ಗುರುಪೂರ್ಣೀಮಾ- ಸಂಗೀತ ಬೈಠಕ್ – ಜಯರಾಮ ಭಟ್ಟ ಹೆಗ್ಗಾರಳ್ಳಿ ಅಪರೂಪದ ವ್ಯಕ್ತಿ


ಸಿದ್ದಾಪುರ
ಭುವನಗಿರಿ,ಕಲ್ಲಾರೆಮನೆಯ ಸುಷಿರ ಸಂಗೀತ ಪರಿವಾರದ ಸಂಯೋಜನೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಭುವನಗಿರಿಯ ಶ್ರೀ ಭುವನೇಶ್ವರಿ ದೇವಾಲಯದಲ್ಲಿ ಗುರುಪೂರ್ಣೀಮಾ ಮತ್ತು ಸಂಗೀತ ಬೈಠಕ್ ಕಾರ್ಯಕ್ರಮ ಜು. ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಶ್ರೀ ಭುವನೇಶ್ವರಿ ದೇವಾಲಯದ ಆಡಳಿತ ಸಮಿತಿ ಅಧ್ಯಕ್ಷ ಶ್ರೀಕಾಂತ ಹೆಗಡೆ ಗುಂಜಗೋಡ ಮಾತನಾಡಿ ಈ ಪ್ರದೇಶದಲ್ಲಿ ಸಂಗೀತದ ಕುರಿತು ಆಸಕ್ತಿಯ ವಾತಾವರಣ ರೂಪಿಸಿದ್ದು ಸುಷಿರ ಸಂಗೀತ ಪರಿವಾರ. ಈ ದೇವಾಲಯದಲ್ಲೂ ಹಲವು ಪ್ರಸಿದ್ಧ ಗಾಯಕರ,ಕಲಾವಿದರ ಕಾರ್ಯಕ್ರಮ ಆಯೋಜಿಸುವದರ ಜೊತೆಗೆ ಸ್ಥಳೀಯ ಪ್ರತಿಭೆಗಳ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು ಅದು ಮುಂದುವರೆಯಲಿ ನಿಶುಲ್ಕದಿಂದ ಈ ಭಾಗದ ಆಸಕ್ತರಿಗೆ ಸಂಗೀತ ಕಲಿಸುತ್ತಿರುವ ಜಯರಾಮ ಭಟ್ಟ ಹೆಗ್ಗಾರಳ್ಳಿ ಅಪರೂಪದ ವ್ಯಕ್ತಿ ಎಂದರು.


ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪತ್ರಕರ್ತ,ಸಾಹಿತಿ ಗಂಗಾಧರ ಕೊಳಗಿ ಮಾತನಾಡಿ ಬುದ್ದಿ ಮತ್ತು ಭಾವ ಎರಡರ ಸಮನ್ವಯ ಸಂಗೀತದಲ್ಲಿದೆ. ಸಂಗೀತದಲ್ಲಿ ಪರಿಣಿತಿ ಪಡೆಯಲು ಬುದ್ದಿ ಬೇಕು. ಅದನ್ನು ಆಸ್ವಾದಿಸಲು ಭಾವ ಸಾಕು. ಗುರುವಿನ ಕುರಿತಾದ ಪೂಜ್ಯಭಾವ, ಭಕ್ತಿ,ಶರಣಾಗತಿಯಂಥ ಆಧ್ಯಾತ್ಮಿಕ ಮೌಲ್ಯಗಳನ್ನು ಸಂಗೀತ ನಮ್ಮಲ್ಲಿ ರೂಪಿಸುತ್ತದೆ. ಸಂಗೀತ ಕಲಿಕೆ ಉಳಿದೆಲ್ಲ ಕಲೆಗಳಿಗಿಂತ ಭಿನ್ನ. ಇಲ್ಲಿ ಗುರು-ಶಿಷ್ಯರ ಸಂಬಂಧ ಅನನ್ನಯವಾದದ್ದು. ಈ ಸಂದರ್ಭದಲ್ಲಿ ಇಲ್ಲಿನ ಸ್ವರ ಗಂಗಾ ತಂಡದ ಆಸಕ್ತರಿಗೆ ಯಾವುದೇ ಶುಲ್ಕ ಪಡೆಯದೇ ಸಂಗೀತ ಪಾಠ ಮಾಡುತ್ತಿರುವ ಹಿರಿಯ ಸಂಗೀತಗಾರ ಜಯರಾಮ ಭಟ್ ಹೆಗ್ಗಾರಳ್ಳಿಯವರಿಗೆ ಗುರುವಂದನೆ ಸಲ್ಲಿಸುತ್ತಿರುವದು ನಮ್ಮ ಪರಂಪರೆಗೆ ಸಲ್ಲುವ ಗೌರವ ಎಂದರು.


ಅಭ್ಯಾಗತರಾಗಿ ಪಾಲ್ಗೊಂಡ ರಂಗನಿರ್ದೇಶಕ ಗಣಪತಿ ಹೆಗಡೆ ಹುಲಿಮನೆ ಮಾತನಾಡಿ ಎಲ್ಲ ಕಲಾ ಪ್ರಕಾರಗಳಿಗೂ ಅಗತ್ಯವಾಗಿರುವ ಸಂಗೀತ ನಮ್ಮ ಜೀವನದಲ್ಲಿ ಹಾಸುಹೊಕ್ಕಾಗಿರುವಂಥದ್ದು. ಸಂಗೀತಗಾರರ ಕುಟುಂಬದ ಜಯರಾಮ ಭಟ್ಟರಿಗೆ ಗೌರವ ಸಲ್ಲಿಸುತ್ತಿರುವದು ನಿಜಕ್ಕೂ ಸಲ್ಲಬೇಕಾದ ಗೌರವ. ಎಲ್ಲ ಕಲಾ ಚಟುವಟಿಕೆಗಳಿಗೆ ದಾನಿಗಳ ಸಹಕಾರ ಅಗತ್ಯ ಎಂದರು.
ಈ ಸಂದರ್ಭದಲ್ಲಿ ಭುವನಗಿರಿಯ ಸ್ವರಗಂಗಾ ತಂಡದ ಸದಸ್ಯೆಯರು ತಮ್ಮ ಗುರುಗಳಾದ ಜಯರಾಮ ಭಟ್ಟರಿಗೆ ಗುರುವಂದನೆ ಸಲ್ಲಿಸಿದರು.
ರಾಜೇಶ್ವರಿ ಭಟ್ ಹಾಗೂ ಶ್ರೀನಿಧಿ ಭಟ್ ಅನಿಸಿಕೆ ವ್ಯಕ್ತಪಡಿಸಿದರು.


ಸ್ವರಗಂಗಾ ತಂಡದವರಿಂದ ಭಕ್ತಿ ಸಂಗೀತ ಹಾಗೂ ಅಜಯ ಹೆಗಡೆ ವರ್ಗಾಸರ (ಹಾರ್ಮೋನಿಯಂ) ಮತ್ತು ನಿತಿನ್ ಹೆಗಡೆ ಕಲಗದ್ದೆ(ತಬಲಾ) ಇವರಿಂದ ಸಂಗೀತ ಕಾರ್ಯಕ್ರಮ ಜರುಗಿತು.
ಸುಷಿರ ಸಂಗೀತ ಪರಿವಾರದ ಸಂಚಾಲಕ ನಾರಾಯಣ ಹೆಗಡೆ ಕಲ್ಲಾರೆಮನೆ ಸ್ವಾಗತಿಸಿ,ಪ್ರಾಸ್ತಾವಿಕ ಮಾತನಾಡಿ ಸಂಸ್ಥೆಯ ಚಟುವಟಿಕೆಗಳ ಕುರಿತು ವಿವರಿಸಿದರು.ಪ್ರೊ|ಪ್ರಶಾಂತ ಹೆಗಡೆ ಭುವನಗಿರಿ ನಿರೂಪಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *