಂ.ಆರ್.ಕುಲಕರ್ಣಿ, ತಾಪಂ ಇಓ ದೇವರಾಜ ಹಿತ್ತಲಕೊಪ್ಪ, ಸಿಪಿಐ ಕುಮಾರ ಕೆ, ಪ್ರಮುಖರಾದ ವಿ.ಎನ್.ನಾಯ್ಕ, ಬಾಬು ನಾಯ್ಕ, ಉಮೇಶ ನಾಯ್ಕ ಕಡಕೇರಿ, ಎನ್‌.ಟಿ.ನಾಯ್ಕ, ಸಿ.ಆರ್.ನಾಯ್ಕ, ಎಸ್.ಕೆ.ನಾಯ್ಕ ಕಡಕೇರಿ, ಅಣ್ಣಪ್ಪ ನಾಯ್ಕ ಶಿರಳಗಿ, ಜಿ.ಟಿ.ನಾಯ್ಕ, ಮಂಜುನಾಥ ನಾಯ್ಕ ತ್ಯಾರ್ಸಿ, ಹರೀಶ ನಾಯ್ಕ ಹಸ್ವಿಗುಳಿ ಮತ್ತಿತರರು ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *