ಒಂದು ರಾಷ್ಟ್ರ ಒಂದು ಚುನಾವಣೆ ಮತ್ತು ಕ್ಷೇತ್ರ ಪುನರ್ ವಿಂಗಡಣೆ ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ

ಭಾರತವು ವಿಶ್ವದ ಅತಿದೊಡ್ಡ ಒಕ್ಕೂಟ ಪ್ರಜಾಪುಭುತ್ವವಾಗಿದೆ. ಭಾರತ ಸಂವಿಧಾನದ ಭಾಗ ಆಗಿರಲಿ ಎಂದು ಪ್ರತಿಪಾದಿಸಿರುವ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆಯ ತತ್ವವು ಈ ಪ್ರಜಾಪ್ರಭುತ್ವದ ಆತ್ಮವಾಗಿದೆ. `ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವವು ಭಾರತದ ಪ್ರಜಾಸತ್ತಾತ್ಮಕ ಮತ್ತು ಒಕ್ಕೂಟ ವ್ಯವಸ್ಥೆಗೆ ಅಪಾಯವನ್ನುಂಟು ಮಾಡುತ್ತದೆ.

ವಿಧಾನಸಭೆ ಅಧಿವೇಶನ

ವಿಧಾನಸಭೆ ಅಧಿವೇಶನ

ಬೆಂಗಳೂರು: ಕರ್ನಾಟಕ ವಿಧಾನಸಭೆಯು ಮುಂಬರುವ “ಒಂದು ರಾಷ್ಟ್ರ, ಒಂದು ಚುನಾವಣೆ” ಪ್ರಸ್ತಾವನೆ ಮತ್ತು ಲೋಕಸಭೆ ಹಾಗೂ ವಿಧಾನಸಭಾ ಕ್ಷೇತ್ರಗಳ ಪುನರ್ ವಿಂಗಡಣೆಯ ವಿರುದ್ಧ ನಿರ್ಣಯಗಳನ್ನು ಗುರುವಾರ ಅಂಗೀಕರಿಸಿದೆ.

2026ರ ಜನಗಣತಿ ಅಥವಾ ಅದರ ನಂತರ ನಡೆಯುವ ಜನಗಣತಿಯ ಆಧಾರದ ಮೇಲೆ ಕೇಂದ್ರ ಸರ್ಕಾರ ಕ್ಷೇತ್ರಗಳ ವಿಂಗಡಣೆಯನ್ನು ನಡೆಸಬಾರದು ಎಂದು ಕರ್ನಾಟಕ ವಿಧಾನಸಭೆ ಒತ್ತಾಯಿಸಿದೆ. ಜನಸಂಖ್ಯೆಯ ಆಧಾರದ ಮೇಲೆ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಸಂದರ್ಭದಲ್ಲಿ ಅದನ್ನು ಗಣನೆಗೆ ತೆಗೆದುಕೊಳ್ಳಬೇಕು.

ಪ್ರತೀ ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಮತ್ತು ಪ್ರತಿ ರಾಜ್ಯದ ವಿಧಾನಸಭೆಗೆ ನಿಗದಿಪಡಿಸಬೇಕಾದ ಸ್ಥಾನಗಳ ಒಟ್ಟು ಸಂಖ್ಯೆಯನ್ನು 1971ರ ಜನಗಣತಿಯನ್ನಾಧರಿಸಿ ನಿರ್ಧರಿಸಬೇಕೆಂದು ಕೇಂದ್ರ ಸರ್ಕಾರವನ್ನು ಈ ಸದನವು ಒತ್ತಾಯಿಸುತ್ತದೆ”.

ಎರಡನೇ ನಿರ್ಣಯದಲ್ಲಿ, ಭಾರತವು ವಿಶ್ವದ ಅತಿದೊಡ್ಡ ಒಕ್ಕೂಟ ಪ್ರಜಾಪುಭುತ್ವವಾಗಿದೆ. ಭಾರತ ಸಂವಿಧಾನದ ಭಾಗ ಆಗಿರಲಿ ಎಂದು ಪ್ರತಿಪಾದಿಸಿರುವ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆಯ ತತ್ವವು ಈ ಪ್ರಜಾಪ್ರಭುತ್ವದ ಆತ್ಮವಾಗಿದೆ. `ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವವು ಭಾರತದ ಪ್ರಜಾಸತ್ತಾತ್ಮಕ ಮತ್ತು ಒಕ್ಕೂಟ ವ್ಯವಸ್ಥೆಗೆ ಅಪಾಯವನ್ನುಂಟು ಮಾಡುತ್ತದೆ.

ಬೇರೆ ಬೇರೆ ರಾಜ್ಯಗಳ ವಿಧಾನಸಭೆಗಳು ಅವುಗಳದ್ದೇ ಆದ ಅಧಿಕಾರ ಅವಧಿಗಳನ್ನು ಹೊಂದಿರುತ್ತವೆ. ಮತ್ತು ಏಕರೂಪ ಚುನಾವಣಾ ವೇಳಾಪಟ್ಟಿಯು ರಾಷ್ಟ್ರೀಯ ವಿಷಯಗಳ ಮೇಲೆ ಹೆಚ್ಚಾಗಿ ಗಮನಹರಿಸುವ ಮತ್ತು ಸ್ಥಳೀಯ ಕಾಳಜಿಗಳನ್ನು ನಿರ್ಲಕ್ಷಿಸುವ ಮೂಲಕ ರಾಜ್ಯಗಳ ಸ್ವಾಯತ್ತತೆಯನ್ನು ದುರ್ಬಲಗೊಳಿಸಬಹುದು. ಸಾಕಷ್ಟು ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದು, ಚುನಾವಣಾ ಸಿಬ್ಬಂದಿಯನ್ನು ನಿರ್ವಹಿಸುವುದು, ಮತದಾರರ ಬೇಸರ, ಕಡಿಮೆಗೊಂಡ ಸರ್ಕಾರದ ಉತ್ತರದಾಯಿತ್ವ ಹಾಗೂ ಆರ್ಥಿಕ ಮತ್ತು ಸಾಮಾಜಿಕ ಅಡತಡೆಗಳು ಏಕಕಾಲಿಕ ಚುನಾವಣೆಗಳಿಗೆ ಸಂಬಂಧಿಸಿದ ಗುರುತರ ಗಂಡಾಂತರಗಳಾಗಿವೆ.

ಹಾಗಾಗಿ ಭಾರತದ ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳು ಮತ್ತು ಒಕ್ಕೂಟ ಸಮಗ್ರತೆಯನ್ನು ರಕ್ಷಿಸಲು ಕಠೋರ ನೀತಿಯನ್ನು ಅನುಷ್ಠಾನಗೊಳಿಸಬಾರದೆಂದು ಕೇಂದ್ರ ಸರ್ಕಾರವನ್ನು ಈ ಸದನವು ಒತ್ತಾಯಿಸುತ್ತದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಅವರು ನಿರ್ಣಯವನ್ನು ಓದಿದರು. ನಂತರ ನಿರ್ಣಯಗಳನ್ನು ಅಂಗೀಕರಿಸಲಾಗಿದೆ ಎಂದು ಸ್ಪೀಕರ್ ಯುಟಿ ಖಾದರ್ ಪ್ರಕಟಿಸಿದರು. (kp.c)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *