ಹಿರಿಯ ಪತ್ರಕರ್ತ Shashidhar Bhatt ಅವರ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ: CM Siddaramaiah

ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತರಾದ ಶಶಿಧರ್ ಭಟ್ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಸಿಎಂ ಸಿದ್ದರಾಮಯ್ಯ ಹಾರೈಸಿದ್ದಾರೆ.

journalist Shashidhar Bhatt

ಪತ್ರಕರ್ತ ಶಶಿಧರ್ ಭಟ್

ಬೆಂಗಳೂರು: ಕಿಡ್ನಿ ವೈಫಲ್ಯದಿಂದ ಅನಾರೋಗ್ಯಕ್ಕೀಡಾಗಿರುವ ಹಿರಿಯ ಪತ್ರಕರ್ತ Shashidhar Bhatt ಅವರ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತರಾದ ಶಶಿಧರ್ ಭಟ್ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.

ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ, ಆಸ್ಪತ್ರೆಯ ವೈದ್ಯರ ಜೊತೆಗೂ ಮಾತನಾಡಿ ಶಶಿಧರ್ ಭಟ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು, ಮುತುವರ್ಜಿಯಿಂದ ಅವರ ಆರೈಕೆ ಮಾಡುವಂತೆ ತಿಳಿಸಿದ್ದೇನೆ. ಸಮಾಜದ ಒಳಿತಿಗಾಗಿ ನಿರ್ಭೀತ ಧ್ವನಿಯಾಗಿದ್ದ ಶಶಿಧರ್ ಭಟ್ಟರು ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

journalist Shashidhar Bhatt

ನನ್ನ ಪರವಾಗಿ ಯಾರೂ ಇಲ್ಲ: ಅಳಲು ತೋಡಿಕೊಂಡಿದ್ದ ಪತ್ರಕರ್ತ

ಇನ್ನು ಅನಾರೋಗ್ಯಕ್ಕೆ ತುತ್ತಾಗಿರುವ ಪತ್ರಕರ್ತ ಶಶಿಧರ್ ಭಟ್, ‘ಆಸ್ಪತ್ರೆಯ ಬೆಡ್‌ ಮೇಲಿಂದನೇ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್‌ ಒಂದನ್ನು ಹಾಕಿ, “ನಾನು ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿದ್ದೇನೆ. ಅನಾರೋಗ್ಯ ಸಮಸ್ಯೆ ಈಗ ನನ್ನ ಕಣ್ಣು ತೆರೆಸಿದೆ. ಆಸ್ಪತ್ರೆಯ ಜಗತ್ತು ಎಷ್ಟು ಕ್ರೂರವಾದದ್ದು ಎಂಬುದು ಅರಿವಿಗೆ ಬಂದಿದೆ. ಹಾಗೆಯೇ ನಮ್ಮ ಸುತ್ತ ಇರುವವರು ಈ ಘಳಿಗೆಯಲ್ಲಿ ಯಾರು ನನ್ನವರಲ್ಲ ಎಂಬುದು ಅರ್ಥವಾಗುತ್ತಿದೆ. ಪ್ರೀತಿ, ನಂಬಿಕೆ ಸಂಬಂಧ ಎಲ್ಲ ಸುಳ್ಳು ಎಂಬುದು ಅರ್ಥವಾಗಿದೆ, ಧನ್ಯವಾದಗಳು ”ಎಂದು ನೋವಿನಿಂದ ಹೇಳಿದ್ದರು.

ಶಶಿಧರ್ ಭಟ್ ಅವರ ಈ ಪೋಸ್ಟ್ ಗೆ ಸಾವಿರಾರು ಅಭಿಮಾನಿಗಳು, ಸಹ ಪತ್ರಕರ್ತರು ಕಾಮೆಂಟ್ ಮೂಲಕ ಬೆಂಬಲ ನೀಡಿದ್ದರು. ಪರಸ್ಪರ ಅವರ ಪೋಸ್ಟ್ ಅನ್ನು ಶೇರ್ ಮಾಡಿದ್ದರು. ನಿಮ್ಮ ಜೊತೆ ನಾವೂ ಇದ್ದೇವೆ ಎಂಬ ಧೈರ್ಯ ತುಂಬುವ ಕೆಲಸ ಮಾಡಿದ್ದರು. ಈ ಪೋಸ್ಟ್ ವೈರಲ್ ಆಗುತ್ತಲೇ ಸ್ವತಃ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. (ಕಪ್ರ.ಕಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಶಿಕ್ಷಕರ ದಿನಾಚರಣೆ… ರಂಜಿಸಿದ ಶಿಕ್ಷಕಿಯರು

ಸಿದ್ದಾಪುರದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಕಿಯರ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಪ್ರಾಥಮಿಕ ಶಾಲಾ ಶಿಕ್ಷಕಿಯರ ಸಮೂಹ ಗಾನ, ಡೊಳ್ಳು ನೃತ್ಯಗಳು ಪ್ರೇಕ್ಷಕರನ್ನು...

ಘನತೆ, ಗೌರವದಿಂದ ಯಾವ ಎತ್ತರಕ್ಕೂ ಹೋಗಬಹುದು… ಭೀಮಣ್ಣ ನಾಯ್ಕ

.. ಶಿ ಕ್ಷಕರು ಘನತೆ, ಗೌರವದಿಂದಿದ್ದರೆ ಯಾವ ಎತ್ತರಕ್ಕೂ ಏರಬಹುದು ಎಂದು ಡಾ. ರಾಧಾಕೃಷ್ಣನ್‌ ತೋರಿಸಿದ್ದಾರೆ ಎಂದು ಬಣ್ಣಿಸಿರುವ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ...

ಶಿಕ್ಷಕರ ದಿನಾಚರಣೆ: 31 ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ; ಪಟ್ಟಿ ಬಿಡುಗಡೆ ಮಾಡಿದ Education department

ಸೆ. 5ರಂದು ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯಿಂದ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿರುವವರ ಶಿಕ್ಷಕರ ಪಟ್ಟಿ ಬಿಡುಗಡೆಯಾಗಿದ್ದು ಶಿಕ್ಷಕರಿಗೆ ಕಾರ್ಯಕ್ರಮದಲ್ಲಿ 25 ಸಾವಿರ...

25ನೇ ವರ್ಷಕ್ಕೆ ಕಾಲಿಟ್ಟ ಒಡ್ಡೋಲಗ ಹಿತ್ತಲಕೈ,ಮರುಕಳಿಸಿದ ಶ್ರಾವಣ ಸಂಜೆ ಸಂಸ್ಕೃತಿ ಉತ್ಸವ –

ಸಿದ್ದಾಪುರ. ತಾಲೂಕಿನ ಕ್ರಿಯಾಶೀಲ ನಾಟಕ ತಂಡವಾದ ಒಡ್ಡೋಲಗ ಹಿತ್ತಲಕೈ ಕಳೆದ 25 ವರ್ಷಗಳಿಂದ ರಂಗಭೂಮಿಯಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಸಂಘಟನೆಯು ಕಳೆದ ವಾರಾಂತ್ಯದಲ್ಲಿ ಕವಲಕೊಪ್ಪದ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *